LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನವ ನರಸಿಂಹ ವಜ್ರಕವಚವನ್ನು ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇಗುಲಕ್ಕೆ ಸಮರ್ಪಣೆ



ಬೆಂಗಳೂರು : ನವ ನರಸಿಂಹ ವಜ್ರಕವಚವನ್ನು ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇಗುಲಕ್ಕೆ  ದೇವಾಲಯದ ಭಕ್ತರು ಧರ್ಮದರ್ಶಿಗಳು ಹಾಗೂ ಟ್ರಸ್ಟ್ ನ ಅಧ್ಯಕ್ಷರಾದ ಡಾ .ಶ್ರೀನಿವಾಸಮೂರ್ತಿ ತಿಳಿಸಿದರು.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,  ರಾಮನಗರ ಜಿಲ್ಲೆ, ಮಾಗಡಿ ತಾಲ್ಲೂಕ್ ಸಾವನದುರ್ಗದ ಲ್ಲಿ ನೆಲೆಸಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ದೇಗುಲವು ಅತ್ಯಂತ ಪುರಾತನ ಪ್ರಸಿದ್ಧವಾದುದು, ಅಲ್ಲದೆ ಈ ಸ್ವಾಮಿಯು ನಮ್ಮೆಲ್ಲರ ಕುಲಾಧ್ಯವವು ಹೌದು. ಮೇಲ್ಕಂಡ ನಮ್ಮ ಟ್ರಸ್ಟ್ ವತಿಯಿಂದ  ಶ್ರೀ ಲಕ್ಷ್ಮೀನರಸಿಂಹ ನರಸಿಂಹ ದೇಗುಲಕ್ಕೆ ಸುಮಾರು 30ಕೆಜಿ ಬೆಳ್ಳಿಯಲ್ಲಿ ನೂತನವಾಗಿ ತಯಾರಿಸಿರುವ ನವನರಸಿಂಹ ವಜ್ರಕವಚವನ್ನು " ನೀಡಲು ದೈವ ಪ್ರೇರಣೆಯಾಗಿದೆ.


ನಾಡಿನ ಗಣ್ಯಮಾನ್ಯರ ಸಮಕ್ಷಮದಲ್ಲಿ ಹಾಗೂ ನಿಮ್ಮೆಲ್ಲರ ಸಮ್ಮುಖದಲ್ಲಿ ಶ್ರೀ ಸಾವನದುರ್ಗದ ಲಕ್ಷ್ಮೀನರಸಿಂಹಸ್ವಾಮಿ ದೇಗುಲಕ್ಕೆ ದಿನಾಂಕ 28-01-2026 ನೇ ಬುಧವಾರದಂದು ಬೆಳಿಗ್ಗೆ 9-45 ರಿಂದ 10-30ರ ಒಳಗೆ ಅರ್ಪಿಸಲಿದ್ದೇವೆ. ಇನ್ನೂ ವಜ್ರ ಕವಚ ಸಂಪೂರ್ಣವಾಗಿ ನಮ್ಮ ಕುಟುಂಬ ಹಾಗೂ ಮನೆತನದವರ ಸೇರಿಕೊಂಡು ಸಮರ್ಪಿಸಲಾಗುತ್ತದೆ ಅಂದಾಜು ಈಗಿನ ಲೆಕ್ಕಾಚಾರದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಹಾಕಲಿದೆ ಎಂದರು.



ಲಕ್ಷ್ಮೀ ನರಸಿಂಹ ಸ್ವಾಮಿಯ ಪವಾಡ ರೋಚಕವಾಗಿದ್ದು ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ಗೊತ್ತಿಲ್ಲದೆಯೇ ಹಲವು ಒಳಿತುಗಳು ಆಗಿದ್ದಾವೆ, ನಾನು ಒಬ್ಬ ವೈದ್ಯನಾಗಿಯೂ ಅದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ ನನ್ನ ಸ್ವತಹ ಅನುಭವದಲ್ಲಿಯೇ ಒಂದು ರೋಚಕತೆ ನಡೆದಿರುವುದು ಕಣ್ಣಮುಂದೆ ಇದೆ ಹೀಗಾಗಿ ನಾನು ಹಲವು ವರ್ಷಗಳಿಂದ ಭಕ್ತನಾಗಿ ಸೇವೆ ಮಾಡಿಕೊಂಡು ಬರುತ್ತಿದ್ದೇನೆ ಎಂದರು.


ಕಾರ್ಯಕ್ರಮಕ್ಕೆ ಮಾಜಿ ಪ್ರಧಾನ ಮಂತ್ರಿಗಳಾದ ಎಚ್ ಡಿ ದೇವೇಗೌಡ ೇಂದ್ರ ಸಚಿವರಾದ ಹೆಚ್‍ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭಾಗವಹಿಸಲಿದ್ದಾರೆ ಅಲ್ಲದೆ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.


ಸುದ್ದಿಗೋಷ್ಠಿಯಲ್ಲಿ ಬೆಂಗಳೂರಿನಲ್ಲಿರುವ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಪ್ರಶ್ನೆಗಳು ಅಧ್ಯಕ್ಷರು ಉಪಾಧ್ಯಕ್ಷರು ಖದಂಚಿಗಳು ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ