LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಲಗಾರರಿಗೆ ಕಿರುಕುಳ ನೀಡಿದರೆ ಕ್ರಮ: ಸಿಎಂ ಸಿದ್ದರಾಮಯ್ಯ ವಾರ್ನಿಂಗ್

ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದ್ದು ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.

ಸುದ್ದಿಗೋಷ್ಠಿಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯ ಮುಖ್ಯಾಂಶಗಳು:

• ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ.

• ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ.

• ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಕ್ರಮ. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು.

• ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ.‌ ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.

• ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ, ಹಾಗೂ ಮೈಕ್ರೋ ಫೈನಾನ್ಸ್‌ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು.

• ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚನೆ.

• Banning of unregulated lending Activities ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.

• ಸಾಲ ವಸೂಲಾತಿ ಕುರಿತಾಗಿ ಆರ್‌ ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು; ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು. ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ.

• ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್‌ ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ? ಇದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುವುದು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!