LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ಹಿಂಸಾಚಾರ, ಹಿಂದೂಪರ ಸಂಘಟನೆಯಿಂದ DCಗೆ ಮನವಿ

ಬೆಂಗಳೂರು:   ಬಾಂಗ್ಲಾದೇಶದಲ್ಲಿ ಹಿಂದುಗಳನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ದೌರ್ಜನ್ಯ ದಬ್ಬಾಳಿಗೆ ನಡೆಯುತ್ತದೆ ಆದರೆ ಇಂದು ಹಿಂದೂ ವ್ಯಕ್ತಿಯೊಬ್ಬನನ್ನು ಸಜೀವವಾಗಿ ಸುಟ್ಟು ಹಾಕಿರುವುದು ಹಿಂದುಗಳ ತೆಂಗಣ್ಣಿಗೆ ಗುರಿಯಾಗಿದೆ ಈ ಸಂಬಂಧ ಬಾಂಗ್ಲಾ ಹೈ ಕಮಿಷನರ್ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನಲ್ಲಿ ಬೆಂಗಳೂರು ನಗರ ಕೇಂದ್ರ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸುಂದ್ರೇಶ್ ನರ್ಗಲ್ ನೇತೃತ್ವದಲ್ಲಿಕಾರ್ಯಕರ್ತರು ಮನವಿ ಮಾಡಿದರು.

ಬಾಂಗ್ಲಾದೇಶದ ಮೈಮನ್‌ಸಿಂಗ್ ಪ್ರದೇಶದಲ್ಲಿ ಹಿಂದೂ ದೀಪು ಚಂದ್ರ ದಾಸ್ ಅವರನ್ನು ಮತೀಯ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಜೀವಂತವಾಗಿಯೇ ಬೆಂಕಿಗೆ ಆಹುತಿಗೊಳಿಸಿದೆ. ಜೊತೆಗೆ ಬಾಂಗ್ಲಾದೇಶದಲ್ಲಿ ಹಿಂದೂ ಸಮಾಜವನ್ನು ಗುರಿಯಾಗಿಸಿಕೊಂಡು ಅವರ ಮನೆಗಳು ಹಾಗೂ ಅಂಗಡಿಗಳನ್ನು ಸುಡಲಾಗುತ್ತಿದೆ. ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ಈ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಿ, ಮಾನ್ಯ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಶ್ರೀ. ಅಮಿತ್ ಶಾ ಹಾಗೂ ಬಾಂಗ್ಲಾದೇಶದ ಹೈ ಕಮಿಷನರ್ ಅವರ ಹೆಸರಿನಲ್ಲಿ ಕ್ರಮಕ್ಕಾಗಿ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದೆ.

ಹಿಂದೂ ವಿರೋಧಿ ಹಿಂಸಾಚಾರವನ್ನು ತಡೆಯಲು ಭಾರತ ಸರ್ಕಾರವು ಬಾಂಗ್ಲಾದೇಶದ ಮೇಲೆ ಆರ್ಥಿಕ, ವ್ಯಾಪಾರಿಕ ಹಾಗೂ ರಾಜಕೀಯ ನಿರ್ಬಂಧಗಳನ್ನು ವಿಧಿಸಬೇಕೆಂದು ಬೇಡಿಕೆ ಇಡಲಾಗಿದೆ. ಜೊತೆಗೆ ಬಾಂಗ್ಲಾದೇಶದ ಉಗ್ರ ಹಾಗೂ ಮತೀಯ ಗುಂಪುಗಳ ವಿರುದ್ಧ ಕಠಿಣ ಮಿಲಿಟರಿ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆಯೂ ವ್ಯಕ್ತವಾಗಿದೆ.ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಶರೀಫ್ ಉಸ್ಮಾನ್ ಹಾದಿ ಅವರ ಮೇಲೆ ಢಾಕಾದಲ್ಲಿ ಗುಂಡಿನ ದಾಳಿ ನಡೆದಿದೆ.

ಅವರ ಮರಣದ ನಂತರ ಹಿಂದೂ ಸಮಾಜದ ವಿರುದ್ಧ ಸಂಯೋಜಿತ ಹಿಂಸಾಚಾರ ಆರಂಭವಾಗಿದೆ. ಹಿಂದೂ ಮನೆಗಳು, ಅಂಗಡಿಗಳು ಮತ್ತು ದೇವಸ್ಥಾನಗಳನ್ನು ಗುರಿಯಾಗಿಸಲಾಗುತ್ತಿದೆ. ನೇರ ವಿಡಿಯೋಗಳು, ಸಾಕ್ಷ್ಯಗಳು ಹಾಗೂ ಅಂತರರಾಷ್ಟ್ರೀಯ ಮಾಧ್ಯಮಗಳು ಸತ್ಯವನ್ನು ಬಹಿರಂಗಪಡಿಸಿವೆ. ಆದರೂ ಬಾಂಗ್ಲಾದೇಶ ಸರ್ಕಾರ ಕ್ರಮ ಕೈಗೊಳ್ಳುವುದನ್ನು ತಪ್ಪಿಸುತ್ತಿದೆ. ಜನಗಣನೆಯ ಪ್ರಕಾರ ೧೯೪೧ರಲ್ಲಿ ೨೮% ಇದ್ದ ಹಿಂದೂ ಜನಸಂಖ್ಯೆ ಈಗ ಕೇವಲ ೭.೮% ಮಾತ್ರ ಉಳಿದಿದೆ. ಇದು ಹಿಂದೂ ನಿರ್ಮೂಲನೆಯ ಪ್ರಕ್ರಿಯೆಯಾಗಿದೆ.

ಮನವಿ ಪತ್ರದಲ್ಲಿ ಭಾರತ-ಬಾಂಗ್ಲಾದೇಶ ಒಪ್ಪಂದದ ಮೂಲಕ ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯ ರಕ್ಷಣೆ, ಸಂಯುಕ್ತ ರಾಷ್ಟ್ರಗಳು ಹಾಗೂ ಮಾನವ ಹಕ್ಕುಗಳ ಆಯೋಗದಲ್ಲಿ ವಿಷಯವನ್ನು ಎತ್ತಿ ಹಿಡಿದು ಫ್ಯಾಕ್ಟ್-ಫೈಂಡಿಂಗ್ ಮಿಷನ್ ನಡೆಸುವುದು, ಹಿಂಸೆಗೆ ಒಳಗಾದ ಹಿಂದೂಗಳಿಗೆ ನಾಗರಿಕತೆ ಹಾಗೂ ಪುನರ್ವಸತಿ ನೀತಿ, ದೇವಸ್ಥಾನಗಳು ಮತ್ತು ಧಾರ್ಮಿಕ ಆಸ್ತಿಗಳ ಸಂಯುಕ್ತ ಸಮೀಕ್ಷೆ, ಬಾಂಗ್ಲಾದೇಶದ ಹಿಂದೂ ಸಮಾಜದೊಂದಿಗೆ ನೇರ ಸಂವಹನ ವ್ಯವಸ್ಥೆ ಇತ್ಯಾದಿ ಬೇಡಿಕೆಗಳು ಸೇರಿವೆ. ವಿಶ್ವದ ಅತಿದೊಡ್ಡ ಹಿಂದೂ ಬಹುಸಂಖ್ಯಾತ ದೇಶವಾಗಿರುವ ಭಾರತವು, ಬಾಂಗ್ಲಾದೇಶದ ಹಿಂದೂಗಳ ಸುರಕ್ಷತೆಗಾಗಿ ರಾಜಕೀಯ, ಕಾನೂನು ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಯತ್ನಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂಧರ್ಭದಲ್ಲಿ ಶ್ರೀರಾಮ ಸೇನೆಯ ಕಾರ್ಯಾಧ್ಯಕ್ಷರಾದ ಶ್ರೀ.ಸುಂದ್ರೇಶ್ ನರ್ಗಲ್, ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ, ಶ್ರೀರಾಮ ಸೇನೆ ನಗರ ಅಧ್ಯಕ್ಷರಾದ ಶ್ರೀ.ಮಂಜುನಾಥ, ದುರ್ಗಾ ಸೇನೆಯ ಸೌ. ಸರಸ್ವತಿ ಪ್ರವೀಣ, ಶ್ರೀ. ಮಲ್ಲಿಕಾರ್ಜುನ ರಾಜು, ವಕೀಲರಾದ ಶ್ರೀ. ಕೆ ಕೃಷ್ಣಸ್ವಾಮಿ ಮುಂತಾದವರು ಉಪಸ್ಥಿತಿ ಇದ್ದರ
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ