LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೆಟ್ರೋಲ್ ಹಾಗೂ ಡೀಸೆಲ್‌ ದರ ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ

ಪ್ರತಿ ಲೀಟರ್ಗೆ 100 ರೂಪಾಯಿ ಏರಿಕೆ ಮಾಡಿ ಜನಸಾಮಾನ್ಯರ ಹೊಟ್ಟೆ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಲೆ ಏರಿಕೆ ಬಿಸಿಯನ್ನು ಮಾಡಿದ್ದಾರೆ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ

news_1778858324_1_244.webp

ನವದೆಹಲಿ/ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತನ್ನ ಆಡಳಿತ ವೈಫಲ್ಯಕ್ಕಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ತಲಾ 3 ರೂ. ಏರಿಕೆ ಮಾಡುವ ಮೂಲಕ ದೇಶದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ. ಇದು ಬೆಲೆ ಏರಿಕೆಯಲ್ಲ, ಭಾರತದ ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೆ ನಡೆಸಿದ ನೇರ ದಾಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್ ಖಾತೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ನಾವು ಅಂದುಕೊಂಡಂತೆ ಕೇಂದ್ರ ಸರ್ಕಾರವು ತನ್ನ ವಿದೇಶಾಂಗ ನೀತಿಯ ವೈಫಲ್ಯ, ಕಳಪೆ ಆರ್ಥಿಕ ನಿರ್ವಹಣೆ ಮತ್ತು ಅಜಾಗರೂಕ ಹಣದುಬ್ಬರದ ನಿರ್ವಹಣೆಯ ಪರಿಣಾಮಗಳನ್ನು ಬಲವಂತವಾಗಿ ದೇಶದ ಜನತೆಯ ತಲೆಯ ಮೇಲೆ ಹೇರುತ್ತಿದೆ. ದೇಶದ ಜನತೆಯ ಹಿತಾಸಕ್ತಿಗಳನ್ನು ಕಾಪಾಡುವ ಬದಲು ಅವರಿಂದಲೇ ಹಣ ಕಿತ್ತುಕೊಂಡು ತನ್ನ ವೈಫಲ್ಯದ ನಷ್ಟ ಭರಿಸುತ್ತಿದೆ.news_1778683050_0_173.webp

ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀ. ಒಂದಕ್ಕೆ 106 ರೂ. ದಾಟಿದೆ. ಡೀಸೆಲ್‌ ದರವು 94 ರೂ. ಆಗಿದೆ. ಈ ಏರಿಕೆಯು ಕೇವಲ ಬಂಕ್‌ಗಳಿಗೆ ಸೀಮಿತಗೊಳ್ಳುವುದಿಲ್ಲ. ಇದರೊಂದಿಗೆ ಸಾರಿಗೆ ವೆಚ್ಚ, ತರಕಾರಿ, ಹಣ್ಣು, ಹಾಲು, ಸೇರಿದಂತೆ ಪ್ರತಿಯೊಂದು ದಿನಬಳಕೆ ವಸ್ತುಗಳ ದರ ಏರಿಕೆಯಾಗುತ್ತದೆ. ಇದರಿಂದ ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಿಗಳು, ಮನೆಯ ಜವಾಬ್ದಾರಿ ಹೊತ್ತ ಮಹಿಳೆಯರು ಹಾಗೂ ಮಧ್ಯಮ ವರ್ಗದವರು  ದೈನಂದಿನ ಬದುಕು ನಡೆಸುವುದು ಮತ್ತಷ್ಟು ದುಸ್ತರವಾಗಲಿದೆ. 

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಕಡಿಮೆಯಿದ್ದಾಗ ಅದರ ಲಾಭವನ್ನು ಮೋದಿ ಸರ್ಕಾರ ಎಂದಿಗೂ ಜನತೆಗೆ ಬಿಟ್ಟುಕೊಡಲೇ ಇಲ್ಲ. ಆಗಲೂ ಜನತೆಯಿಂದ ದೊಡ್ಡ ಮೊತ್ತದ ತೆರಿಗೆಯನ್ನು ಸಂಗ್ರಹಿಸಿ ತನ್ನ ಬೊಕ್ಕಸವನ್ನು ತುಂಬಿಕೊಂಡಿತ್ತು. ಇನ್ನು ದರ ಏರಿಕೆಯಾದಾಗ ಅದರ ಸಂಪೂರ್ಣ ಭಾರವನ್ನು ಜನಸಾಮಾನ್ಯರ ಮೇಲೆ ಹೊರಿಸಿ ಕೈತೊಳೆದುಕೊಳ್ಳುತ್ತಿದೆ. ಇದು ಆಡಳಿತ ನಡೆಸುವ ಕ್ರಮವಲ್ಲ, ಇದು ದೇಶದ ಜನತೆಯ ಮೇಲಿನ ಘೋರ ಶೋಷಣೆಯಾಗಿದೆ. 

ಮೋದಿ ಸರ್ಕಾರವು ಹಣದುಬ್ಬರ ನಿಯಂತ್ರಣ ಮಾಡುವಲ್ಲಿ, ಡಾಲರ್‌ ಎದುರು ರೂಪಾಯಿ ಮೌಲ್ಯದ ಕುಸಿತವನ್ನು ತಡೆಯುವಲ್ಲಿ, ದೇಶದ ಆರ್ಥಿಕ ನಿರ್ವಹಣೆಯಲ್ಲಿ ಹಾಗೂ ಒಟ್ಟಾರೆ ಸಾಮಾನ್ಯ ಜನರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. 

ಪ್ರಧಾನಿ ನರೇಂದ್ರ ಮೋದಿ ತನ್ನ ಉದ್ಯಮಿ ಮಿತ್ರರ ರಕ್ಷಣೆಗೆ ತೋರುವ ಆತುರ, ಕಾಳಜಿ ಹಾಗೂ ಬದ್ಧತೆಯಲ್ಲಿ ಸ್ವಲ್ಪವಾದರೂ ದೇಶದ ಜನತೆಯ ಮೇಲೆ ತೋರಿಸಲಿ ಎಂಬುದು ನಮ್ಮ ಮನವಿ. 

ಪೆಟ್ರೋಲ್‌, ಡೀಸೆಲ್‌ ದರ ತಲಾ 3 ರೂ. ಏರಿಕೆಯ ಜನವಿರೋಧಿ ನಡೆಯನ್ನು ನಾನು ಕಠಿಣವಾಗಿ ವಿರೋಧಿಸುತ್ತಿದ್ದೇನೆ. ತಕ್ಷಣವೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತಿದ್ದೇನೆ. ನಿರಂತರವಾಗಿ ಬೀಳುತ್ತಿರುವ ರೂಪಾಯಿ ಮೌಲ್ಯ, ಆರ್ಥಿಕ ನಿರ್ವಹಣೆಯ ವೈಫಲ್ಯ ಮತ್ತು ಸಾಮಾನ್ಯ ನಾಗರಿಕರ ಕುಟುಂಬಗಳನ್ನು ಸಂಕಷ್ಟಕ್ಕೆ ತಳ್ಳುತ್ತಿರುವುದರ ಹೊಣೆಯನ್ನು ಹೊತ್ತು ನರೇಂದ್ರ ಮೋದಿಯವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಡದಿ ರೈತರ ಪರ ನನ್ನ ಹೋರಾಟ  ಆರಂಭ; ಹೆಚ್.ಡಿ. ದೇವೇಗೌಡರ ಘೋಷಣೆ ಬೆಂ.ಮ.ಸಾ.ಸಂಸ್ಥೆ ನೌಕರರಿಗೆ ವೇತನ ಪರಿಷ್ಕರಣೆಯ ಹಿಂಬಾಕಿ ಮೊತ್ತ ಪಾವತಿಹಟ್ಟಿ ಚಿನ್ನದ ಗಡಿಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿಹಾಳ ಲಾಭ ಹೆಚ್ಚಳ :ಸಿಎಂ ಅಭಿನಂದನೆಕನಕದಾಸರು ಸಾಮಾಜಿಕ ಅವ್ಯವಸ್ಥೆ ಸರಿಮಾಡಲು ಪ್ರಾಮಾಣಿಕ ಪ್ರಯತ್ನದಿಂದ ವಿಶ್ವಮಾನವರಾಗಿ ಕಾಣಬೇಕು: ಸಿಎಂ ಸಿದ್ದರಾಮಯ್ಯಪೆಟ್ರೋಲ್ ಹಾಗೂ ಡೀಸೆಲ್‌ ದರ ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಸರ್ಕಾರಿ ಪರವಾಹಣೆಗೆ ಭೂ ಮಾಪಕರ ಬೇಡಿಕೆ ಈಡೇರಿಕೆಗೆ ಆಗ್ರಹಉಚಿತ 'ರೀ-ನೀಟ್' ಬೆಂಬಲಕ್ಕೆ ನಿಂತ ದೀಕ್ಷಾ ವೇದಾಂತಹಿಜಾಬ್ ವಿಚಾರ ಕೋರ್ಟ್ ನಲ್ಲಿ ಇರುವಾಗಲೇ ಸರ್ಕಾರ ತರಾತುರಿಯಲ್ಲಿ ಆದೇಶ: ಹಿಂದೂ ಪರ ಸಂಘಟನೆಗಳ ಖಂಡನೆದಾವಣಗೆರೆ ಉಪ ಚುನಾವಣೆ ಫಲಿತಾಂಶ ನಂತರ ಕಾಂಗ್ರೆಸ್ಸಿಗೆ ದಿಢೀರ್ ಜ್ಞಾನೋದಯಬಿಡದಿ ಟೌನ್ ಶಿಪ್ ಯೋಜನೆ ವಿರುದ್ಧ ಮತ್ತೆ ದನಿಯೆತ್ತಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ