ಚಾಮರಾಜನಗರ: ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದ ಉಪ್ಪಾರ ಸಮಾಜದ ಚಾಮರಾಜನಗರದ ಉಪ ವಲಯ ಅರಣ್ಯಧಿಕಾರಿ ಚಂದ್ರಕುಮಾರ್ ಆರ್ ಅವರಿಗೆ ಅಭಿನಂದನೆಗಳು ಹಾಗೂ ಶುಭಾಶಯಗಳು.
ಎಂ ಜಯಕುಮಾರ್ ಜಿಲ್ಲಾಧ್ಯಕ್ಷರು ಜಿಲ್ಲಾ ಉಪ್ಪಾರ ಯುವಕರ ಸಂಘ (ರಿ) ಚಾಮರಾಜನಗರ ಜಿಲ್ಲೆ
ಉಪ್ಪಾರ ಸಮಾಜದ ಯುವ ಅಧಿಕಾರಿ ಚಾಮರಾಜನಗರ ಜಿಲ್ಲೆಯ ತಾಲೂಕಿನ ಮೂಡ್ಲುಮೋಳೆ ಗ್ರಾಮದ ನಿವಾಸಿ ಪ್ರಸ್ತುತ ಚಾಮರಾಜನಗರದ ಉಪ ವಲಯ ಅರಣ್ಯ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಕುಮಾರ್ ಅವರನ್ನು ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ (ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ) ವತಿಯಿಂದ ಗೌರವಿಸಲಾಗಿದೆ.
ಪುದುಚೇರಿಯಲ್ಲಿ ನಡೆದ ಸಮಾರಂಭದಲ್ಲಿ
'ಗ್ರಾಮೀಣ ಮತ್ತು ಪರಿಸರ ಅಭಿವೃದ್ಧಿ ಸೇವೆ' (Rural and Environmental Development Service) ವಿಭಾಗದಲ್ಲಿ ಉಪ ವಲಯ ಅರಣ್ಯಧಿಕಾರಿ ಚಂದ್ರಕುಮಾರ್ ಅವರ ಸೇವೆಯನ್ನು ಗುರುತಿಸಿ 'ಗೌರವ ಡಾಕ್ಟರೇಟ್ ಪ್ರಶಸ್ತಿ'ಯನ್ನು ನೀಡಿ ಸನ್ಮಾನಿಸಿದ್ದಾರೆ. ಗೌರವ ಡಾಕ್ಟರೇಟ್ ಪ್ರಶಸ್ತಿ ಪಡೆದಿರುವ ಚಂದ್ರಕುಮಾರ್ ಅವರಿಗೆ ಅಭಿನಂದನೆಗಳು ಹಾಗೂ ಶುಭಾಶಯಗಳು.