LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರಾದ ಅನಂತ್ ನಾಗ್ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

ಕನ್ನಡಿಗರಿಗೆ ಹೆಮ್ಮೆಯಾಗಿದೆ ಎಂದ ಕೇಂದ್ರ ಸಚಿವರು, ಸಹಜ ಅಭಿನಯ, ಅಭಿವ್ಯಕ್ತಿಗೆ ಮತ್ತೊಂದು ಹೆಸರೇ ಅನಂತ್ ನಾಗ್

ನವದೆಹಲಿ: ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಪಾತ್ರರಾಗಿರುವ ಹಿರಿಯ ನಟ ಅನಂತ್ ನಾಗ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ.news_1789566304_0_741.webp

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಪಾತ್ರರಾಗಿರುವ ಕನ್ನಡನಾಡಿನ ಹೆಮ್ಮೆಯ ನಟರಾದ ಅನಂತ್ ನಾಗ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. 

ಅನಂತ್ ನಾಗ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟರು ಹಾಗೂ ಸಹಜ ಅಭಿನಯ, ಅಭಿವ್ಯಕ್ತಿಗೆ ಮತ್ತೊಂದು ಹೆಸರು. ಭಾರತೀಯ ಚಿತ್ರರಂಗದಲ್ಲಿ ಅಪರೂಪದ ಪ್ರತಿಭೆ. ಅಂತಹ ಸಾಧಕರಿಗೆ ದಾದಾಸಾಹೇಬ್ ಫಾಲ್ಕೆ ಗೌರವ ಸಂದಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ವರನಟ ಡಾ.ರಾಜ್‌ಕುಮಾರ್ ಅವರ ನಂತರ ಕನ್ನಡ ಭುವನೇಶ್ವರಿಯ ಕೀರ್ತಿ ಕಿರೀಟಕ್ಕೆ ಮತ್ತೊಂದು ಗರಿ ಮುಡಿಸಿದ ಹೆಗ್ಗಳಿಕೆ ಅವರದ್ದಾಗಿದೆ. ಅವರಿಗೆ ಶುಭಾಶಯಗಳನ್ನು ಕೋರುತ್ತಾ, ಮುಂದಿನ ದಿನಗಳಲ್ಲಿ ಅವರಿಂದ ಕನ್ನಡ ಚಿತ್ರರಂಗಕ್ಕೆ, ನಾಡಿಗೆ ಒಳ್ಳೆಯದಾಗಲಿ ಎಂದು ಆಶಿಸುತ್ತೇನೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IIPM ಬೆಂಗಳೂರಿನ 21ನೇ ಘಟಿಕೋತ್ಸವ: 343 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ಪ್ರದಾನಹಿರಿಯ ನಟ ಅನಂತನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಸಚಿವ  ವಿಜಯಾನಂದ ಕಾಶಪ್ಪನವರ್ ಅಭಿನಂದನೆದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರಾದ ಅನಂತ್ ನಾಗ್ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ದಿ ಕೈಗೊಳ್ಳಿ, ಇಲ್ಲವೇ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕತೆ ಮಾಡಿ: ಪಾಟೀಲ್ ನರಿಬೋಳ ಶುಕ್ರ ಗ್ರಹದ ಪಕ್ಕದಲ್ಲಿ ಅರ್ಧಚಂದ್ರಾಕಾರದ ಚಂದ್ರ ಗೋಚರಎಲೆಕ್ಟ್ರಾನಿಕ್ಸ್ ಕ್ಷೇತ್ರದ ಸಮಸ್ತ ಚಟುವಟಿಕೆಗಳೂ ರಾಜ್ಯದಲ್ಲೇ ನಡೆಯಬೇಕು: ಎಂ ಬಿ ಪಾಟೀಲರೈತರ ಹಿತಕ್ಕೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ.,ಸೆ.19ರಂದು CM ತೀರ್ಥಹಳ್ಳಿಗೆ ಕೆವಿನ್‌ಕೇರ್, (MMA) ಸಹಯೋಗದಲ್ಲಿ 15ನೇ ಚಿನ್ನಿಕೃಷ್ಣನ್ ಇನ್ನೋವೇಶನ್ ಅವಾರ್ಡ್ಸ್ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಿಎಸ್‌ಆರ್‌ ನಿಧಿ ಬಳಕೆಯಾಗಲಿ: ಕೆ. ಎಂ. ಶಿವಲಿಂಗೇಗೌಡ ಖೋಪೋಲಿಯಲ್ಲಿ ಅಕ್ಟೋಬರ್ 30 ರಿಂದ ಭಾರತೀಯ ಶಾಲೆಗಳ ಶಿಕ್ಷಣ ಶೃಂಗಸಭೆ