LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಸೇನಾಪಡೆಯ ಪರಾಕ್ರಮಕ್ಕೆ ದೇಶದ, ರಾಜ್ಯದ ಪರವಾಗಿ ಅಭಿನಂದನೆ

ಬೆಂಗಳೂರು: ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ನಮ್ಮ ಯೋಧರು ಪರಾಕ್ರಮ ಮೆರೆದಿದ್ದಾರೆ. ಇದು ಇಡೀ ದೇಶವೇ ಹೆಮ್ಮೆಪಡುವ ವಿಷಯ. ದೇಶದ ಸೇನಾಪಡೆಯ ಪರಾಕ್ರಮಕ್ಕೆ ನಾನು ದೇಶದ ಮತ್ತು ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಈ ಕ್ರಮವನ್ನು ಬೆಂಬಲಿಸುತ್ತದೆ ಎಂದರು.

‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಲಾಗಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದ್ದು, ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದಾರೆ. ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ.

ಕಾಶ್ಮೀರದ ಪಹಲ್ಗಾಮ್‍ನಲ್ಲಿ ಅಮಾಯಕ 26 ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ತಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ.

ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ


ಈ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್‍ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ. ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ.

ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ. ಇದು ಪಾಕಿಸ್ತಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ತಿಳಿಸಿದರು.

ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ ಎಂದು ಹೇಳಿದರು.

ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೋಲಿಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ತಿಳಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ