LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನವರಿಗೆ ಏಕಗವಾಕ್ಷಿ ವ್ಯವಸ್ಥೆ ಸಿದ್ಧ: ಎಂ‌ ಬಿ ಪಾಟೀಲ*

ಬೆಂಗಳೂರು: ರಾಜ್ಯ ಸರಕಾರವು ಸರಳ, ಸುಗಮ ಮತ್ತು ಉದ್ಯಮಸ್ನೇಹಿ ಉಪಕ್ರಮಗಳಿಗೆ ಬದ್ಧವಾಗಿದ್ದು, ಜನವರಿಯ ವೇಳೆಗೆ ಏಕಗವಾಕ್ಷಿ ಮಂಜೂರಾತಿ ವ್ಯವಸ್ಥೆಗೆ ಅಗತ್ಯವಿರುವ ತಂತ್ರಾಂಶವನ್ನು ಸಿದ್ಧಪಡಿಸಲಾಗುವುದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳಿಗೆಲ್ಲ ಡಿಸೆಂಬರ್ ಹೊತ್ತಿಗೆ ಈ ತಂತ್ರಾಂಶದ ಭಾಗವಾಗುವಂತೆ ಗಡುವು ಕೊಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ತಿಳಿಸಿದ್ದಾರೆ.

ಈ ಸಂಬಂಧ ಅವರು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಇ-ಆಡಳಿತ ಇಲಾಖೆಯ ಮುಖ್ಯಸ್ಥ ಉಜ್ವಲ್ ಘೋಷ್ , ಕೆಐಎಡಿಬಿ ಸಿಇಒ ಡಾ.ಮಹೇಶ ಸೇರಿದಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಹೂಡಿಕೆ ಯೋಜನೆಗಳಿಗೆ ಮಂಜೂರಾತಿ, ಕೈಗಾರಿಕಾ ನಿವೇಶನ, ಕೈಗಾರಿಕಾ ಪ್ರದೇಶಗಳಲ್ಲಿ ಇರುವ ಸಿಎ ನಿವೇಶನ ಇತ್ಯಾದಿಗಳ ಹಂಚಿಕೆ ಈಗಿರುವ ಸಂಕೀರ್ಣ ಮತ್ತು ಬಹುಹಂತಗಳ ಅನುಮತಿ ವಿಧಾನದಿಂದ ವಿಳಂಬವಾಗುತ್ತಿದೆ. ಇದಕ್ಕೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಇತಿಶ್ರೀ ಹಾಡಲಾಗುವುದು. ಇದಕ್ಕಾಗಿ ಮೈಕ್ರೋಸಾಫ್ಟ್ ಕಂಪನಿಯು ಸಾಫ್ಟ್‌ವೇರ್ ಸಿದ್ಧಪಡಿಸಿದೆ. ಇದರೊಂದಿಗೆ ಎಲ್ಲ ಇಲಾಖೆಗಳ ಜೋಡಣೆ ಬಾಕಿದ್ದು, ಅದನ್ನು ತ್ವರಿತವಾಗಿ ಮಾಡಬೇಕು. ಈ ಉಪಕ್ರಮದ ಪರಿಣಾಮಕಾರಿ ಅನುಷ್ಠಾನದ ಸಂಬಂಧ ಸರಕಾರದ ಮುಖ್ಯ ಕಾರ್ಯದರ್ಶಿಗಳು ಸದ್ಯದಲ್ಲೇ ಇನ್ನೊಂದು ಸಭೆ ನಡೆಸಲಿದ್ದಾರೆ ಎಂದರು.

ಕೈಗಾರಿಕಾ ಅನುಮತಿಗೆ ಏಕಗವಾಕ್ಷಿ ವ್ಯವಸ್ಥೆಯನ್ನು ತರಲಾಗುವುದು ಎಂದು ನಾವು ಮಾತು ಕೊಟ್ಟಿದ್ದೆವು. ಹೊಸ ತಂತ್ರಾಂಶವನ್ನು ಬಳಸುವುದು ಹೇಗೆಂಬ ಬಗ್ಗೆ ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿಗೆ ಸಮರ್ಪಕ ತರಬೇತಿ ಕೊಡಲಾಗುವುದು. ಉದ್ಯಮಿಗಳು ಇನ್ನು ಮುಂದೆ ಹತ್ತಾರು ಇಲಾಖೆಗಳಿಗೆ ಎಡತಾಕುವ ಪ್ರಮೇಯವೇ ಇರುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

ನೂತನ ಏಕಗವಾಕ್ಷಿ ವ್ಯವಸ್ಥೆ ಸಂಪೂರ್ಣ ಆನ್ಲೈನ್ ಆಗಿರಲಿದೆ. ಉದ್ಯಮಿಗಳು ತಮ್ಮ ಪ್ಯಾನ್ ಮತ್ತು ಆಧಾರ್ ಸಂಖ್ಯೆಗಳನ್ನು ನಮೂದಿಸಿದರೆ ಮಿಕ್ಕೆಲ್ಲ ವಿವರಗಳು ತಾವಾಗಿಯೇ ದೊರೆಯುತ್ತವೆ. ಇದು ಸುಲಲಿತ ಕೈಗಾರಿಕಾ ಸಂಸ್ಕೃತಿಯ ಭಾಗವಾಗಿದೆ. ಒಟ್ಟಿನಲ್ಲಿ ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ಡಿಸೆಂಬರಿನಲ್ಲೇ ಮುಗಿಯಲಿದ್ದು, ಜನವರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಉದ್ಘಾಟನೆಗೆ ಸಿದ್ಧವಾಗಲಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಉದ್ಯಮಿಗಳು ಸಾವಿರಾರು ಕೋಟಿ ರೂಪಾಯಿ ಹೂಡುತ್ತಿದ್ದಾರೆ. ನಾವು ಅವರಿಗೆ ಏಕಗವಾಕ್ಷಿ ಅನುಮತಿಯಂತಹ ಸೌಲಭ್ಯಗಳನ್ನು ಒದಗಿಸಬೇಕು. ಇದರಿಂದ ರಾಜ್ಯವು ಮತ್ತಷ್ಟು ಉದ್ಯಮಸ್ನೇಹಿ ಮತ್ತು ತಂತ್ರಜ್ಞಾನದ ಸಮರ್ಥ ಬಳಕೆಯ ತಾಣವಾಗಲಿದೆ ಎಂದು ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ