ಬೆಂಗಳೂರು : ಬೆಂಗಳೂರಿನ ಅಸ್ಮಿತೆಯಾಗಿರುವ 160 ವರ್ಷಗಳ ಇತಿಹಾಸವಿರುವ 'ಕುಮಾರಕೃಪಾ' ಪಾರಂಪರಿಕ ಕಟ್ಟಡವನ್ನು @DKShivakumar ಅವರು ಸ್ವಾರ್ಥಕ್ಕಾಗಿ ಮಾರ್ಪಡಿಸುತ್ತಿರುವುದು ಖಂಡನೀಯ ಮತ್ತು ಹೇಯ.
ಕಾವೇರಿ, ಅನುಗ್ರಹ ನಿವಾಸಗಳಿದ್ದರೂ ಇತಿಹಾಸವನ್ನು ಧ್ವಂಸಗೊಳಿಸಲು ಹೊರಟಿರುವ ಈ ನಡೆ ಉದ್ಧಟತನ ಅಷ್ಟೇ ಅಲ್ಲ, ಮೂರ್ಖತನದ ಪರಮಾವಧಿ!
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ತಂಗಿದ್ದ, ದಿವಾನ್ ಕೆ. ಶೇಷಾದ್ರಿ ಅಯ್ಯರ್ ಅವರ ನೆನಪಿನ "ಕುಮಾರಕೃಪ" ಪಾರಂಪರಿಕ ಕಟ್ಟಡವನ್ನು ಕೇವಲ ವೈಯಕ್ತಿಕ ತೆವಲಿಗಾಗಿ, ಗೃಹ ಕಚೇರಿ ಮಾಡಿಕೊಳ್ಳಲು ಮಾರ್ಪಾಡು ಮಾಡುತ್ತಿರುವುದು ಇತಿಹಾಸಕ್ಕೆ ಬಗೆಯುವ ಮಹಾದ್ರೋಹ.
'ಕುಮಾರಕೃಪ' ಯಾರ ವೈಯಕ್ತಿಕ ಆಸ್ತಿಯೂ ಅಲ್ಲ, ಅದು ಇತಿಹಾಸದ ಹೆಗ್ಗುರುತು. ಪಾರಂಪರಿಕ ಕಟ್ಟಡಗಳ ರಕ್ಷಣೆ ಮಾಡಬೇಕಾದವರೇ ಅದರ ವಿನಾಶಕ್ಕೆ ನಿಂತಿರುವುದು ವಿಪರ್ಯಾಸ.
ಗೃಹ ಕಚೇರಿ ನೆಪದಲ್ಲಿ ಅದರ ಮೂಲಸ್ವರೂಪಕ್ಕೆ ಧಕ್ಕೆ ತರುತ್ತಿರುವುದು ಅಕ್ಷಮ್ಯ. ಮುಖ್ಯಮಂತ್ರಿಗಳೇ, ಪಾರಂಪರಿಕ ಕಟ್ಟಡಗಳಿಗೆ ಕೈ ಹಾಕಬೇಡಿ! ಈ ಕೂಡಲೇ ನವೀಕರಣ ಕಾಮಗಾರಿಯನ್ನು ನಿಲ್ಲಿಸಿ !