LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು

ಬೆಂಗಳೂರು: ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ ಕೈಗಾರಿಕಾ ಉದ್ದೇಶಕ್ಕೆ ರೈತರು ಸ್ವಯಂಪ್ರೇರಿತವಾಗಿ ಬಿಟ್ಟುಕೊಡಲು ಒಪ್ಪಿರುವ 120 ಎಕರೆ ಜಮೀನಿಗೆ ಪ್ರತೀ ಎಕರೆಗೆ 2.70 ಕೋಟಿ ರೂ. ಪರಿಹಾರವನ್ನು ಭೂದರ ನಿರ್ಧಾರಣಾ ಸಲಹಾ ಸಮಿತಿ ನಿಗದಿಪಡಿಸಿ ಕೆಐಎಡಿಬಿಗೆ ಶಿಫಾರಸು ಮಾಡಿದೆ.

ಕೆಐಎಡಿಬಿ ವಿಶೇಷ ಜಿಲ್ಲಾಧಿಕಾರಿ ಎ.ಎನ್.ರಘುನಂದನ್ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿನ ಅರವಿಂದ ಭವನದಲ್ಲಿ ನಡೆದ ಅಧಿಕಾರಿಗಳು ಹಾಗೂ ಭೂಮಾಲೀಕರ ಜಂಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ತೀರ್ಮಾನವನ್ನು ಕೆಐಎಡಿಬಿ ಮಂಡಳಿಯ ಅನುಮೋದನೆಗಾಗಿ ಕಳಿಸಿ ಕೊಡಲಾಗುವುದು. ಪರಿಹಾರವನ್ನು ಹಣದ ರೂಪದಲ್ಲಿ ತೆಗೆದುಕೊಳ್ಳಲು ಇಷ್ಟವಿಲ್ಲದಿದ್ದರೆ ಪ್ರತೀ ಎಕರೆ ಕೃಷಿ ಜಮೀನಿಗೆ ಅಭಿವೃದ್ಧಿ ಪಡಿಸಿದ ಕೈಗಾರಿಕಾ ಬಡಾವಣೆಯಲ್ಲಿ 10,781 ಚದರ ಅಡಿ ಜಾಗವನ್ನು ಪಡೆದುಕೊಳ್ಳುವುದಕ್ಕೂ ಅವಕಾಶ ನೀಡಲಾಗಿದೆ ಎಂದು ರಘುನಂದನ್ ತಿಳಿಸಿದ್ದಾರೆ.

ಈ ಜಮೀನುಗಳನ್ನು ರೈತರು ತಾವಾಗಿಯೇ ಬಿಟ್ಟುಕೊಡುತ್ತಿದ್ದು, ಈ ಸಂಬಂಧ ಕೆಐಎಡಿಬಿ ಕಾಯ್ದೆಯನುಸಾರ ಇದೇ ತಿಂಗಳ 16ರಂದು ಅಂತಿಮ ಅಧಿಸೂಚನೆ ಹೊರಡಿಸಿ, ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿತ್ತು. ಈಗ ನಿಗದಿಪಡಿಸಿರುವ ಪರಿಹಾರ ದರವು ದೇವನಹಳ್ಳಿ ಭಾಗದಲ್ಲೇ ಅತ್ಯಂತ ಹೆಚ್ಚಿನದಾಗಿದೆ. ಸಂತ್ರಸ್ತ ರೈತರಿಗೆ ನ್ಯಾಯಯತ ಪರಿಹಾರ ಕೊಡಬೇಕೆಂಬುದು ಸರಕಾರದ ಆಶಯವಾಗಿದೆ ಎಂದು ಅವರು ನುಡಿದಿದ್ದಾರೆ.

ಕೆಐಎಡಿಬಿ ಭೂಸ್ವಾಧೀನಾಧಿಕಾರಿ ಸೂರಜ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸುTB ಡ್ಯಾಂ ಗೆ ಕ್ರಸ್ಟಿಗೆ ಅಳವಡಿಕೆ ನೀರು ಪೋಲಾಗುವುದನ್ನು ತಡೆಗಟ್ಟ ಅಧಿಕಾರಿವರ್ಗರಸ್ತೆ ಡಾಂಬರಿಕರಣದ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿ ನಿರ್ವಹಿಸಿ:  ವೆಂಕಟಾಚಲಪತಿಜುಲೈ 1 ರಿಂದ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ” ಆರಂಭ : ಕೃಷ್ಣ ಬೈರೇಗೌಡದೇಶಿಯ ಉಕ್ಕು ಉದ್ಯಮಕ್ಕೆ ಡಿಜಿಟಲ್ ಸ್ಪರ್ಶ; ವಾರ್ಷಿಕ 400 ದಶಲಕ್ಷ ಟನ್ ಉತ್ಪಾದನೆಯತ್ತ ಭಾರತಮಾವು ಬೆಳೆಗಾರರ ಸಂಕಷ್ಟ; ಕೇಂದ್ರದ ಕೃಷಿ ಸಚಿವರನ್ನು ಭೇಟಿಯಾದ ಹೆಚ್.ಡಿ.ಕುಮಾರಸ್ವಾಮಿಆಡುಗೋಡಿಯ ಸರ್ಕಾರಿ ಮಾದರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಿಟ್ ವಿತರಣೆಪೋಸ್ಟರ್ ಅಭಿಯಾನ ನಮಗೂ ಬರುತ್ತೆ, ಪುಂಡಪೋಕರಿಗಳ ಪೋಸ್ಟರ್‌ಗಳಿಗೆ ನಾನು ಉತ್ತರಿಸಲ್ಲಕಬ್ಬನ್ ಪಾರ್ಕ್ ನಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಪುನರಾರಂಭಬೆಳಗಾವಿಯಲ್ಲಿ 15 ದಿನಗಳ ಅಭಿನಯ ಸಹಿತ ರಂಗಸಂಗೀತ ತರಬೇತಿ ಶಿಬಿರ