LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಜಲಮಂಡಳಿ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು 2025ರ ನೂತನ ವರ್ಷದ ಕ್ಯಾಲೆಂಡರ್ ಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಬಿಡುಗಡೆಗೊಳಿಸಿದರು.

ವಜ್ರಮಹೋತ್ಸವದ ಸಂಭ್ರಮದಲ್ಲಿರುವ ಬೆಂಗಳೂರು ಜಲಮಂಡಳಿಯು ಸಾರ್ಥಕ 60 ಸಾಧನೆ ಮತ್ತಷ್ಟು ಎಂಬ ಘೋಷವ್ಯಾಕ್ಯದೊಂದಿಗೆ ಕ್ಯಾಲೆಂಡರ್ ಹೊರತಂದಿದೆ.

ಸದರಿ ಕ್ಯಾಲೆಂಡರ್ ನಲ್ಲಿ ಬೆಂಗಳೂರು ಎಂಬ ಮಾಯಾನಗರಿಗೆ 1896ರಿಂದ ಹೆಸರಘಟ್ಟದಿಂದ ಹಾಗೂ 1933ರ ತಿಪ್ಪೆಗೊಂಡನಹಳ್ಳಿಯಿಂದ ನೀರು ಸರಬರಾಜುವಿನ ಅಪರೂಪದ ಚಿತ್ರಗಳು, 1964ರಲ್ಲಿ ಜಲಮಂಡಳಿ ಸ್ಥಾಪನೆ, ಕಾವೇರಿ ನದಿಯಿಂದ ಬೆಂಗಳೂರಿಗೆ ನೀರು ಪೂರೈಸುವ ಮೊದಲ ಹಂತದ ಯೋಜನೆಯಿಂದಿಡಿದು ಐದನೇ ಹಂತದ ಯೋಜನೆಯವರೆಗಿನ, ಮಳೆ ನೀರು ಸುಗ್ಗಿ ಕೇಂದ್ರ,ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳು ಅಪರೂಪದ, ಅತ್ಯಾಕರ್ಷಕ ಚಿತ್ರಗಳನ್ನು ಸದರಿ ಕ್ಯಾಲೆಂಡರ್ ಒಳಗೊಂಡಿದೆ. ಬೆಂಗಳೂರಿಗೆ ಸಮರ್ಪಕ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಇದುವರೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಲಾಗಿದೆ.

ಬಿಡುಗಡೆ ಮಾಡಿದ ನಂತರ ಕ್ಯಾಲೆಂಡರ್ ನೋಡಿ ಉಪಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್, ಮಂಡಳಿಯ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಮದನ್ ಮೋಹನ್, ಪ್ರಧಾನ ಮುಖ್ಯ ಎಂಜನಿಯರ್ ‌ಸುರೇಶ,ಮುಖ್ಯ ಎಂಜನಿಯರ್ ಗಳು,ಜಲಮಂಡಳಿ ನೌಕರರ ಸಂಘದ ಅಧ್ಯಕ್ಷ ಬಿ.ಕೆ.ಮರಿಯಪ್ಪ,ಪ್ರಧಾನ ಕಾರ್ಯದರ್ಶಿ ಗೋವಿಂದರಾಜಲು ಸೇರಿದಂತೆ ಅಧಿಕಾರಿಗಳು ಇದ್ದರು.

ಇದೇ ಸಂದರ್ಭದಲ್ಲಿ ಜಲಮಂಡಳಿ ವತಿಯಿಂದ ‌ಉಪಮುಖ್ಯಮಂತ್ರಿಗಳು ಕ್ರಿಕೆಟ್ ಪಂದ್ಯವೊಂದರಲ್ಲಿ ಬ್ಯಾಟ್ ಮಾಡುತ್ತಿರುವ ಅಪರೂಪದ ಅವರ ಚಿತ್ರವನ್ನು ನೆನಪಿನ ಕಾಣಿಕೆಯಾಗಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ