
ಬೆಂಗಳೂರು ಪಶ್ವಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪಶ್ವಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಯಲಿ, ಆ ಸ್ಥಳದಲ್ಲಿ ಪ್ರತಿಯೊಂದು ಕಾಮಗಾರಿಯ ಸ್ಥಳದಲ್ಲಿ ನಾಗರಿಕ ಘೋಷಣಾ ಫಲಕ (Citizen Charter Board) ಪ್ರದರ್ಶಿಸಬೇಕು. ಜೊತೆಗೆ ನಿರ್ದಿಷ್ಟ ಕಾಲ ಮಿತಿಯೊಳಗೆ ಕೆಲಸಗಳನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸಲು ಸೂಚನೆ ನೀಡಿದರು.
ಪ್ರತಿಯೊಂದು ಕಾಮಗಾರಿ ನಡೆಯುವ ಸ್ಥಳದಲ್ಲೂ ಸುರಕ್ಷತಾ ಕ್ರಮಗಳು — ಪ್ರತಿಫಲಕಗಳು(reflectors), ಸೂಚನಾ ಫಲಕಗಳು(signage boards), ಬ್ಯಾರಿಕೇಡ್ಸ್ ಸೇರಿದಂತೆ ಇನ್ನಿತರ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದು, ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆ ಅತ್ಯಂತ ಪ್ರಾಮುಖ್ಯತೆಯ ವಿಷಯ. ಆದ್ದರಿಂದ ಕಾಮಗಾರಿ ನಡೆಯುವ ಸ್ಥಳದಲ್ಲಿ ಕಡ್ಡಾಯವಾಗಿ ಸುರಕ್ಷಾ ಕ್ರಮಗಳನ್ನು ಕೈಗೊಂಡು ಕಾಮಗಾರಿ ನಡೆಸಲು ಸೂಚನೆ ನೀಡಿದರು.

ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು. ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ಯಾವುದೇ ಅಧಿಕಾರಿಯಾಗಲಿ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈ ವೇಳೆ ಅಭಿವೃದ್ಧಿ ಆಯುಕ್ತರಾದ ದಿಗ್ವಿಜಯ್ ಬೋಡ್ಕೆ, ಮುಖ್ಯ ಇಂಜಿನಿಯರ್ ಆದ ಸ್ವಯಂ ಪ್ರಭಾ, ಕಾರ್ಯಪಾಲಕ ಇಂಜಿನಿಯರ್‌ಗಳು, ಗುತ್ತಿಗೆದಾರರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.