LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

*ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ:*


ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದರು.

*ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ*


ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯನಿಷೇದವಾಗಬೇಕು, ದೇವಸ್ಥಾನದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಲೈಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದರು.

*ಬಿಜೆಪಿಯವರ ಮೇಲೆ ಇಡಿ ದಾಳಿ ಆಗುವುದಿಲ್ಲ*


ಶಾಸಕ ವಿನಯ್ ಕುಲಕರ್ಣಿಯವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿಯವರ ಮೇಲೆ ಯಾವುದೇ ಇಡಿ ದಾಳಿ ಆಗುವುದಿಲ್ಲ.

ಪ್ರಧಾನಿ ಮೋದಿಯವರು ಕಾಶ್ಮೀರ ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ದಾಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಿರುವುದು ಕಾಣುತ್ತಿದೆ ಎಂದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ