
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರ ಪಾಲಿಕೆ ರೂಪಿಸುವ ಉದ್ದೇಶದಿಂದ ಹಾಗೂ ಸ್ವಚ್ಛ ಸರ್ವೇಕ್ಷಣ 2025-26 ರ ಶ್ರೇಯಾಂಕದಲ್ಲಿ ಉತ್ತಮ ಸ್ಥಾನ ಗಳಿಸುವ ನಿಟ್ಟಿನಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ರೂಪಿಸಲಾದ ಕಾರ್ಯ ಯೋಜನೆಯ (ಆಕ್ಷನ್ ಪ್ಲಾನ್) ಅನ್ವಯ 7 ನೇ ಭಾಗವಾಗಿ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 27 ಶೌಚಾಲಯಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಹಾಗೂ ಸುತ್ತಮುತ್ತ ತ್ಯಾಜ್ಯ ಹಾಕದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.
ಸ್ವಚ್ಛತಾ ಕಾರ್ಯದಲ್ಲಿ ಒಟ್ಟು 159 ಪೌರಕಾರ್ಮಿಕರು ಹಾಗೂ 71 ಜನ ಇತರೆ ಸ್ವಚ್ಛತೆ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. *ಈ ಕಾರ್ಯಾಚರಣೆಯಲ್ಲಿ ಸುಮಾರು 4.77 ಕ್ವಿಂಟಲ್ ತ್ಯಾಜ್ಯವನ್ನು ಸಂಗ್ರಹಿಸಿ* ಸುರಕ್ಷಿತವಾಗಿ ವಿಲೇವಾರಿ ಮಾಡಲಾಗಿದೆ.
ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನಲ್ಲಿ ಕಸದಿಂದ ತುಂಬಿ ತುಳುಕುತ್ತಿತ್ತು ಇದನ್ನು ಮನಗೊಂಡ ಪಾಲಿಕೆ ಆಯುಕ್ತರು ಬೇಸಿಗೆಯಲ್ಲಿ ನೈರ್ಮಲ್ಯವನ್ನು ಕಾಪಾಡುವ ದೃಷ್ಟಿಯಿಂದ, ರೋಗರು ಜನಗಳು ಹರಡುದಂತೆ ಎಚ್ಚರವಹಿಸಿ ವಿನೂತನ ಕಾರ್ಯಗೊಂಡಿದ್ದಾರೆ.

ಅಭಿವೃದ್ಧಿ *ಅಪರ ಆಯುಕ್ತರಾದ ಶ್ರೀ ದಲ್ಜಿತ್ ಕುಮಾರ್ ರವರ ನೇತೃತ್ವದಲ್ಲಿ ನಡೆದ ಈ ಸ್ವಚ್ಛತಾ ಅಭಿಯಾನದಲ್ಲಿ* ಸಂಬಂಧಿತ ವಿಭಾಗದ ಎ.ಜಿ.ಎಂ ಗಳು ಅಧಿಕಾರಿಗಳು, ಪೌರಕಾರ್ಮಿಕರು ಹಾಗೂ ಇತರೆ ಸಿಬ್ಬಂದಿಗಳು ಭಾಗಿಯಾಗಿದ್ದರು.