LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಶ್ಲಾಘಿಸಿದ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಸಾವಿರಕ್ಕೂ ಹೆಚ್ಚು ದಿವಸಗಳ ಕಾಲದ ದೇವನಹಳ್ಳಿಯ ರೈತರ ಹೋರಾಟ ಕೊನೆಗೂ ಜಯ ಸಿಕ್ಕಿದೆ. ರೈತ ಶಕ್ತಿ ಎಷ್ಟು ಪ್ರಬಲವಾಗಿದೆ ಎಂಬುದಕ್ಕೆ ಇತ್ತೀಚಿನ ದಿನಮಾನಗಳಲ್ಲಿ ಈ ಹೋರಾಟ ಸಾಕ್ಷಿಭೂತವಾಗಿದೆ. ಇವರುಗಳ ಹೋರಾಟದಲ್ಲಿ ಆಮ್ ಆದ್ಮಿ ಪಕ್ಷವು ನಿರಂತರವಾಗಿ ಜೊತೆಯಲ್ಲಿತ್ತು. ಶಾಂತಿಯುತ ಹೋರಾಟಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ರೈತ ಹೋರಾಟಗಾರರ ಭಾವನೆಗಳಿಗೆ ಗೌರವ ನೀಡಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣ ಹಿಂಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ಮೂಲಕ ಶ್ಲಾಘನೆ ವ್ಯಕ್ತಪಡಿಸುತ್ತಿದ್ದೇನೆ" ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಮುಂದುವರೆದು ಮಾತನಾಡಿದ ಮುಖ್ಯಮಂತ್ರಿ ಚಂದ್ರು " ಕೈಗಾರಿಕೆಗಳ ಅಭಿವೃದ್ಧಿಯ ನೆಪದಲ್ಲಿ ತಲೆತಲಾಂತರದಿಂದ ಕೃಷಿ ಬದುಕನ್ನೇ ಅನುಸರಿಸಿಕೊಂಡು, ಫಲವತ್ತಾದ ಬೆಳೆಗಳನ್ನು ಬೆಳೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣದ ಸಾವಿರಾರು ಎಕರೆ ಇಂದು ರಿಯಲ್ ಎಸ್ಟೇಟ್ ಮಾಫಿಯಾಗಳ ಕಪಿಮುಷ್ಠಿಯಿಂದ ಹೊರ ಬಿದ್ದಿದೆ. ಇನ್ನು ಮುಂದಾದರು ಯಾವುದೇ ಸರ್ಕಾರಗಳು ಬರಡು ಭೂಮಿಗಳನ್ನು ಆಯ್ಕೆ ಮಾಡಿಕೊಂಡು ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗಗಳನ್ನು ನೀಡಬೇಕು.

ರೈತರ ಈ ಶಾಂತಿಯುತ ಹೋರಾಟ ನಮ್ಮ ದೇಶಕ್ಕೆ ಮಾದರಿಯಾಗಿದೆ. ಯಾವುದೇ ರಕ್ತಪಾತಗಳಿಲ್ಲದೆ ಕೊನೆಗೂ ರೈತರ ಹೋರಾಟಕ್ಕೆ ಜಯ ಸಿಕ್ಕಿದೆ. ಆಮ್ ಆದ್ಮಿ ಪಕ್ಷವು ಸದಾಕಾಲ ಕೈಗಾರಿಕೆಗಳ ಅಭಿವೃದ್ಧಿಯ ನೆಪದಲ್ಲಿ ಫಲವತ್ತಾದ ಕೃಷಿ ಜಮೀನುಗಳನ್ನು ಸ್ವಾಧೀನ ಪಡಿಸಿಕೊಳ್ಳುವ ಇಂತಹ ಕುತಂತ್ರಗಳಿಗೆ ವಿರೋಧವನ್ನು ವ್ಯಕ್ತಪಡಿಸುತ್ತದೆ. ರೈತ ಹೋರಾಟದಲ್ಲಿ ಸದಾಕಾಲ ಜೊತೆಯಲ್ಲಿ ಇರುತ್ತದೆ " ಎಂದು ತಿಳಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!