LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಸ್ಥಾಪನೆ  ಬಂಗಾರದ ಕೆಲಸ: ಸಚಿವ ಮಧು ಬಂಗಾರಪ್ಪ

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ವಿಷಯ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ಫಲಿತಾಂಶ ಸುಧಾರಿಸುವ ಉದ್ದೇಶದಿಂದ  'ಮಿಷನ್ 60+' ಕಾರ್ಯಕ್ರಮ

ದೇವನಹಳ್ಳಿ : ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಸ್ಥಾಪನೆ ನನ್ನ ಪ್ರಕಾರ ಬಂಗಾರದ ಕೆಲಸ. ಒಂದೇ ಕ್ಯಾಂಪಸ್‌ನಲ್ಲಿ ಮಕ್ಕಳಿಗೆ ಎಲ್‌ಕೆಜಿಯಿಂದ ಪಿಯುಸಿವರೆಗೆ ಸತತ 14 ವರ್ಷಗಳ ಕಾಲ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಿದಂತಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.news_1795848052_2_650.webp

ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ಫಲಿತಾಂಶ ಸುಧಾರಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ 'ಮಿಷನ್ 60+' ಕಾರ್ಯಕ್ರಮದಡಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ವಿಷಯ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರವನ್ನು ದೇವನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಇಂದು ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ವರ್ಷದಿಂದ ಮಿಷನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಕಳೆದ ಸಾಲಿನಲ್ಲಿ ಮಿಷನ್ 40+ ಗುರಿ ಸಾಧಿಸಲಾಗಿದೆ. ಈ ಬಾರಿ ಬೆಂಗಳೂರು ನಗರಕ್ಕೆ ಹತ್ತಿರದಲ್ಲಿರುವ ಈ ಮೂರು ಜಿಲ್ಲೆಗಳು ಕನಿಷ್ಠ 70+ ಫಲಿತಾಂಶದ ಗುರಿ ತಲುಪುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಮಿಷನ್ 60+ ಅನ್ನು ಸವಾಲಾಗಿ ಸ್ವೀಕರಿಸಿ, ಮಕ್ಕಳ ಕಲಿಕೆಯಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕು ಎಂದು ಶಿಕ್ಷಕರಿಗೆ ಕರೆ ನೀಡಿದರು.

ಮಕ್ಕಳ ಭವಿಷ್ಯ ರೂಪಿಸುವ ಮಹತ್ವದ ಜವಾಬ್ದಾರಿ ಶಿಕ್ಷಕರ ಮೇಲಿದೆ. ಪ್ರತಿಯೊಂದು ಮಗುವನ್ನೂ ಶಿಕ್ಷಣದ ಮೂಲಕ ಯಶಸ್ಸಿನ ದಡ ಸೇರಿಸುವ ಹೊಣೆಗಾರಿಕೆ ನಿಮ್ಮದಾಗಿದೆ. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ಹಿಂದೆ ನಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಕ್ಷರ ಯೋಜನೆ ಜಾರಿಗೆ ತಂದು, ಮಕ್ಕಳಿಗೆ ಪ್ರತಿನಿತ್ಯ ಒಂದು ರೂಪಾಯಿ ಪ್ರೋತ್ಸಾಹಧನ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳಕ್ಕೆ ಕಾರಣರಾಗಿದ್ದರು ಎಂದು ಸ್ಮರಿಸಿದರು.news_1795848054_4_121.webp

ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಕರಿದ್ದಾರೆ. ಪ್ರತಿಯೊಂದು ಮಗುವೂ ತನ್ನದೇ ಆದ ಕನಸುಗಳನ್ನು ಹೊಂದಿರುತ್ತದೆ. ಆ ಕನಸುಗಳಿಗೆ ಶಕ್ತಿ ತುಂಬಿ, ಅವುಗಳನ್ನು ನನಸಾಗಿಸುವ ದಿಕ್ಕಿನಲ್ಲಿ ಶಿಕ್ಷಕರು ಶ್ರಮಿಸಬೇಕು. ಶಿಕ್ಷಕರ ಪರಿಶ್ರಮ ಮಕ್ಕಳ ಭವಿಷ್ಯದಲ್ಲಿ ಪ್ರತಿಫಲಿಸಬೇಕು. ಮಕ್ಕಳ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮಕ್ಕಳ ಪೌಷ್ಟಿಕಾಂಶದ ಮಟ್ಟ ಸುಧಾರಿಸುವ ಉದ್ದೇಶದಿಂದ ಅಜೀಂ ಪ್ರೇಮ್‌ಜಿ ಅವರು ಸುಮಾರು 1,500 ಕೋಟಿ ರೂಪಾಯಿ ನೆರವು ನೀಡುತ್ತಿದ್ದಾರೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನೂ ಕಲ್ಪಿಸಲಾಗಿದ್ದು, ಗ್ರಾಮೀಣ ಭಾಗದ ಶಾಲೆಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಇಂತಹ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಬೇಕು ಎಂದು ತಿಳಿಸಿದರು.

ಮಿಷನ್ 60+ ಕೇವಲ ಪರೀಕ್ಷಾ ಫಲಿತಾಂಶ ಸುಧಾರಿಸುವ ಕಾರ್ಯಕ್ರಮವಾಗದೆ, ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಮತ್ತು ಅವರ ಭವಿಷ್ಯ ರೂಪಿಸುವ ಆಂದೋಲನವಾಗಬೇಕು. ಶಿಕ್ಷಕರು ಇದನ್ನು ಸವಾಲಾಗಿ ಸ್ವೀಕರಿಸಿ, ಉತ್ತಮ ಫಲಿತಾಂಶ ಸಾಧಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು.news_1795848053_3_364.webp

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್, ಆಕಾಶ್ ಮೆಡಿಕಲ್ ಕಾಲೇಜಿನ ಅಧ್ಯಕ್ಷ ಅಮರ್, ನಿರ್ದೇಶಕ ಮುನಿರಾಜು, ಇಲಾಖೆಯ ವಿವಿಧ ಅಧಿಕಾರಿಗಳಾದ ಕೆ. ವೆಂಕಟೇಶ್, ಸುದೀಪ್, ಹನುಮಂತರಾಯ, ಲಿಂಗರಾಜು, ಫಂಡರಿನಾಥ್, ಅನಿತಾ ನಾಜೀರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾರಾಯಣ ಗುರುಗಳ ಹೆಸರಿನಲ್ಲಿ ಒಂದಾಗಿರುವುದು ಸಮಾಜದ ಶಕ್ತಿ: ಸಚಿವ ಮಧು ಬಂಗಾರಪ್ಪಚನ್ನರಾಯಪಟ್ಟಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಯಶಸ್ವಿಆಶಾ ಕಾರ್ಯಕರ್ತೆಯರ ಕೈ ಹಿಡಿದ ಕಾಂಗ್ರೆಸ್ ಪಕ್ಷಶಾಲಾ-ಕಾಲೇಜುಗಳ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ಪ್ರೋತ್ಸಾಹ ನೀಡಲು ಬದ್ಧ: ಸಚಿವ ಮಧು ಬಂಗಾರಪ್ಪಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಸ್ಥಾಪನೆ  ಬಂಗಾರದ ಕೆಲಸ: ಸಚಿವ ಮಧು ಬಂಗಾರಪ್ಪಐಎಸ್‌ಬಿ ಪಿಜಿಪಿ ವೈಎಲ್ ಎರಡನೇ ತಂಡಕ್ಕೆ  ಬೇಸಿಗೆ ಇಂಟರ್ನ್‌ಶಿಪ್ ನೇಮಕಾತಿಅಪೋಲೊ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆಕಾರ್ಮಿಕ ವರ್ಗ ಎದುರಿಸುತ್ತಿರುವ ಪ್ರಮುಖ ಸವಾಲುಗಳ ಕುರಿತು ನಾಲ್ಕು ಆಯೋಗಗಳಲ್ಲಿ ಚರ್ಚೆತಿರುವಣ್ಣಮಲೈನ ಅರುಣಾಚಲಂ ದೇವಾಲಯದ ಗಿರಿಯಲ್ಲಿ 3.5 KG ತುಪ್ಪದ ದೀಪKTA ಅಧ್ಯಕ್ಷ ಗಣೇಶ್ ರಾವ್ ರಿಂದ ನ.,30ರಂದು ಸಮಾಜಮುಖಿ ಕಾರ್ಯಕ್ರಮ