LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಕಾರ್ಯಕರ್ತರಿಂದ ಎಐ ಶೃಂಗಸಭೆಗೆ ಅಡ್ಡಿ; ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ವಿಫಲವಾಗಿರುವ ರಾಹುಲ್ ಗಾಂಧಿ ಹೊರಗೆ ದೇಶದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಆರೋಪಿಸಿದರು.

ನವದೆಹಲಿಯಲ್ಲಿ ನಡೆದ ಜಾಗತಿಕ ಎಐ ಶೃಂಗಸಭೆಗೆ ಅಡ್ಡಿ ಉಂಟು ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲಾಗಿ ಪ್ರತಿಭಟನೆ ನಡೆಸಿದ್ದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಮೇಣದಬತ್ತಿ ಹಿಡಿದು ಪ್ರತಿಭಟನೆಯ ನೇತೃತ್ವವನ್ನು ಅವರು ವಹಿಸಿ ಮಾತನಾಡಿದರು ಫ್ರೀಡಂ ಪಾರ್ಕ್ ನಲ್ಲಿ ಈ ಪ್ರತಿಭಟನೆ ನಡೆಯಿತು.

ಅಲ್ಲದೆ, ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿರುವುದರ ವಿರುಧ್ಧವೂ ಈ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲಾಯಿತು.ಕಾಂಗ್ರೆಸ್ ಕಾರ್ಯಕರ್ತರ ವರ್ತನೆ ಸರಿಯಲ್ಲ, ಅವರು ದೇಶದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದು ಅಕ್ಷಮ್ಯ ಎಂದು ಅವರು ಕಿಡಿಕಾರಿದರು.

ವಿವಿಧ ದೇಶಗಳ ಅಧ್ಯಕ್ಷರು, ಪ್ರಧಾನಿಗಳು ಹಾಗೂ ಜಗತ್ತಿನ ಖ್ಯಾತ ಐಟಿ, ಎಐ ಕಂಪನಿಗಳು ಭಾಗಿಯಾಗಿರುವ ಜಾಗತಿಕ ಶೃಂಗಸಭೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬನಿಯನ್ ಬಿಚ್ಚಿ ಅರೆಬೆತ್ತಲಾಗಿ ಪ್ರತಿಭಟನೆ ನಡೆಸಿರುವುದು ಖಂಡನೀಯ. ರಾಹುಲ್ ಗಾಂಧಿ ಅವರು ಉದ್ದೇಶಪೂರ್ವಕವಾಗಿಯೇ ಚಿತಾವಣೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ 140 ಕೋಟಿ ಜನರ ಪ್ರತಿನಿಧಿ. ಈವರೆಗೂ ದೇಶದಲ್ಲಿ ನಡೆದಿರದ ಶೃಂಗಸಭೆ ಅದಾಗಿದೆ. ದೇಶದಲ್ಲಿ ನಶಿಸಿ ಹೋಗುತ್ತಿರುವ ಕಾಂಗ್ರೆಸ್ ಪಕ್ಷ ಇಂತಹ ಕೆಲಸಕ್ಕೆ ಬಾರದ ಪ್ರತಿಭಟನೆಗಳಿಂದ ಇನ್ನಷ್ಟು ಪಾತಾಳಕ್ಕೆ ಕುಸಿಯುತ್ತಿದೆ. ಆ ಪಕ್ಷಕ್ಕೆ ದೇಶದ ಅಭಿವೃದ್ಧಿ ಬೇಕಿಲ್ಲ. ಕ್ಷುಲ್ಲಕ ಕಾರಣಗಳಿಂದ ದೇಶದ ಪ್ರತಿಷ್ಠೆಯನ್ನು ಹಾಳು ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

*ಪತ್ರಕರ್ತರಿಗೆ ನಿರ್ಬಂಧ; ಸರ್ವಾಧಿಕಾರಿ ಮನೋಭಾವದ ಪರಮಾವಧಿ*

ಆಡಳಿತಾರೂಢ ಕಾಂಗ್ರೆಸ್ ವಿಧಸೌಧದಲ್ಲಿ ವರದಿ ಮಾಡುವ ಪತ್ರಕರ್ತರಿಗೆ ನಿರ್ಬಂಧ ವಿಧಿಸಿರುವ ಸರ್ವಾಧಿಕಾರಿ ಮನೋಭಾವ ಆಗಿದೆ. ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ.ಕಾಂಗ್ರೆಸ್ ಪಕ್ಷವು ಇನ್ನೂ ತುರ್ತು ಪರಿಸ್ಥಿತಿಯ ಮನಃಸ್ಥಿತಿಯಿಂದ ಹೊರ ಬಂದಿಲ್ಲ ಎಂದು ರಮೇಶ್ ಗೌಡರು ಆಕ್ರೋಶ ವ್ಯಕ್ತಪಡಿಸಿದರು.

ಮಾಧ್ಯಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಲ್ಕನೆ ಅಂಗವಾಗಿದೆ. ಅದರ ಹೊಣೆಗಾರಿಕೆ ಮಹತ್ವದ್ದು. ಹೀಗಾಗಿ ಕೂಡಲೇ ಈ ನಿರ್ಬಂಧವನ್ನು ತೆಗೆದು ಹಾಕಬೇಕು ಎಂದು ಅವರು ಕಾಂಗ್ರೆಸ್ ಸರ್ಕಾರಕ್ಕೆ ಒತ್ತಾಯ ಮಾಡಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎನ್. ತಿಪ್ಪೇಸ್ವಾಮಿ ಸೇರಿದಂತೆ ಅನೇಕ ಮುಖಂಡರು, ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆ ಉಗ್ರ ರೂಪ ತಾಳದಂತೆ ಪೊಲೀಸರು ಸಕ್ರಿಯರಾಗಿ ಉಪ್ಪಿಟ್ಟರನ್ನು ಬಸ್ಸಿನಲ್ಲಿ ಬಂಧಿಸಿ ಕರೆದೊಯ್ದು ನಂತರ ಬಿಡುಗಡೆ ಮಾಡಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ