LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು.

ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಮೆಚ್ಚುಗೆ ಸೂಚಿಸಿದರು.

ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.

ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.

ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು.

ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.

ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ,
ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು "ಇವ ನಮ್ಮವ" ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ