LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕರೊಂದಿಗೆ ನೇರ ಸಂವಾದ-ಪರಿಣಾಮಕಾರಿ ಆಡಳಿತದತ್ತ ಮತ್ತೊಂದು ಹೆಜ್ಜೆ

ಬೆಂಗಳೂರು : ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಗರಿಕರ ಸಮಸ್ಯೆಗಳನ್ನು ಆಲಿಸಿ, ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ, *ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್* ಅವರು ಇಂದು ಬೆಳಿಗ್ಗೆ 7.00 ಗಂಟೆಗೆ ಅಮೃತಹಳ್ಳಿ ಮುಖ್ಯರಸ್ತೆಯಲ್ಲಿರುವ ನಗರ ಪಾಲಿಕೆಯ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಫೋನ್–ಇನ್ ಕಾರ್ಯಕ್ರಮವನ್ನು ಆಯೋಜಿಸಿ, ನಾಗರಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿದರು.

ಈ ಕಾರ್ಯಕ್ರಮದ ವೇಳೆ ವಿವಿಧ ವಾರ್ಡ್‌ಗಳಿಂದ ಬಂದ ಹಲವು ದೂರಗಳನ್ನು ಆಲಿಸಿ, ಅವುಗಳ ತ್ವರಿತ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

*ಫೋನ್–ಇನ್ ಕಾರ್ಯಕ್ರಮದ ಪ್ರಗತಿ:*

ಸೆಪ್ಟೆಂಬರ್ 26ರಿಂದ ಆರಂಭಗೊಂಡ ಈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮದ ಮೂಲಕ ಕಳೆದ 21 ವಾರಗಳಲ್ಲಿ ಒಟ್ಟು 1177 ಅಹವಾಲುಗಳು ದಾಖಲಾಗಿದ್ದು, ಅವುಗಳಲ್ಲಿ 865 ಅಹವಾಲುಗಳಿಗೆ ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಉತ್ತರ ನಗರ ಪಾಲಿಕೆ ವ್ಯಾಪ್ತಿಗೆ ಸೇರದ 72 ಅಹವಾಲುಗಳನ್ನು ಸಂಬಂಧಪಟ್ಟ ಇತರೆ ನಗರ ಪಾಲಿಕೆಗಳು ಹಾಗೂ ಇಲಾಖೆಗಳಿಗೂ ವರ್ಗಾಯಿಸಲಾಗಿದ್ದು, ಉಳಿದ 203 ಅಹವಾಲುಗಳ ಕುರಿತು ತ್ವರಿತ ಕ್ರಮ ಜರುಗಿಸುವಂತೆ ಆಯುಕ್ತರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

*ಇಂದಿನ ಕಾರ್ಯಕ್ರಮದ ವಿವರ:*

ಇಂದು ನಡೆದ ಫೋನ್–ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 60 ಕರೆಗಳು ಬಂದಿದ್ದು, ಅವುಗಳ ಮೂಲಕ ಒಟ್ಟು 77 ಅಹವಾಲುಗಳು ದಾಖಲಾಗಿವೆ. ಎಲ್ಲಾ ಅಹವಾಲುಗಳನ್ನು ಪರಿಶೀಲಿಸಿ, ತಕ್ಷಣ ಸ್ಪಂದಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

*ರಸ್ತೆಗಳ ಸಮರ್ಪಕ ನಿರ್ವಹಣೆಗೆ ಆದ್ಯತೆ:*

ರಸ್ತೆ ನಿರ್ವಹಣೆಗೆ ಸಂಬಂಧಿಸಿದಂತೆ 35 ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯಗಳಲ್ಲಿ ಗುಣಮಟ್ಟ ಕಾಪಾಡಿಕೊಂಡು, ಆದ್ಯತೆಯ ಆಧಾರದಲ್ಲಿ ಕೆಲಸಗಳನ್ನು ವೇಗಗೊಳಿಸಿ ಸಾರ್ವಜನಿಕರಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

*ತ್ಯಾಜ್ಯ ನಿರ್ವಹಣೆಗೆ ಒತ್ತು:*

ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಸಂಬಂಧಿಸಿದಂತೆ 16 ಅಹವಾಲುಗಳು ದಾಖಲಾಗಿದ್ದು, ಎಲ್ಲಾ ವಾರ್ಡ್‌ಗಳಲ್ಲಿ ಸಮಯಪಾಲನೆಯೊಂದಿಗೆ ತ್ಯಾಜ್ಯ ಸಂಗ್ರಹಣೆ ನಡೆಯುವಂತೆ ವೈಜ್ಞಾನಿಕ ವಿಲೇವಾರಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಸಂಬಂಧಪಟ್ಟ ವಿಭಾಗಗಳಿಗೆ ಸೂಚಿಸಿದರು.

*ಅಪಾಯ ಸ್ಥಿತಿಯಲ್ಲಿರುವ ಮರಗಳ / ರೆಂಬೆ ಕೊಂಬೆಗಳ ತೆರವು ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ:*

ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಅಪಾಯಸ್ಥಿತಿಯಲ್ಲಿರುವ ಮರ ರೆಂಬೆ ಕೊಂಬೆಗಳನ್ನು ಗುರುತಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿರಂತರವಾಗಿ ಮುಂಜಾಗ್ರತಾ ಕ್ರಮ ವಹಿಸಲಾಗುತ್ತಿದ್ದು, ಈ ಕುರಿತು 6 ದೂರುಗಳು ಇಂದಿನ ಫೋನ್ ಇನ್ ಕಾರ್ಯಕ್ರಮದಲ್ಲಿ ದಾಖಲಾಗಿದ್ದು, ಇದಕ್ಕೆ ತ್ವರಿತವಾಗಿ ಸ್ಪಂದಿಸುವಂತೆ ಸಂಬಂಧಪಟ್ಟ ಅರಣ್ಯ ವಿಭಾಗದ ಅಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದರು.

*ಹೆಚ್ಚಿನ ಮಾಹಿತಿ:*

ಕಳೆದ 21 ವಾರಗಳಲ್ಲಿ ಹಾಗೂ ಇಂದಿನ ದಿನ ವಿವಿಧ ವಿಭಾಗಗಳು ಮತ್ತು ಇಲಾಖೆಗಳ ಮೂಲಕ ಸ್ವೀಕರಿಸಲಾದ ಅಹವಾಲುಗಳ ವಿವರವಾದ ಪ್ರಗತಿ ಪಟ್ಟಿಯನ್ನು ಲಗತ್ತಿಸಲಾಗಿದೆ.

*ಪ್ರತಿ ಶುಕ್ರವಾರ ಫೋನ್–ಇನ್ ಕಾರ್ಯಕ್ರಮ:*

ನಾಗರಿಕರ ಸಮಸ್ಯೆಗಳಿಗೆ ನೇರ ಪರಿಹಾರ ಒದಗಿಸುವ ಹಾಗೂ ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿಯನ್ನು ಪರಿಶೀಲಿಸುವ ಉದ್ದೇಶದಿಂದ, ಆಯುಕ್ತರ ಫೋನ್–ಇನ್ ಕಾರ್ಯಕ್ರಮವು ಪ್ರತಿ ಶುಕ್ರವಾರವೂ ನಿಯಮಿತವಾಗಿ ನಡೆಯಲಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ