LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಗಣೇಶ ಮೂರ್ತಿಗಳ ವಿಸರ್ಜನೆಯ ವಿವರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 31 ನೇ ಅಕ್ಟೋಬರ್ 2025 ರಂದು 1.29 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದ್ದು, 5 ದಿನಗಳಲ್ಲಿ ಒಟ್ಟು 5.91 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.

ನಗರದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಪಾಲಿಕೆಯ ಎಲ್ಲಾ ವಲಯಗಳಲ್ಲಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ಸಂಚಾರಿ ವಾಹನ (ಮೊಬೈಲ್ ಟ್ಯಾಂಕರ್) ಗಳ ವ್ಯವಸ್ಥೆ ಕಲ್ಪಿಸಲಾಗಿತ್ತು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಮುಖ ಕೆರೆಗಳ ಅಂಗಳದಲ್ಲಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ಗಳ ಅಳವಡಿಕೆ, ನುರಿತ ಈಜುಗಾರರ/ಜೀವ ರಕ್ಷಕರ ನಿಯೋಜನೆ, ಸಿಸಿಟಿವಿ ಅಳವಡಿಕೆ, ವಿದ್ಯುತ್ ದೀಪಗಳ ಸೌಲಭ್ಯ ಹಾಗೂ ಪೆಂಡಾಲ್ ವ್ಯವಸ್ಥೆ ಮಾಡಿಕೊಂಡು ಯಾವುದೇ ಅಹಿತಕರ ಘಟನೆಗಳ ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಪ್ರಮುಖ ಕಲ್ಯಾಣಿಗಳ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಕಲ್ಯಾಣಿಗಳ ಬಳಿ ಗಣೇಶ ವಿಸರ್ಜನೆ ಮಾಡಿದ ವೇಳೆ ಸಂಗ್ರಹವಾಗುವ ತ್ಯಾಜ್ಯವನ್ನು ಆಟೋ ಟಿಪ್ಪರ್ ಗಳ ಮೂಲಕ ವಿಲೇವಾರಿ ಮಾಡಲಾಗಿದೆ.

*ಕಲ್ಯಾಣಿಗಳ ಸ್ವಚ್ಛತೆ ಕಾರ್ಯ:*

ನಗರದಲ್ಲಿ ಹಲಸೂರು, ಹೆಬ್ಬಾಳ, ಯಡಿಯೂರು, ಸ್ಯಾಂಕಿ ಕೆರೆ ಅಂಗಳದ ಕಲ್ಯಾಣಿಗಳಲ್ಲಿ ಹೆಚ್ಚು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದು, ಆ ಕಲ್ಯಾಣಿಗಳಲ್ಲಿ ಹೂಳೆತ್ತುವ ಕಾರ್ಯ ನಡೆಯಲಿದೆ. ಅದರಂತೆ ಪ್ರಮುಖ ಕಲ್ಯಾಣಿಗಳಲ್ಲಿ ಮೇಲೆ ತೇಲುವಂತ ವಸ್ತುಗಳನ್ನು ಪ್ರತಿನಿತ್ಯ ಮುಂಜಾನೆಯೇ ತೆರವುಗೊಳಿಸಲಿದ್ದಾರೆ.

ಯಡಿಯೂರು ಕೆರೆ ಕಲ್ಯಾಣಿಯಲ್ಲಿ 10ನೇ ಸೆಪ್ಟೆಂಬರ್ 2025 ರಂದು, ಹೆಬ್ಬಾಳ ಕೆರೆ ಕಲ್ಯಾಣಿಯಲ್ಲಿ ನಾಳೆ (02-09-2025) ಹಾಗೂ ಹಲಸೂರು ಕೆರೆ ಕಲ್ಯಾಣಿಯಲ್ಲಿ ಇಂದು (01-09-2025) ಮತ್ತು ನಾಳೆ (02-09-2025) ಹೂಳೆತ್ತುವ ಕಾರ್ಯವಿದ್ದು, ಈ ವೇಳೆ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶವಿರುವುದಿಲ್ಲ.

*5,91,683 ಗಣೇಶ ಮೂರ್ತಿಗಳ ವಿಸರ್ಜನೆ:*

ನಗರದಲ್ಲಿ ಆಗಸ್ಟ್ 27 ರಂದು 2,19,153 ಗಣೇಶ ಮೂರ್ತಿಗಳು, 28 ರಂದು 73,959 ಗಣೇಶ ಮೂರ್ತಿಗಳು, 29 ರಂದು 1,14,402 ಗಣೇಶ ಮೂರ್ತಿಗಳು, 30 ರಂದು 54,653 ಗಣೇಶ ಮೂರ್ತಿಗಳು ಹಾಗೂ 31 ರಂದು 1,29,516 ಗಣೇಶ ಮೂರ್ತಿಗಳು ಸೇರಿದಂತೆ *5 ದಿನಗಳಲ್ಲಿ ಒಟ್ಟು 5,91,683 ಲಕ್ಷ* ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.

*ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು 31-08-2025 ರಂದು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ:*

ಪೂರ್ವ ವಲಯ: 61,680

ಪಶ್ಚಿಮ ವಲಯ: 9,050

ದಕ್ಷಿಣ ವಲಯ: 42,274

ಬೊಮ್ಮನಹಳ್ಳಿ ವಲಯ: 1,862

ದಾಸರಹಳ್ಳಿ ವಲಯ: 231

ಮಹದೇವಪುರ ವಲಯ: 3,612

ಆರ್.ಆರ್.ನಗರ ವಲಯ: 3,329

ಯಲಹಂಕ ವಲಯ: 7,478

*ಒಟ್ಟು: 1,29,516*

*ಹೆಚ್ಚಿನ ಮಾಹಿತಿಗಾಗಿ ವಲಯವಾರು ಪ್ರತ್ಯೇಕ ಹಾಗೂ 5 ದಿನಗಳ ಅಂಕಿ-ಅಂಶಗಳ ಪ್ರತಿಯನ್ನು ಲಗತ್ತಿಸಲಾಗಿದೆ.*
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ