LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಣನಕುಂಟೆ ಕ್ರಾಸ್‌ನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಮೇಲ್ಸೇತುವೆ ನಿರ್ಮಾಣ : ಕೃಷ್ಣ ಬೈರೇಗೌಡ

ಬೆಂಗಳೂರು : ಕೋಣನಕುಂಟೆ ಕ್ರಾಸ್‌ನಲ್ಲಿ ಸಂಚಾರ ದಟ್ಟಣೆ ನಿವಾರಿಸುವ ಉದ್ದೇಶದಿಂದ ಮೇಲ್ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಪ್ರಸ್ತುತ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು.news_1795268787_3_153.webp

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂರನೇ ಹಂತದ ವಾರ್ಡ್ ಒನ್ ಅಭಿಯಾನಕ್ಕೆ ಕೋಣನಕುಂಟೆ ಕ್ರಾಸ್‌ನಲ್ಲಿ ಗೋಡೆಗೆ ಬಣ್ಣ ಬಳಿಯುವ ಮೂಲಕ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೋಣನಕುಂಟೆ ಕ್ರಾಸ್ ನಲ್ಲಿ ತಾತ್ಕಾಲಿಕ ಪರಿಹಾರಗಳ ಜೊತೆಗೆ ದೀರ್ಘಕಾಲೀನ ಪರಿಹಾರಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಬಿ-ಸ್ಮೈಲ್ ವತಿಯಿಂದ ಮೇಲ್ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಎರಡೂ ಬದಿಯಲ್ಲಿ ಸುಮಾರು 600 ಮೀಟರ್ ಉದ್ದದ ಮೇಲ್ಸೇತುವೆಯನ್ನು ಸ್ಪ್ಲಿಟ್ ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಮೇಲ್ಸೇತುವೆ ನಿರ್ಮಾಣ ಹಾಗೂ ಭೂಸ್ವಾಧೀನ ಸೇರಿದಂತೆ ಸುಮಾರು 77 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದ್ದು, ಕಾಮಗಾರಿ ಕೈಗೆತ್ತಿಕೊಳ್ಳಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೇಲ್ಸೇತುವೆ ನಿರ್ಮಾಣದಿಂದ ಈ ಭಾಗದಲ್ಲಿ ಸಿಗ್ನಲ್ ಮುಕ್ತ ಸಂಚಾರಕ್ಕೆ ಅವಕಾಶವಾಗಲಿದ್ದು, ಪ್ರಸ್ತುತ ಎದುರಾಗುತ್ತಿರುವ ಸಂಚಾರ ದಟ್ಟಣೆಯನ್ನು ನಿವಾರಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಕೋಣನಕುಂಟೆ ಕ್ರಾಸ್‌ನಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಸಾರ್ವಜನಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣದ ಪರಿಹಾರ ಕ್ರಮವಾಗಿ ಪಾದಚಾರಿ ಮಾರ್ಗಗಳನ್ನು ಅಭಿವೃದ್ಧಿಪಡಿಸುವುದು, ಜೀಬ್ರಾ ಕ್ರಾಸಿಂಗ್, ರಸ್ತೆ ಲೈನ್ ಮಾರ್ಕಿಂಗ್ ಹಾಗೂ ಸೈಡ್ ಮಾರ್ಕಿಂಗ್ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.news_1795268787_1_142.webp

ಇದರ ಜೊತೆಗೆ ವಾಹನಗಳ ಸುಗಮ ಸಂಚಾರಕ್ಕಾಗಿ ಫೋರಂ ಮಾಲ್ ಸಮೀಪ ಮೆಟ್ರೋಗೆ ಸೇರಿದ ಜಾಗವನ್ನು ಪಡೆದು ಫ್ರೀ ಲೆಫ್ಟ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದರ ಜೊತೆಗೆ, ಮಾಲ್ ಮುಂಭಾಗದಲ್ಲಿ ಅಡ್ಡಲಾಗಿ ನಿರ್ಮಿಸಿರುವ ತಡೆಗೋಡೆಯನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಲಾಗಿದೆ. ಇದೇ ಸ್ಥಳದಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ಮೆಟ್ಟಿಲುಗಳನ್ನು ನಿರ್ಮಿಸುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

*ವಾರ್ಡ್ ಒನ್ ಅಭಿಯಾನ:*

ವಾರ್ಡ್ ಒನ್ ಅಭಿಯಾನದಡಿ ಆಯಾ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಾರ್ಡ್‌ಗಳನ್ನು ಆಯ್ಕೆ ಮಾಡಿಕೊಂಡು, ಅಲ್ಲಿನ ರಸ್ತೆ, ಪಾದಚಾರಿ ಮಾರ್ಗ, ವಿದ್ಯುತ್ ಸಮಸ್ಯೆ, ಮರಗಳ ಕೊಂಬೆಗಳ ತೆರವು, ರಸ್ತೆ ಗುಂಡಿಗಳು ಹಾಗೂ ಕಸದ ಸಮಸ್ಯೆ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ಗುರುತಿಸಿ, ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಹಾಗೂ ಸಂಸ್ಥೆಗಳ ಸಮನ್ವಯದೊಂದಿಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ನವೆಂಬರ್ 1ರಿಂದ ಅಭಿಯಾನ ಆರಂಭಿಸಲಾಗಿದ್ದು, ಇಂದು ಮೂರನೇ ಹಂತದ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ 43 ವಾರ್ಡ್‌ಗಳು, ಎರಡನೇ ಹಂತದಲ್ಲಿ 40 ವಾರ್ಡ್‌ಗಳು ಹಾಗೂ ಮೂರನೇ ಹಂತದಲ್ಲಿ 41 ವಾರ್ಡ್‌ಗಳಲ್ಲಿ ಸ್ವಚ್ಛತಾ ಕಾರ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

ಜಿಬಿಎ ವ್ಯಾಪ್ತಿಯಲ್ಲಿ ಒಟ್ಟು 369 ವಾರ್ಡ್‌ಗಳಿದ್ದು, ನವೆಂಬರ್ ತಿಂಗಳಲ್ಲೇ ಅಭಿಯಾನ ಪೂರ್ಣಗೊಳಿಸಲು ಯೋಜಿಸಲಾಗಿತ್ತು. ಆದರೆ, ತಳಮಟ್ಟದಲ್ಲಿ ಸ್ವಚ್ಚತಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲು ಹೆಚ್ಚಿನ ಸಮಯದ ಅಗತ್ಯವಿರುವುದರಿಂದ ಅಭಿಯಾನವನ್ನು ಡಿಸೆಂಬರ್ ತಿಂಗಳಲ್ಲಿಯೂ ಮುಂದುವರಿಸಲಾಗುವುದು ಎಂದು ಹೇಳಿದರು.news_1795268787_2_852.webp

*ಸ್ಕೈವಾಕ್ ನಿರ್ಮಾಣ:*

ಕೋಣನಕುಂಟೆ ಕ್ರಾಸ್‌ನಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣವಾಗುತ್ತಿರುವುದರಿಂದ ಸಾರ್ವಜನಿಕರ ಓಡಾಟ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಪಾದಚಾರಿ ಮೇಲ್ಸೇತುವೆ (ಸ್ಕೈವಾಕ್) ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಯಾವುದೇ ಅಡಚಣೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸ್ಕೈವಾಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

*ಜೆಟ್ಟಿಂಗ್ ಯಂತ್ರಗಳ ಕಾರ್ಯವೈಖರಿ ವೀಕ್ಷಣೆ:*

ವಾರ್ಡ್ ಒನ್ ಅಭಿಯಾನದ ಭಾಗವಾಗಿ ಜೆಟ್ಟಿಂಗ್ ಯಂತ್ರಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಅದರಂತೆ, ಇಂದು ಜೆಟ್ಟಿಂಗ್ ಯಂತ್ರಗಳ ಕಾರ್ಯವೈಖರಿಯನ್ನು ವೀಕ್ಷಿಸಿ, ಅವುಗಳನ್ನು ಎಲ್ಲಾ ಕಡೆ ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳೀಯ ಅಪಾರ್ಟ್‌ಮೆಂಟ್‌ಗಳನ್ನು ಮ್ಯಾಪಿಂಗ್ ಮಾಡಿ, ಅಲ್ಲಿನ ಸಂಸ್ಕರಿಸಿದ ನೀರಿನ ಗುಣಮಟ್ಟವನ್ನು ಪರಿಶೀಲಿಸಬೇಕು. ಗುಣಮಟ್ಟದ ನೀರನ್ನು ಅಪಾರ್ಟ್‌ಮೆಂಟ್‌ಗಳಿಂದ ಪಡೆದು ಜೆಟ್ಟಿಂಗ್ ಯಂತ್ರಗಳ ಕಾರ್ಯಾಚರಣೆಗೆ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಕೃಷ್ಣಪ್ಪ, ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಕೆ.ಎನ್., ಅಪರ ಆಯುಕ್ತರಾದ ನವೀನ್ ಕುಮಾರ್ ರಾಜು, ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ, ಲೋಕೇಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾಷಣ ಮಾಡೋಲ್ಲ, ಜನರ ಅಹವಾಲು ಆಲಿಸೋಣ ಎಂದ ಸಚಿವ ಮಧು ಬಂಗಾರಪ್ಪಸೊರಬ ಕ್ಷೇತ್ರದಲ್ಲಿ 2 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಮಧು ಬಂಗಾರಪ್ಪ ಚಾಲನೆರಸ್ತೆ ಕಾಮಗಾರಿಗಳ ಸುರಕ್ಷತಾ ಕ್ರಮಗಳೊಂದಿಗೆ, ಸಂಚಾರಕ್ಕೆ ತೊಂದರೆಯಾಗದಂತೆ ಕೈಗೊಳ್ಳಿ – ಜಗದೀಶ್.ಜಿವಿಧಾನಸೌಧ ಮುಂಭಾಗ ಜೆಟ್ ಸ್ಪ್ರೇ ವಾಹನದ ಪ್ರಾತ್ಯಕ್ಷಿಕೆ ಪರಿಶೀಲನೆ ಕಿದ್ವಾಯಿ ಆಸ್ಪತ್ರೆ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆಯೊಂದಿಗೆ ಹಂಸಜ್ಯೋತಿ ಟ್ರಸ್ಟ್‌ನಿಂದ 71ನೇ ಕನ್ನಡ ನಾಡ ಹಬ್ಬದ ಆಚರಣೆಬಸವ ಮಂಟಪ ಕೃತಿ ವಿವಾದ: ಲೇಖಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ ವಿಭೂತಿ ಮಠದ ಶ್ರೀಗಳಿಂದ ಸ್ಪಷ್ಟನೆಕೋಣನಕುಂಟೆ ಕ್ರಾಸ್‌ನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಮೇಲ್ಸೇತುವೆ ನಿರ್ಮಾಣ : ಕೃಷ್ಣ ಬೈರೇಗೌಡKSCA ಅಧ್ಯಕ್ಷರಿಂದ ಅಧಿಕಾರ ದುರ್ಬಳಕೆ ಆರೋಪ ಮಾಜಿ ಅಧ್ಯಕ್ಷ ಜಗನ್ನಾಥ್ ದಾಖಲೆ ಬಿಡುಗಡೆMES ನಲ್ಲಿ 71ನೇ ಕನ್ನಡ ರಾಜ್ಯೋತ್ಸವ, ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಣೆಭಾನುವಾರ ಬ್ರಾಹ್ಮಣ ಮಂಡಳಿಯಿಂದ 132 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ