ಬೆಂಗಳೂರು :ಕಾಂಗ್ರೆಸ್ ನ ಹಿರಿಯ ನಾಯಕ ರೆಹಮಾನ್ ಖಾನ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಹಮಾನ್ ಖಾನ್ ಅವರನ್ನು ಜಯನಗರದ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದರು.
ಅನಾರೋಗ್ಯದ ಕಾರಣ ರೆಹಮಾನ್ ಖಾನ್ ಅವರು ಹಲವು ದಿನಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ಮುಖ್ಯಮಂತ್ರಿ ಸಚಿವ ಸಂಪುಟದ ಸಹೋದ್ಯೋಗಿಗಳು ಸಹ ಸಿಎಂ ಜೊತೆ ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡಿದರು.
ಅನಾರೋಗ್ಯದಿಂದ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು, ಈ ವೇಳೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಚಿವ ಭೈರತಿ ಸುರೇಶ್, ವಿಧಾನಸಭೆಯ ಸಚೇತಕ ಅಶೋಕ ಪಟ್ಟಣನವರು ಸೇರಿದಂತೆ ರಾಮನ ಖಾನ್ ಅವರ ಪುತ್ರ ಅನೇಕರು ಉಪಸ್ಥಿತರಿದ್ದರು.