ಬೆಂಗಳೂರು: ಬೆಂಗಳೂರು ಗ್ರಾಮಾಂತರದಲ್ಲಿ ವಕೀಲರಿಗೆ ರಕ್ಷಣೆಯ ಕೊರತೆ ಎದುರಾಗಿದ್ದು ಹಲ್ಲೆ, ಕೊಲೆ,ಕೊಲೆಯತ್ನ ಕೃತ್ಯಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕಾನೂನಿನ ಚೌಕಟ್ಟು ಬಿಗೊಳಿಸಬೇಕು ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರು ತಿಳಿಸಿದರು.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ವೈಟ್‌ಫೀಲ್ಡ್‌ನ ವಕೀಲರಾದ ಮಂಜುನಾಥ್, ಅನ್ನಪೂರ್ಣೇಶ್ವರಿ ನಗರದ ವಕೀಲರಾದ ಶ್ರೀ ಶ್ರೀರಾಮ್ ಅವರ ಬರ್ಬರ ಹತ್ಯೆ ಹಾಗೂ ಗೌರಿಬಿದನೂರಿನ ವಕೀಲರಾದ ಶ್ರೀ ಪೆಂಕಟರಮಣ ಸನ್ನಕ್ಕಿ ಅವರ ಮೇಲೆ ನಡೆದ ಕೊಲೆ ಯತ್ನದ ಘಟನೆಯನ್ನು ಬೆಂಗಳೂರು ವಕೀಲರ ಸಂಘವು ತೀವ್ರವಾಗಿ ಖಂಡಿಸುತ್ತದೆ.
ವಕೀಲರು ತಮ್ಮ ವೃತ್ತಿಯನ್ನು ನಿರ್ಭೀತಿಯಿಂದ ಹಾಗೂ ನುರಕ್ಷಿತವಾಗಿ ನಿರ್ವಹಿಸಲು ಅಗತ್ಯವಾದ ಭದ್ರತೆಯ ಕೊರತೆಯನ್ನು ಖಂಡಿಸಿ, ವಕೀಲರ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಿ ಸಮಗ್ರವಾದ ವಕೀಲರ ರಕ್ಷಣಾ ಕಾಯ್ದೆಯನ್ನು ಕಾರಿಗೆ ತರಬೇಕೆಂದು ಒತ್ತಾಯಿಸಿದರು.
ವಕೀಲರ ಮೇಲೆ ರಾಜ್ಯದಲ್ಲಿ ನಡೆಯುತ್ತಿರುವ ದೌರ್ಜನ್ಯದಬ್ಬಾಳಿಕೆಯ ವಿರುದ್ಧ, ದಿನಾಂಕ 29-10-2026 ರಂದು ನಡೆದ ಬೆಂಗಳೂರು ವಕೀಲರ ಸಂಘದ ವಿಶೇಷ ಸದಸ್ಯರಸಭೆಯಲ್ಲಿ ಪ್ರತಿಭಟನೆ ನಡೆಸಲು ನಿರ್ಣಯಿಸಲಾಗಿದೆ ಎಂದರು.
ಈ ಹಿನ್ನೆಲೆಯಲ್ಲಿ, ದಿನಾಂಕ 03-11-2026, ಮಂಗಳವಾರದಂದು ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರವಿದ್ದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಆದ್ದರಿಂದ, ಕರ್ನಾಟಕ ರಾಜ್ಯದ ಎಲ್ಲಾ ವಕೀಲರ ಸಂಘಗಳು ಈ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಸಹಕಾರ ಮತ್ತು ಬೆಂಬಲವನ್ನು ನೀಡಬೇಕೆಂದು ಬೆಂಗಳೂರು ವಕೀಲರ ಸಂಘವು ವಿನಂತಿಸುತ್ತದೆ.
ಇನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಹೆಚ್ ವಿ ಪ್ರವೀಣ್ ಗೌಡ, ಉಪಾಧ್ಯಕ್ಷರಾದ ಗಿರೀಶ್ ಕುಮಾರ್, ಖಜಾಂಚಿ ಶ್ವೇತಾ ರವಿಶಂಕರ್, ಹಿರಿಯ ವಕೀಲರಾದ ಹಿರೇಮಠ, ಸೇರಿದಂತೆ ಬೆಂಗಳೂರು ನಗರ ವಕೀಲರ ಸಂಘದ ಅಧ್ಯಕ್ಷರು ಹಾಗೂ ಸಂಘದ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು.