
ಈ ಸಂದರ್ಭದಲ್ಲಿ ಮಾತನಾಡಿದ ಪಾಟೀಲರು, ಈ ಸ್ಥಾವರದಿಂದ ರಕ್ಷಣೆ, ಏರೋಸ್ಪೇಸ್ ಮತ್ತು ಆಟೋಮೋಟಿವ್ ಎಂಜಿನಿಯರಿಂಗ್ ಮುಂತಾದ ಆಧುನಿಕ ಉದ್ಯಮಗಳಿಗೆ ನೆರವಾಗಲಿದೆ ಎಂದಿದ್ದಾರೆ.
ರಾಜ್ಯದ ನೂತನ ಕೈಗಾರಿಕಾ ನೀತಿಯಡಿ ಹೊಸ ಬಗೆಯ ಉದ್ಯಮಗಳಿಗೆ ಆದ್ಯತೆ ಕೊಡಲಾಗಿದೆ. ಕೈಗಾರಿಕಾ ಪ್ರದೇಶಗಳಿಗೆ ಕಾವೇರಿ ಮತ್ತಿತರ ನದೀಮೂಲಗಳಿಂದ ನೀರು ಪೂರೈಸಲು 4,000 ಕೋಟಿ ರೂಪಾಯಿ ಮೊತ್ತದ ಯೋಜನೆ ರೂಪಿಸಲಾಗಿದೆ ಎಂದು ಅವರು ನುಡಿದಿದ್ದಾರೆ.
ಕಾರ್ಯಕ್ರಮದಲ್ಲಿ ಜೆಟ್ವರ್ಕ್ ಕಂಪನಿಯ ರಾಹುಲ್ ಶರ್ಮ ಮತ್ತು ಅಂಕಿತ್ ಫತೇಪುರಿ, ಕೇಂದ್ರ ಐಟಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಶೀಲ್ ಪಾಲ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.