LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಯನಗರ ಬಿಡಿಎ  ಸುತ್ತ ಮುತ್ತ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯ

ಬೆಂಗಳೂರು: ನಗರದ ದಕ್ಷಿಣ ವಲಯದ ವ್ಯಾಪ್ತಿಗೆ ಬರುವ ಜಯನಗರ ವಿಭಾಗದ ಜಯನಗರ ವಾಣಿಜ್ಯ ಸಂಕೀರ್ಣದ 9ನೇ ಮುಖ್ಯರಸ್ತೆ, 10ನೇ ಮುಖ್ಯಸ್ತೆ ಹಾಗೂ 27ನೇ ಅಡ್ಡರಸ್ತೆ, 27ನೇ ಎ ಅಡ್ಡರಸ್ತೆ, 30ನೇ ಅಡ್ಡರಸ್ತೆ ಸುತ್ತಮುತ್ತಲಿನ ರಸ್ತೆಗಳ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಚರಣೆಯನ್ನು ನಡೆಸಲಾಯಿತು.

ಉಚ್ಛ ನ್ಯಾಯಾಲಯ ಹೊರಡಿಸಿರುವ ಆದೇಶದನುಸಾರ ಮತ್ತು ಪಾಲಿಕೆ ಮುಖ್ಯ ಆಯುಕ್ತರು ಬಿಬಿಎಂಪಿ ರವರ ಆದೇಶದಂತೆ ಜಯನಗರ ವಾಣಿಜ್ಯ ಸಂಕೀರ್ಣದ 9ನೇ ಮುಖ್ಯರಸ್ತೆ, 10ನೇ ಮುಖ್ಯಸ್ತೆ ಹಾಗೂ 27ನೇ ಅಡ್ಡರಸ್ತೆ, 27ನೇ ಎ ಅಡ್ಡರಸ್ತೆ, 30ನೇ ಅಡ್ಡರಸ್ತೆ ಸುತ್ತಮುತ್ತಲಿನ ರಸ್ತೆಗಳ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಚರಣೆಯನ್ನು ನಡೆಸಲಾಗಿದ್ದು, ಪಾದಚಾರಿ ಮಾರ್ಗದಲ್ಲಿ ಇಟ್ಟಿರುವ ಅನಧಿಕೃತ ಪೆಟ್ಟಿಗೆ ಅಂಗಡಿ, ಅಂಗಡಿ ಮುಂಗಟ್ಟುಗಳು, ಅನುಪಯುಕ್ತ ತಳ್ಳುವ ಗಾಡಿಗಳು, ಹಣ್ಣಿನ ಬಾಕ್ಸ್‌ಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅನುವುಮಾಡಲಾಯಿತು.

ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿದ್ದ 32 ಅಂಗಡಿ ಮಳಿಗೆಯನ್ನು, ತಳ್ಳುವ ಗಾಡಿ, ಹಣ್ಣಿನ ವ್ಯಾರಿಗಳ ಕಟ್ಟಡ, ಶೆಡ್ ಗಳನ್ನು ಜೆಸಿಬಿ ಮೂಲಕ ತೆರವು ಮಾಡಲಾಯಿತು. ಪಳೆಯುವಳಿಕೆಯನ್ನು ಬೈರಸಂದ್ರದ ಮೈದಾನದಲ್ಲಿ ಸಂಗ್ರಹಿಸಿದ್ದು, ಒಟ್ಟಿಗೆ ಎಲ್ಲವನ್ನೂ ಬೇರೆಡೆಗೆ ಕೊಂಡೊಯ್ಯಲಾಗುತ್ತದೆ ಎಂದು  ತಿಳಿಸಿದರು.

ಅಂಗಡಿ ಮುಂಗಟ್ಟುಗಳನ್ನು ತೆರವುಗೊಲಿಸುವ ವೇಳೆ ಕೆಲವರು ನಮಗೆ ಬಿಬಿಎಂಪಿಯಿಂದಲೆ ಪರವಾನಿಗೆ ನೀಡಲಾಗಿದೆ, ಕಾಗದ ಪತ್ರಗಳು ಇವೆ, ನಮಗೆ ಮುಂದೆ ಏನು ಮಾಡಬೇಕು ಎಂದು ತಿಳಿಯುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡರು.

ಕಾರ್ಯಾಚರಣೆ ನಡೆಯುವ ಮುನ್ನ ವ್ಯಾಪಾರಿಗಳ ಗಮನಕ್ಕೆ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡದಂತೆ ಧ್ವನಿವರ್ಧಕ ಮುಖಾಂತರ ತಿಳಿಸಲಾಗಿದ್ದರೂ ಕೂಡ ಮೇಲ್ಕಾಣಿಸಿದ ರಸ್ತೆಗಳಲ್ಲಿ ಸುಮಾರು 1.00 ಕೀ. ಮೀಟರ್ ರಷ್ಟು ಉದ್ದದ ಪಾದಚಾರಿ ಹಾಗೂ ರಸ್ತೆಯಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ಈ ವೇಳೆ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಆರೋಗ್ಯಾಧಿಕಾರಿಗಳು, ಮಾರುಕಟ್ಟೆ ವಿಭಾಗದ ಅಧಿಕಾರಿಗಳು, ಪೋಲಿಸ್ ಅಧಿಕಾರಿಗಳು/ ಸಂಚಾರಿ ಪೋಲಿಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಮಾರ್ಷಲ್‌ಗಳು, ಗ್ಯಾಂಗ್‌ಮನ್‌ಗಳು ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ