LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿಗಳ ಸಂತಾಪ

ಬೆಳಗಾವಿ (ಸುವರ್ಣಸೌಧ) ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದು ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿ ಅವರು ಮಾತನಾಡಿದರು.

ಶ್ಯಾಮನೂರು ಶಿವಶಂಕರಪ್ಪ ಅವರು ತಮ್ಮ 63 ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಲಾ ರಾಜಕೀಯದಲ್ಲಿದ್ದರು ಎಂದರು.
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಎಂದರು.

ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಖಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ ಎಂದರು.

*ದಾವಣಗೆರೆಗೆ ಬ್ರಾಂಡ್ ಹೆಸರು ಕೊಟ್ಟರು*
ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶ್ಯಾಮನೂರರು ತಂದುಕೊಟ್ಟರು. ದೀರ್ಘಕಾಲ ಎಐಸಿಸಿ ಖಜಾಂಚಿ ಆಗಿದ್ದರು. ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ದಾವಣಗೆರೆಗೆ ಭೇಟಿ ನೀಡಿದಾಗಲೆಲ್ಲ ಅವರ ಗೆಸ್ಟ್ ಹೌಸ್ ನಲ್ಲಿ ಉಳಿಯುತ್ತಿದ್ದು, ಅವರ ಒತ್ತಾಯದ ಮೇರೆಗೆ ಅವರ ಮನೆಯಲ್ಲಿಯೇ ಊಟ ಮಾಡುತ್ತಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ತಮ್ಮ 75ನೇ ಜನ್ಮದಿನವನ್ನು ದಾವಣಗೆರೆಯಲ್ಲಿಯೇ ಆಚರಿಸಿಕೊಂಡಿದ್ದನ್ನು ಅವರು ಇದೇ ಸಂದರ್ಭದಲ್ಲಿ ನೆನಪಿಸಿಕೊಂಡರು.

*ನೆರವಿನಹಸ್ತ ಚಾಚುತ್ತಿದ್ದರು*
ಶ್ಯಾಮನೂರು ಶಿವಶಂಕರಪ್ಪ ಕಷ್ಟದ ಸಂದರ್ಭಗಳಲ್ಲಿ ಜನರಿಗೆ ಸಹಾಯಹಸ್ತ ಚಾಚುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆರು ಕೋಟಿಗೂ ಹೆಚ್ಚು ವೆಚ್ಚ ಮಾಡಿ ಆಕ್ಸಿಜನ್ ಸರಬರಾಜು ಮಾಡಿದ್ದರು ಎಂದರು.

ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿ ಮಂಡಲದಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ಅವರು ನಮ್ಮ ಈಗಿನ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

15 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದಾಗ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ದೊಡ್ಡ ಕುಟುಂಬ ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದು ಭಗವಂತ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಸಂತಾಪದಲ್ಲಿ ತಿಳಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ