LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಉದ್ಯಾನವನಗಳು ಹಾಗೂ ಕೆರೆಗಳಿಗೆ ಪ್ರವೇಶ ನಿರ್ಬಂಧ: ದಲ್ಜಿತ್ 

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ 31 ರಂದು ರಾತ್ರಿ 6 ಗಂಟೆಯಿಂದ ಉದ್ಯಾನವನಗಳು ಹಾಗೂ ಕೆರೆಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪಶ್ಚಿಮ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ರವರು ಆದೇಶ ಹೋರಡಿಸಿದ್ದಾರೆ.

2026ನೇ ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ಈ ವರ್ಷದ ಕೊನೆಯ ದಿನವಾದ 31-12-2025ರ ಬುಧವಾರ ರಾತ್ರಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಟ್ಟಾಗಿ ಸೇರುವ ಸಾಧ್ಯತೆ ಇರುತ್ತದೆ. ಇದರಿಂದಾಗಿ ಯಾವುದೇ ಅಹಿತಕರ ಘಟನೆಗಳು ಹಾಗೂ ಸಾರ್ವಜನಿಕ ಶಾಂತಿ ಭಂಗವಾಗುವ ಸಂಭವವಿರುವುದರಿಂದ, ಸಾರ್ವಜನಿಕ ಸುರಕ್ಷಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ದಿನಾಂಕ 31-12-2025 ರಂದು ಸಂಜೆ 6:00 ಗಂಟೆಯ ನಂತರ ಪಾಲಿಕೆಗೆ ಸೇರಿದ ಎಲ್ಲಾ ಉದ್ಯಾನವನಗಳು ಮತ್ತು ಕೆರೆಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಮುಂದುವರಿದು, ಎಲ್ಲಾ ಉದ್ಯಾನವನಗಳು ಮತ್ತು ಕೆರೆಗಳಿಗಳ‌ ಬಳಿ ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಿ, ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ.

ಸಾರ್ವಜನಿಕರು ಅಹಿತಕರ ಘಟನೆಗಳು ನಡೆಯದಂತೆ, ಶಾಂತಿಯುತವಾಗಿ ಹೊಸವರ್ಷಾಚರಣೆಯನ್ನು ನಡೆಸಬೇಕಾಗಿ ನಾಗರಿಕರಲ್ಲಿ ಕೋರಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!