LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್!, ಡಿಕೆ ಸಹೋದರರನ್ನು ಅಪೂರ್ವ ಸಹೋದರರು ಎಂದು ಲೇವಡಿ ಮಾಡಿದ HDD

ಚನ್ನಪಟ್ಟಣ: ಪರೋಕ್ಷವಾಗಿ ಸಿಪಿ ಯೋಗೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು; ಪಕ್ಷಾಂತರ ಮಾಡಿದ ಅವರನ್ನು ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್ ಎಂದು ಟೀಕಿಸಿದರು.

ದೇವೇಗೌಡರ ಕೈ ನಡುಗುತ್ತವೆ, ಅವರು ಪ್ರಚಾರಕ್ಕೆ ಬರುತ್ತಾರಂತೆ.. ಹಾಗಂತೆ ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್ ಹೇಳುತ್ತಾರೆ. ನಾನು ಪ್ರಚಾರಕ್ಕೆ ಬರುತ್ತೇನೆ. ಹನ್ನೊಂದನೇ ತಾರೀಖಿನವರೆಗೂ ಪ್ರಚಾರಕ್ಕೆ ಬರುತ್ತೇನೆ ಎಂದು ಅವರು ಹೇಳಿದರು.

ಮೋದಿ ಹಾಗೂ ನನ್ನ ಸಂಬಂಧ ಚೆನ್ನಾಗಿದೆ. ಮುಂದೆಯೂ ಚೆನ್ನಾಗಿರುತ್ತದೆ. ರಾಜಕಾರಣಕ್ಕೆ ಮೀರಿದ ಸಂಬಂಧ ನಮ್ಮದು. ಆದರೆ, ಕಾಂಗ್ರೆಸ್ ನವರು ಹೇಯ ಕೆಲಸ ಮಾಡುತ್ತಿದ್ದಾರೆ. ಅವರಿಗೆ ನನ್ನ ಕುಟುಂಬ ಬಿಟ್ಟರೆ ಮಾತನಾಡಲು ಬೇರೆ ವಿಷಯ ಇಲ್ಲ. ದೇವೇಗೌಡರೇ.. ಯಾಕೆ ನೀವು ನಿಮ್ಮ ಮೊಮ್ಮಗನನ್ನು ನಿಲ್ಲಿಸಿದ್ದೀರಿ ಎಂದು ಯಾರಾದರೂ ಕೇಳಬಹುದು. ಯಾವ ಕನ್ವರ್ಟಡ್ ಕಾಂಗ್ರೆಸ್ ನಾಯಕ ಇದ್ದಾರೋ, ಅವರನ್ನು ಬಿಜೆಪಿಯಿಂದಲಾದರೂ ನಿಲ್ಲಿ, ಜೆಡಿಎಸ್ ನಿಂದಲಾದರೂ ನಿಲ್ಲಿ ಎಂದು ಹೇಳಿದ್ದೇವು. ನಮಗೆ, ಬಿಜಿಪಿಯವರಿಗೆ ಮೋಸ ಮಾಡಿ ಹೋದರು. ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾರೆ. ಹೀಗಾಗಿ ಈ ಕುತಂತ್ರಕ್ಕೆ ಸಡ್ಡು ಹೊಡೆಯಲು ಸ್ಥಳೀಯ ಮುಖಂಡರು ಎಲ್ಲರೂ ಸೇರಿ ನಿಖಿಲ್ ನಿಲ್ಲಿಸಬೇಕು ಎಂದು ಒತ್ತಾಯ ಮಾಡಿದರು ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಯಾರು ಕಾಂಗ್ರೆಸ್ ನಿಂದ ನಿಂತಿದ್ದಾರೋ ಅವರನ್ನು, ಬೇಡಪ್ಪ ನೀನು ಜೆಡಿಎಸ್ ನಿಂದ ನಿಂತ್ಕೋ ಎಂದು ಹೇಳಿದೆವು. ಅಲ್ಲದೇ ಅವರ ಪಕ್ಷದ ಅಧ್ಯಕ್ಷ ನಡ್ಡಾ ಅವರು ಕೂಡ ಬಿಜೆಪಿಯಿಂದ ಸ್ಪರ್ಧೆಗೆ ಸೂಚಿಸಿದರು. ಆ ಕನ್ವರ್ಟರ್ಡ್ ಕಾಂಗ್ರೆಸ್ ನಾಯಕನಿಗೆ.. ನೀನು ಪಕ್ಷಕ್ಕೆ ದ್ರೋಹ ಮಾಡಬೇಡ, ನೀನು ಪಕ್ಷದಿಂದಲೇ ನಿಲ್ಲುವಂತೆ ನಡ್ಡಾ ಹೇಳಿದರು. ಅವರ ಮಾತನ್ನು ಕೂಡ ಅವರು ತಿರಸ್ಕಾರ ಮಾಡಿದರು ಎಂದು ದೇವೇಗೌಡರು ಹೇಳಿದರು.

ಮುಖ್ಯಮಂತ್ರಿ ಗರ್ವದ ಸೊಕ್ಕನ್ನು ಮುರಿಯಬೇಕು

ಜೆ.ಬ್ಯಾಡರಹಳ್ಳಿಯ ಬಹಿರಂಗ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು; ಮುಖ್ಯಮಂತ್ರಿಗೆ ಇರುವ ಗರ್ವದ ಸೊಕ್ಕನ್ನು ಮುರಿಯಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದರು.

ಅಪೂರ್ವ ಸಹೋದರು ಎಂದು ವ್ಯಂಗ್ಯವಾಡಿದ ಗೌಡರು!!

ಡಿಕೆ ಸಹೋದರರನ್ನು ಅಪೂರ್ವ ಸಹೋದರು ಎಂದು ಟಾಂಗ್ ಕೊಟ್ಟ ಹೆಚ್ಡಿಡಿ ಅವರು; ಆರು ತಿಂಗಳಿಂದ ಅಣಕದ ಮಾತು. ಯಾರು ಅಭ್ಯರ್ಥಿ ಅಂದರೆ ನಾನೇ.. ನಾನೇ...ನಾನೇ.. ನಾನೇ.. ಆ ನಾನೇ ಎನ್ನುತ್ತಿದ್ದವರು ಎಲ್ಲಿ ಹೋದರು ಈಗ? ಚನ್ನಪಟ್ಟಣಕ್ಕೆ ನಿಲ್ಲುವ ನಾನೇ.. ಇವಾಗ ಎಲ್ಲಿ ಹೋದಿರಿ? ಈಗ ಅಪೂರ್ವ ಸಹೋದರರು ತೀರ್ಮಾನ ಮಾಡಿದ್ದಾರೆ. ನಾನು ಅವರ ಹೆಸರೇಳಲ್ಲ. ಅವರ ಹೆಸರು ಹೇಳಿದರೆ ದೇವೇಗೌಡರು ವೆಂಟಿಲೇಟರ್ ಬಂದು ಭಾಷಣ ಮಾಡೋಕೆ ಬರ್ತಾರೆ ಎಂದು ಬಹಳ ಲಘುವಾಗಿ ಮಾತಾಡಿದರು. ಆದರೆ ನಾನು ನಿಮ್ಮ ಮುಂದೆ ಕೂತಿದ್ದೇನೆ. ಯಾವ ವೆಂಟಿಲೇಟರ್ ಇಲ್ಲ, ನನ್ನ ಕೈ ಕೂಡ ನಡುಗುತ್ತಿಲ್ಲ ಎಂದು ಮಾಜಿ ಪ್ರಧಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

 ಎತ್ತಿನಹೊಳೆ ನೀರು ಬರುವುಲ್ಲ


ಕಾಂಗ್ರೆಸ್ ನಾಯಕರು ಜನರಿಗೆ ಬರೀ ಸುಳ್ಳು ಹೇಳುತ್ತಿದ್ದಾರೆ. ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಎತ್ತಿನಹೊಳೆ ನೀರು ಕೋಲಾರಕ್ಕೆ ಬಂದರೆ ನಾನು ಇವರಿಗೆ ದೀರ್ಘದಂಡವಾಗಿ ನಮಸ್ಕಾರ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಲೇವಡಿ ಮಾಡಿದರು.

ಈ ಮಹಾನುಭಾವರು, ಕೋಲಾರ, ಚಿಕ್ಕಬಳ್ಳಾಪುರ ಜಿಕ್ಕೆಗಳಿಗೆ ಎತ್ತಿನಹೊಳೆ ನೀರು ತರುತ್ತಾರಂತೆ? ಹೇಗೆ ತರುತ್ತಾರೆ? ಬರೀ ಸುಲ್ಲಿಪೊಳ್ಳು ಹೇಳಿಕೊಂಡು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ