LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂ.ಮ.ಸಾ.ಸಂಸ್ಥೆಯಲ್ಲಿ ಸಂವಿಧಾನ ದಿನ ಆಚರಣೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಗುಣಮಟ್ಟದ ಸಮರ್ಪಕ ಸುರಕ್ಷಿತ ಸಾರಿಗೆ ಸೇವೆಯನ್ನು ಮಿತವ್ಯಯ ದರದಲ್ಲಿ ಒದಗಿಸುತ್ತಿದೆ ಎಂದು ವ್ಯವಸ್ಥಾಪಕ ನಿರ್ದೇಶಕರಾದ ಜಿ.ಸತ್ಯವತಿ ತಿಳಿಸಿದರು.

ಅರ್ಥಪೂರ್ಣ ಸಮಾರಂಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸುವ ಮುಖಾಂತರ ಸಂವಿಧಾನದ ಆಚರಣೆ ಮಾಡಲಾಯಿತು. ಸರ್ಕಾರ ಜಾರಿಗೆ ತಂದಿರುವ 5 ಯೋಜನೆಗಳನ್ನು ಸಮರ್ಪಕವಾಗಿ ಇಲಾಖೆ ನಿಭಾಯಿಸಿಕೊಂಡು ಹೋಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಸರ್ಕಾರಿ ಸಾರಿಗೆ ಇರುವುದೇ ಜನಸಾಮಾನ್ಯರ ಎಳೆಗೆಗಾಗಿ, ಸರ್ಕಾರ ಅಂತಹವರನ್ನು ಒಳಗೊಂಡಂತೆ ನಾಡಿನ ಎಲ್ಲರಿಗೂ ಒಳ್ಳೆದಾಗಲಿ ಎಂದು ಯೋಜನೆ ಜಾರಿಗೆ ತಂದಿದ್ದಾರೆ.

ಸಂವಿಧಾನವನ್ನು ಎಲ್ಲರೂ ಓದಬೇಕು, ಅದರ ಜೊತೆಗೆ ಅರ್ಥ ಮಾಡಿಕೊಂಡು ಸಮಾಜದಲ್ಲಿ ಬದುಕಬೇಕು, ಎಲ್ಲದಕ್ಕಿಂತ ಮುಖ್ಯವಾಗಿ ತಂದೆತಾಯಿಗಳು ಭಾರತದ ಅತಿದೊಡ್ಡ ಸಂವಿಧಾನದ ಬಗ್ಗೆ ಮಕ್ಕಳಿಗೆ ತಿಳಿ ಹೇಳಬೇಕು, ಸಂವಿಧಾನದ ಮೂಲಭೂತ ಅಂಶಗಳನ್ನು ತಿಳಿಯಬೇಕಾಗಿದೆ ಎಂದರು.ʼಸಂವಿಧಾನ ದಿನನಿತ್ಯ ಜೀವನದ ಒಂದು ಭಾಗ, ಅದನ್ನು ಸರಿಯಾಗಿ ಅಳವಡಿಸಿಕೊಂಡಲ್ಲಿ, ಶ್ರೇಯೊಭಿವೃದ್ಧಿ ಸಾಧ್ಯʼ ಎಂದು ತಿಳಿಸಿದರು.

ಶಾಂತಿನಗರದಲ್ಲಿನ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ  ವ್ಯವಸ್ಥಾಪಕ ನಿರ್ದೇಶಕರಾದ ಜಿ.ಸತ್ಯವತಿ, ಭಾ.ಆ.ಸೇ ಮತ್ತು ನಿರ್ದೇಶಕರು (ಭ&ಜಾ) ಕಲಾ ಕೃಷ್ಣಸ್ವಾಮಿ, ಭಾ.ಪೋ.ಸೇ ರವರ ಸಮ್ಮುಖದಲ್ಲಿ ಎಲ್ಲಾ ಇಲಾಖ ಮುಖ್ಯಸ್ಥರು, ವಿಭಾಗೀಯ ನಿಯಂತ್ರಣಾಧಿಕಾರಿಗಳು, ಅಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಜೊತೆಯಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ಓದುವುದರ ಮೂಲಕ ಸಂವಿಧಾನದ ಮೌಲ್ಯಗಳನ್ನು ಪ್ರಚಾರ ಪಡಿಸಲಾಯಿತು.

ಸಂವಿಧಾನ ತಜ್ಞರಿಂದ ಸಂವಿಧಾನದ ಕುರಿತು ಉಪನ್ಯಾಸ , ಸಂಸ್ಥೆಯ ಸಿಬ್ಬಂದಿಗಳಿಗೆ ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮುಂತಾದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ನಮ್ಮ ಹೆಮ್ಮೆಯ ಸಂವಿಧಾನದ ಬಗ್ಗೆ ಅರಿವು ಮೂಡಿಸಬಹುದಾಗಿದೆʼ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಇಲಾಖೆಯ ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ