LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

IIHR, ASC ನಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ

ತುಮಕೂರು:  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಮತ್ತು ಕೃಷಿ ವಿಜ್ಞಾನ ಕೇಂದ್ರ ಹಿರೇಹಳ್ಳಿ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ಮೆ. 29 ರಂದು ತುಮಕೂರಿನ ಕೊರಟಗೆರೆ ತಾಲೂಕಿನ ಡಿ ನಾಗೇನಹಳ್ಳಿ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಪ್ರಾಸ್ತಾವಿಕ ಭಾಷಣ ಮಾಡಿದ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಲೋಗಾ ನಂದ ರವರು ಮಾತಾಡಿ, ಡಿ ನಾಗೇನಹಳ್ಳಿ ಯಲ್ಲಿ ರೈತರು ಕೃಷಿ ವಿಜ್ಞಾನ ಕೇಂದ್ರದ ಹಿಂದಿನ ಒಂದು ಕಾರ್ಯಕ್ರಮವಾದ ಜಲ ಸಂರಕ್ಷಣಾ ಆಂದೋಲನದಲ್ಲಿ ನೀಡಿದ ಸಹಕಾರವನ್ನು ಸ್ಮರಿಸಿ ರೈತರಿಗೆ ಧನ್ಯವಾದ ತಿಳಿಸಿದರು.ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಬಗ್ಗೆ ವಿವರಿಸುತ್ತಾ ಈ ಒಂದು ಆಂದೋಲನವನ್ನು ದೇಶಾದ್ಯಂತ ಎರಡು ವಾರಗಳ ಕಾಲ ಮುಂಗಾರುಪೂರ್ವ ಅವಧಿಯಲ್ಲಿ ಕೈಗೊಂಡಿದ್ದು ಈ ಮೂಲಕ ಕೃಷಿ ವಿಜ್ಞಾನಿಗಳು ರೈತರ ಮನೆ ಬಾಗಿಲಿಗೆ ಬಂದು ಕೃಷಿ ತಂತ್ರಜ್ಞಾನಗಳನ್ನು ರೈತರಿಗೆ ತಿಳಿಸಿಕೊಡಲಿದ್ದಾರೆ ಎಂದು ತಿಳಿಸಿದರು . ನಮ್ಮ ರಾಜ್ಯದಲ್ಲಿಯೂ ಸಹ70 ತಂಡಗಳಲ್ಲಿ ರೈತರ ಜೊತೆ ಆಂದೋಲವನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿ ಭಾರತೀಯ ತೋಟಗಾರಿಕಾ ಸಂಸ್ಥೆಯ ನಿರ್ದೇಶಕರಾದ ಡಾ. ತುಷಾರ್ ಕಾಂತಿ ಬೆಹರಾ ರವರು ಮಾತನಾಡಿ, ವಿಕಿಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರೈತರ ಅನುಕೂಲಕ್ಕಾಗಿ ಭಾರತ ಸರ್ಕಾರವು ದೇಶಾದ್ಯಂತ ಹಮ್ಮಿಕೊಂಡಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ದೇಶದ ಆಹಾರ ಉತ್ಪಾದನೆ ಹಾಗೂ ಪೋಷಕಾಂಶಗಳ ಕೊರತೆಯನ್ನು ನೀಗಿಸುವಿಯಲ್ಲಿ ರೈತರು ನೀಡಿದ ಯೋಗದಾನವನ್ನು ಸ್ಮರಿಸಿದರು. ದೇಶದ ಪ್ರಗತಿಗಾಗಿ ರೈತರು, ವಿಜ್ಞಾನಿಗಳು, ಅಧಿಕಾರಿಗಳು ಹಾಗೂ ಸರ್ಕಾರ ಒಟ್ಟಾಗಿ ಶ್ರಮಿಸಬೇಕಾಗಿದೆ ಎಂದು ಹೇಳಿದರು.ರೈತರು ತಮ್ಮ ಜಮೀನುಗಳಲ್ಲಿ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಸಾವಯವ ಗೊಬ್ಬರಗಳ ಜೊತೆ ಸಮತೋಲಿತ ರಾಸಾಯನಿಕ ಗೊಬ್ಬರಗಳನ್ನು ಬಳಸುವ ಮೂಲಕ ಅದು ಉತ್ತಮ ಇಳುವರಿ ಪಡೆಯುವುದರ ಜೊತೆಗೆ ಉತ್ತಮ ಆದಾಯವನ್ನು ಪಡೆಯಬಹುದು ಎಂದು ಕಿವಿಮಾತು ಹೇಳಿದರು.

ಪ್ರಗತಿಪರ ಕೃಷಿಕರಾದ ಶ್ರೀ ನಾಗರಾಜುರವರು ನೈಸರ್ಗಿಕ ಖ ಕೃಷಿಯ ಉಪಯೋಗಗಳನ್ನು ವಿವರಿಸಿತ್ತ ಸುಮಾರು 15 ವರ್ಷಗಳಿಂದ ತಾವು ನೈಸರ್ಗಿಕ ಕೃಷಿಯನ್ನು ಮಾಡುತ್ತಿದ್ದು ಇದರಲ್ಲಿ ಪಶು ಸಂಗೋಪನೆಯೂ ಸಹ ಉಪಕಾರಿಯಾಗಲಿದೆ ಎಂದು ತಿಳಿಸಿದರು. ನೈಸರ್ಗಿಕ ಕೃಷಿಯಲ್ಲಿ ಖರ್ಚು ಕಡಿಮೆ ಇದ್ದು ಆದಾಯ ಹೆಚ್ಚಾಗಲಿದೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು. ಬಹು ಮಹಡಿ ಬೆಳೆ ಪದ್ಧತಿಯನ್ನು ಅಳವಡಿಸಿಕೊಳ್ಳೋದರಿಂದ ರೈತರು ತಮ್ಮ ತೋಟದಲ್ಲಿನ ಉತ್ಪತ್ತಿಯನ್ನು ಅಧಿಕ ಗೊಳಿಸಿ ಆದಾಯ ವೃದ್ಧಿ ಮಾಡಿಕೊಳ್ಳಬಹುದು. ಎಂದು ಕಿವಿಮಾತು ಹೇಳಿದರು.

ಕೋಳಾಲ ಹೋಬಳಿಯ ಕೃಷಿ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಯಾದ ವೆಂಕಟೇಶ್ ರವರು ಮಾತನಾಡಿ, ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಮೂಲಕ ವಿಜ್ಞಾನಿಗಳು ರೈತರ ಮನೆ ಬಾಗಿಲಿಗೆ ಬಂದು ನವೀನ ತಂತ್ರಜ್ಞಾನಗಳನ್ನು ತಿಳಿಸಿಕೊಡುತ್ತಿದ್ದಾರೆ ಮತ್ತು ರೈತರ ಸಮಸ್ಯೆಗಳಿಗೆ ಪರಿಹಾರಗಳನ್ನು ಸೂಚಿಸುತ್ತಿದ್ದಾರೆ.ಈ ಒಂದು ಕಾರ್ಯಕ್ರಮದ ಉಪಯೋಗವನ್ನು ಜಿಲ್ಲೆಯ ಎಲ್ಲ ರೈತರು ಪಡೆದುಕೊಳ್ಳಬೇಕೆಂದು ತಿಳಿಸಿದರು. ಇದಲ್ಲದೆ ಕೃಷಿ ಇಲಾಖೆ ಮೂಲಕ ಮುಂಗಾರು ಅಂಗಾಮಿಗೆ ಬೇಕಾದ ಬೀಜಗಳ ವಿತರಣೆ ನಡೆಯುತ್ತಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು ಮತ್ತು ಕೃಷಿ ಇಲಾಖೆಯಿಂದ ಇರುವ ಇತರ ಪ್ರಯೋಜನಗಳ ಬಗ್ಗೆಯೂ ರೈತರಿಗೆ ಮನದಟ್ಟು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸುವ ತರಕಾರಿ ಬೀಜಗಳನ್ನು ರೈತರಿಗೆ ವಿತರಿಸಲಾಯಿತು . ದ್ರೋಣ್ ತಂತ್ರಜ್ಞಾನವನ್ನು ಉಪಯೋಗಿಸಿ ಕೃಷಿ ರಾಸಾಯನಿಕಗಳನ್ನು ಸಿಂಪಡಿಸುವ ಬಗೆಗೆ ಮಾಹಿತಿ ನೀಡಲಾಯಿತು ಮತ್ತು ಕೃಷಿಯಲ್ಲಿ ಜಲ ಸಂರಕ್ಷಣೆಯ ಕುರಿತು ಮಾಹಿತಿ ನೀಡಲಾಯಿತು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ