LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖಾಸಗಿ ಹೋಟೆಲ್ ನಲ್ಲಿ 2 ದಿನಗಳ ಕಾಲ CMA ವಾರ್ಷಿಕ ಸಮ್ಮೇಳನ

ಬೆಂಗಳೂರು: ವಿಕಸಿತ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಿ ಸ್ವಾಮ್ಯದ ಡಿ ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟ್ಸ್ ಆಫ್ ಇಂಡಿಯಾದ ಬೆಂಗಳೂರು, ಮೈಸೂರು, ಮಂಗಳೂರು ಶಾಖೆಯಿಂದ ನಗರದಲ್ಲಿ ಎರಡು ದಿನಗಳ ಕಾಲ ಸಮ್ಮೇಳನ ಹಮ್ಮಿಕೊಳ್ಳಲಾಯಿತು, ಇಂದು ಕೊನೆಯ ದಿನವಾಗಿದೆ.

ನಗರದ ಖಾಸಗಿ ಹೋಟೆಲ್ನಲ್ಲಿ ಆಯೂಜಿಸಲಾಗಿದ್ದ ಕರ್ನಾಟಕ ಸಿಎಂಎ ವಾರ್ಷಿಕ ಸಮ್ಮೇಳನ 2024ರಲ್ಲಿ ಸೆಂಟ್ರಲ್ ಟ್ಯಾಕ್ಸ್ ಆಡಿಟ್ 1 ವಿಭಾಗದ ಆಯುಕ್ತ ಎಂ ವಿ ಬದ್ರಿ ಪ್ರಸಾದ್ ಸಮ್ಮೇಳನ ಉದ್ಘಾಟಿಸಿದರು, ಇನ್ನು ಐಸಿಎಂಎಐ ಮಾಜಿ ಅಧ್ಯಕ್ಷ ಜಿ ಎನ್ ವೆಂಕಟರಮನ್ ಮರಿತರು ಗಣ್ಯರು ಇದೇ ವೇಳೆ ಉಪಸ್ಥಿತರಿದ್ದರು.

ಇನ್ನು ಸಮಾವೇಶದಲ್ಲಿ ವಿಕಸಿತ ಭಾರತ ನಿರ್ಮಾಣಕ್ಕಾಗಿ ಉತ್ಪಾದನೆ, ತಂತ್ರಜ್ಞಾನ, ನಾವಿನ್ಯತೆ ಜಾಗತಿಕ ಆರ್ಥಿಕ ಪರಿಸ್ಥಿತಿ, ಭಾರತೀಯ ನಾಯಕತ್ವದ ಯಶೋಗಾಥೆ ಕೃಷಿ ಮತ್ತು ವಿಮಾನಯಾನ ಸುಸ್ಥಿರ ಅಭಿವೃದ್ಧಿ ಕುರಿತಾದ ಗೋಷ್ಠಿಗಳು ನಿರಂತರವಾಗಿ ನಡೆದವು. ದಿ ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆನ್ಸಿ ಆಫ್ ಇಂಡಿಯಾ ಮತ್ತು ಸಾಗರ್ ಆಸ್ಪತ್ರೆಗಳ ಸಹಯೋಗದೊಂದಿಗೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಒಪ್ಪಂದಕ್ಕೆ ಇದೇ ವೇಳೆ ಸಹಿಯನ್ನು ಸಹ ಹಾಕಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಬೆಂಗಳೂರು ಘಟಕದ ಅಧ್ಯಕ್ಷ ಬಿ ದೇವರಾಜುಲು, ಮೈಸೂರು ಅಧ್ಯಕ್ಷ ಟಿ ಆರ್ ತ್ರಿನೇಶ್, ಬೆಂಗಳೂರು ಚಾಪ್ಟರ್ ಕಾರ್ಯದರ್ಶಿ ಅಭಿಜಿತ್ , ಎಸ್ ಜೈನ್ ದಕ್ಷಿಣ ಭಾರತದ ಪ್ರಾದೇಶಿಕ ವಿಭಾಗದ ಖಜಾಂಚಿ ಗಿರೀಶ್ ಕೆ, ಕೇಂದ್ರೀಯ ಮಂಡಳಿಯ ಸದಸ್ಯ ಸಿಎಂಎ ಸುರೇಶ್ ಆರ್ ಗುಂಜಲ್ಲಿ ಕಾರ್ಯಕ್ರಮದಲ್ಲಿ ಇದೇ ವೇಳೆ ಉಪಸ್ಥಿರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ