LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ಮನೋಲೋಕ ಕುರುಡಾಗಬಾರದು: ಕೆ.ವಿ.ಪ್ರಭಾಕರ್

ಬೆಂಗಳೂರು: ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ ಎಂದು ಮುಖ್ಯಮಂತಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು.
ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ "ಮಕ್ಕಳ ಜಾತ್ರೆ" ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರಗಳಲ್ಲಿ ಇರುವ ಮಕ್ಕಳು ಮಣ್ಣಿನಿಂದ ಬೇರ್ಪಟ್ಟು, ನೆಲದ ಆಟ ಪಾಠಗಳಿಂದ ದೂರ ಆಗಿದ್ದಾರೆ. ವೃದ್ಧಾಶ್ರಮಗಳು ಹೆಚ್ಚಾಗುತ್ತಾ ಆಜ್ಜ-ಅಜ್ಜಿ ಕತೆಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ.
ಜೊತೆಗೆ ತಮ್ಮ ಆಟದ ಸಾಮಾನುಗಳನ್ನು ತಾವೇ ಸೃಷ್ಟಿಸಿಕೊಳ್ಳುವ ಕ್ರಿಯಾಶೀಲತೆಯೂ ಕಾಣೆಯಾಗಿ, ಪ್ಲಾಸ್ಟಿಕ್ ಆಟದ ಸಾಮಾನುಗಳು, ಬ್ಯಾಟರಿ ಚಾಲಿತ ಆಟದ ಸಾಮಾನುಗಳ ಸಹವಾಸದಲ್ಲಿ ಮಕ್ಕಳ ಮನೋಲೋಕ ಹಿಗ್ಗುವ ಬದಲಿಗೆ ಕುರುಡಾಗುತ್ತಿದೆ ಎಂದು ಆತಂಕ
ವ್ಯಕ್ತಪಡಿಸಿದರು.
ಮಕ್ಕಳ ತಲೆಗಳೊಳಗೆ ರಾಗಿರೊಟ್ಟಿ ಬದಲಿಗೆ ಬರ್ಗರ್, ಜೋಳದ ರೊಟ್ಟಿ ಬದಲಿಗೆ ಪಿಜ್ಜಾ, ಮುದ್ದೆ ಬದಲಿಗೆ ಪಾಸ್ತಾ, ಡೋನಟ್ ತುಂಬಿದ್ದು ಕೂಡ ಕೆಟ್ಟ ಸಾಂಸ್ಕೃತಿಕ ರಾಜಕಾರಣ, ಇದನ್ನು ಬಹಳ ಆಳವಾಗಿ ಮತ್ತು ಗಂಭೀರವಾಗಿ ಯೋಚಿಸುವ
ಅಗತ್ಯವಿದೆ. ಇದನ್ನು ಜವಾಹರಲಾಲ್ ನೆಹರೂ ಅವರು ಮನಗಂಡಿದ್ದರು. ಮಕ್ಕಳ ದೃಷ್ಟಿಕೋನದಲ್ಲಿ ದೇಶದ ರ ಅಭಿವೃದ್ಧಿ ಮತ್ತು ಪ್ರಗತಿಯ ನೀಲನಕ್ಷೆ ನೆಹರೂ ಅವರು ಸಿದ್ಧಪಡಿಸಿದ್ದರು. ಈ ನೀಲನಕ್ಷೆಯ ಭಾಗವೇ ಜವಾಹರ ಬಾಲ ಭವನ.
ಕುಟುಂಬ, ಸಮಾಜ, ಸ್ನೇಹಿತರಿಂದ ಬೇರ್ಪಡಿಸುವ ವಿಡಿಯೋಗೇಮ್ ಗಳು ಹಿಂಸಾತ್ಮಕ ಮನೋಭಾವ, ಕೋಪ, ಅಸಹನೆ, ಆಕ್ರಮಣಶೀಲತೆಯನ್ನು ತುರುಕುತ್ತವೆ. ಇಂಥಾ ಮನಸ್ಥಿತಿಯ ಮಕ್ಕಳು ಭವಿಷ್ಯದಲ್ಲಿ ಹೇಗೆ ರೂಪುಗೊಳ್ಳಲು ಸಾಧ್ಯ? ಹೈಸ್ಕೂಲು ಮಟ್ಟದಲ್ಲೇ ಈ
ಪಿಡುಗು ಹೆಚ್ಚಾಗುತ್ತಿರುವುದಕ್ಕೆ ಏನು ಕಾರಣ ಎನ್ನುವುದನ್ನು ನಾವು ಆಲೋಚಿಸಬೇಕಿದೆ ಎಂದರು.
ನೆಹರೂ ಅವರು, "ಮಕ್ಕಳು ತೋಟದಲ್ಲಿರುವ ಮೊಗ್ಗುಗಳಂತೆ, ಈ ಮೊಗ್ಗುಗಳನ್ನು ಎಚ್ಚರಿಕೆಯಿಂದ ಪ್ರೀತಿಯಿಂದ ಪೋಷಿಸಬೇಕು, ಆಗಷ್ಟೆ ಜವಾಬ್ದಾರಿಯುತ ನಾಗರಿಕರು ರೂಪುಗೊಳ್ಳುತ್ತಾರೆ ಎನ್ನುವ ಸ್ಪಷ್ಟವಾದ ವೈಜ್ಞಾನಿಕ ತಿಳಿವಳಿಕೆ ಮತ್ತು ದೂರ ದೃಷ್ಟಿ ಯಿಂದ ಬಾಲಭವನ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಬಿ.ಆರ್.ನಾಯ್ಡು ಅವರು ಬಾಲಭವನದ ಅಧ್ಯಕ್ಷರಾಗುವುದಕ್ಕೂ ಮೊದಲು ನನಗೂ ಬಾಲಭವನದ ಸಾಧ್ಯತೆಗಳು ಮತ್ತು ಅವಕಾಶಗಳ ಬಗ್ಗೆ ಹೆಚ್ಚು ತಿಳಿದಿರಲಿಲ್ಲ  ಎಂದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ