LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರುಚಿಕರ ಉಪಹಾರ, ಮಧ್ಯಾಹ್ನದ ಊಟ, ವ್ಯವಸ್ಥಿತ ವಿತರಣೆ; ತೃಪ್ತರಾದ 1.35 ಲಕ್ಷಕ್ಕೂ ಅಧಿಕ ಜನಸಾಗರ

ಹುಬ್ಬಳ್ಳಿ  : ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಐತಿಹಾಸಿಕ ಕಾರ್ಯಕ್ರಮಕ್ಕೆ ಎರಡು ಲಕ್ಷಕ್ಕೂ ಅಧಿಕ ಜನಸ್ತೋಮ ಭಾಗವಹಿಸಿತ್ತು.

ಸಮಾರಂಭಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ರುಚಿ, ಶುಚಿಯಾದ ಊಟ, ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.ಕಾರ್ಯಕ್ರಮಕ್ಜೆ ಆಗಮಿಸಿದ್ದವರಿಗೆ ಶಿಸ್ತುಬದ್ದವಾಗಿ ಆಹಾರ ವಿತರಣೆಗೆ ವ್ಯವಸ್ಥೆಗೆ ವ್ಯಾಪಕ ಸಿದ್ಧತೆ ಮಾಡಲಾಗಿತ್ತು. ರುಚಿಕರವಾದ ಉಪಹಾರ ಹಾಗೂ ಮಧ್ಯಾಹ್ನದ ಊಟವನ್ನು ಶಿಸ್ತುಬದ್ಧವಾಗಿ ವಿತರಣೆ ಮಾಡಲಾಯಿತು.

ಭಾರೀ ಜನಸಂದಣಿ ಇದ್ದರೂ ಸಹ, ಬೆಳಿಗ್ಗೆ 30 ಸಾವಿರಕ್ಕೂ ಅಧಿಕ ಜನರಿಗೆ ಉಪಹಾರ ವಿತರಿಸಲಾಯಿತು.

ಊಟ, ಉಪಹಾರ ವಿತರಣೆಗೆ ಒಟ್ಟು 124 ಕೌಂಟರ್‌ಗಳನ್ನು ಸ್ಥಾಪಿಸಲಾಗಿತ್ತು. ಬೆಳಗಿನ ಉಪಹಾರವಾಗಿ 30,000 ಜನರಿಗೆ ಉಪ್ಪಿಟ್ಟು ವಿತರಣೆ ಮಾಡಲಾಗಿದೆ. ನಂತರ ಮಧ್ಯಾಹ್ನದ ಊಟವಾಗಿ ಪಲಾವ್, ಮೊಸರನ್ನ, ಮೈಸೂರು ಪಾಕ್ ಹಾಗೂ ಸೇರುವಾ ನೀಡಲಾಯಿತು.
ಒಟ್ಟು 1.50 ಲಕ್ಷಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದಲ್ಲದೆ, 2 ಲಕ್ಷ ಜನರಿಗೆ ವಾಟರ್ ಬಾಟಲ್ ವ್ಯವಸ್ಥೆ ಮಾಡಲಾಗಿತ್ತು.ಉಪಹಾರ, ಊಟದ ಸಿದ್ಧತೆಗಾಗಿ 300 ಜನ, ಊಟದ ವಿತರಣೆಗಾಗಿ 200 ಸಿಬ್ಬಂದಿ ಹಾಗೂ ಸ್ವಚ್ಛತಾ ಕಾರ್ಯಕ್ಕೆ 150 ಕಾರ್ಮಿಕರನ್ನು ನಿಯೋಜಿಸಲಾಗಿತ್ತು.

ಊಟದ ನಂತರ ಜನರಿಗೆ ಕೈ ತೊಳೆಯುವ ವ್ಯವಸ್ಥೆಗೆ 20 ನೀರಿನ ಟ್ಯಾಂಕರ್‌ಗಳನ್ನು ನಿಲ್ಲಿಸಲಾಗಿತ್ತು.ಆಹಾರ ವಿತರಣೆಯಲ್ಲಿ ಶುದ್ಧತೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಅಡಿಗೆ ತಯಾರಿಕೆ, ಊಟ ಬಡಾವಣೆ ಮತ್ತು ಸ್ವಚ್ಛತಾ ಕಾರ್ಯಗಳು ವಿವಿಧ ವಿಭಾಗದ ಕಾರ್ಮಿಕರ ಸಮನ್ವಯದಿಂದ ನಡೆದವು.

ಜನಸಂದಣಿ ಹೆಚ್ಚಿದ್ದರೂ ಸಹ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರು.

ಒಟ್ಟಾರೆ ಭಾರೀ ಜನಸಾಗರದ ನಡುವೆಯೂ ಆಹಾರ ವ್ಯವಸ್ಥೆಯನ್ನು ಅತ್ಯುತ್ತಮವಾಗಿ, ಅಚ್ಚುಕಟ್ಟಾಗಿ ನಿರ್ವಹಿಸಿದ ಸಹಾಯಕ ಪೊಲೀಸ್ ಆಯುಕ್ತ ಮಂಜುನಾಥ ಬಳಗಾನೂರಮಠ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ನಿಗಮದ ಕಾರ್ಯಪಾಲಕ ಅಭಿಯಂತರ ಪ್ರಸನ್ನಕುಮಾರ, ಜವಾಹರ ಜೋಗಿ, ಚೇತನಕುಮಾರ,
ಅವರ ನೇತೃತ್ವದಲ್ಲಿ ಸಮರ್ಥವಾಗಿ ಹಾಗೂ ಶಿಸ್ತುಬದ್ಧವಾಗಿ ನಿರ್ವಹಿಸಲಾಯಿತು.

ಅದ್ಭುತವಾದ ಕಾರ್ಯಕ್ರಮ ಮತ್ತು ರುಚಿಕರವಾದ ಊಟದಿಂದ ತೃಪ್ತರಾದ ಸಾರ್ವಜನಿಕರು, ಆಯೋಜಕರು
ನಿರ್ವಹಿಸಿದ ಕಾರ್ಯವನ್ನು ಶ್ಲಾಘಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ