LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಕಲಾಕೃತಿಗಳ ಪ್ರದರ್ಶನ

ಬೆಂಗಳೂರು:ದಕ್ಷಿಣ ಭಾರತದ ಪಶ್ಚಿಮಘಟ್ಟಗಳ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಸಂಬAಧಿಸಿ ವೈವಿಧ್ಯಮಯ ಕಲಾಕೃತಿಗಳ ಪ್ರದರ್ಶನ ಮತ್ತು ರಾಷ್ಟಿçÃಯ (PAINTING EXHIBITION (6TH NOV. 2025) & NATIONAL CONFERENCE (10TH NOV. 2025) ON CONSERVATION & SUSTAINABLE DEVELOPMENT OF WESTERN GHATS OF SOUTH INDIAಕುರಿತು 4-11-2025, ಮಂಗಳವಾರ ಪ್ರಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾಹಿತಿ ಹಂಚಿಕೊಳ್ಳಲಾಯಿತು. ಈಕೋ ವಾಚ್ ಸಂಸ್ಥೆಯ ಸಂಸ್ಥಾಪಕ, ನಟ, ನಿರ್ದೇಶಕ ಸುರೇಶ್ ಹೆಬ್ಳೀಕರ್, ಭಾಗ್ಯ ಅಜಯ್‌ಕುಮಾರ್ ಆರ್ಟ್ ಫೌಂಡೇಶನ್ ಸಂಸ್ಥಾಪಕಿ ಭಾಗ್ಯ, ನಟಿ ಗೀತಪ್ರಿಯಾ, ಪರಿಸರ ಪ್ರಿಯ ಅಕ್ಷಯ್ ಹೆಬ್ಳೀಕರ್, ಕಲಾವಿದರಾದ ಪ್ರದೀಪ್ ಕುಮಾರ್, ಗಣಪತಿ ಅಗ್ನಿಹೋತ್ರಿ ಉಪಸ್ಥಿತರಿದ್ದರು.


ಅಕ್ಷಯ್ ಹೆಬ್ಳೀಕರ್ ಅವರು ಪಶ್ವಿಮಘಟ್ಟ ಪ್ರದೇಶಗಳು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಈಗಾಗಲೇ ಶೇ.೪೦ರಷ್ಟು ಕಾಡು ನಾಶವಾಗಿದೆ. ಪಶ್ಚಿಮಘಟ್ಟ ಪ್ರದೇಶಗಳನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಹಿನ್ನೆಲೆಯಲ್ಲಿ ನಾವು ಜನರಲ್ಲಿ, ವಿಶೇಷವಾಗಿ ಮುಂದಿನ ಪೀಳಿಗೆಯವರನ್ನು ಗುರಿಯಾಗಿಸಿಕೊಂಡು ಜಾಗೃತಿ ಮೂಡಿಸುವ ಅಗತ್ಯವಿದೆ. ಹೀಗಾಗಿ ಈಕೋ ವಾಚ್ ಮತ್ತು ಭಾಗ್ಯ ಅಜೈಕುಮಾರ್ ಆರ್ಟ್ ಫೌಂಡೇಶನ್ ಜಂಟಿಯಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕರ್ನಾಟಕ ಚಿತ್ರಕಲಾ ಪರಿಷತ್‌ನ ಗ್ಯಾಲರಿಯಲ್ಲಿ ಕಲಾಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಇದೇ ಮೊದಲ ಬಾರಿಗೆ ಪಶ್ಚಿಮಘಟ್ಟಗಳಿಂದ ಸ್ಫೂರ್ತಿ ಪಡೆದಿರುವ ಕಲಾವಿದರ ಕಲಾಕೃತಿಗಳನ್ನು ಪ್ರದರ್ಶಿಸಲಾಗುತ್ತಿದೆ. ಈ ಮೂಲಕ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದ್ದೇವೆ. ನವೆಂಬರ್ 10ರಂದು ಚಿತ್ರಕಲಾ ಪರಿಷತ್‌ನ ಅರಸು ಗ್ಯಾಲರಿಯಲ್ಲಿ ಪಶ್ಚಿಮಘಟ್ಟಗಳ ಬಗ್ಗೆ ಅನೇಕ ವಿಚಾರಗಳನ್ನು ಚರ್ಚಿಸಲು ರಾಷ್ಟಿçÃಯ ಸಮ್ಮೇಳನ ಆಯೋಜಿಸಲಾಗಿದೆ. ಎಲ್ಲರೂ ಈ ಕಾರ್ಯಕ್ರಮದಲ್ಲಿ ಮುಕ್ತವಾಗಿ ಭಾಗಿಯಾಗಬಹುದು ಎಂದು ತಿಳಿಸಿದರು.


ಇದೇ ವೇಳೆ ಭಾಗ್ಯ ಅಜಯ್ ಕುಮಾರ್, ಗೀತಪ್ರಿಯಾ ಅವರು ಮಾತನಾಡಿ ಕಾರ್ಯಕ್ರಮ ಎಷ್ಟು ಮಹತ್ವದ್ದಾಗಿದೆ. ಇಂದಿನ ಯುವ ಜನತೆಗೆ ಈ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಕಲಾವಿದರಾದ ಪ್ರದೀಪ್ ಕುಮಾರ್, ಗಣಪತಿ ಅಗ್ನಿಹೋತ್ರಿ ಕಲಾಪ್ರದರ್ಶನ ಕುರಿತು ಮಾಹಿತಿ ನೀಡಿದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ