LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಲ್ಲಿಕಾರ್ಜುನ ಖರ್ಗೆ ಕಂಡರೆ ಮೋದಿ ಅವರಿಗೆ ಭಯ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಉತ್ತರಿಸಿದರು.

ಮೋದಿ ಅವರು ಕರ್ನಾಟಕದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ಕಲಬುರ್ಗಿಯಲ್ಲಿ ಗೆಲ್ಲುವುದೇ ಎಂದು ಕೇಳಿದಾಗ, "ಕಲಬುರ್ಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ" ಎಂದು ತಿಳಿಸಿದರು.

20ರಂದು ಎರಡನೇ ಪಟ್ಟಿ ಅಂತಿಮ ಸಾಧ್ಯತೆ:

ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಯಾವಾಗ ಎಂದು ಕೇಳಿದಾಗ, "ಇಂದು ಸಂಜೆ ಮುಂಬೈನಲ್ಲಿ ನಡೆಯಲಿರುವ ಭಾರತ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ನಾವು ತೆರಳುತ್ತಿದ್ದೇವೆ. 19ರಂದು ಸಿಇಸಿ ಸಭೆ ನಡೆಯಲಿದ್ದು, 20ರಂದು ಪಟ್ಟಿ ಅಂತಿಮವಾಗಬಹುದು" ಎಂದು ತಿಳಿಸಿದರು.

21ರಂದು ಗ್ಯಾರಂಟಿ ಸಮಿತಿ ಸದಸ್ಯರ ಸಭೆ:

"ಇನ್ನು ರಾಜ್ಯದಲ್ಲಿ ತಾಲೂಕು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳ ಸಭೆಯನ್ನು 21ರಂದು ನಡೆಸಲಿದ್ದೇವೆ. ಇವರೆಲ್ಲರಿಗೂ ಲೋಕಸಭೆ ಚುನಾವಣೆಯ ಜವಾಬ್ದಾರಿ ನೀಡಲಾಗುವುದು" ಎಂದು ತಿಳಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ