LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ. 60ರಷ್ಟು ಕನ್ನಡ ನಾಮಫಲಕ ಅಳವಡಿಸಲು 2 ವಾರಗಳ ಕಾಲ ವಿಸ್ತರಣೆ

ಬೆಂಗಳೂರು: ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಮುಂತಾದವುಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉಲ್ಲೇಖಿತ ವಿಶೇಷ ರಾಜ್ಯ ಪತ್ರಿಕೆ ಅಧಿಸೂಚನಾ ಪತ್ರದಲ್ಲಿ ಸೂಚಿಸಿರುತ್ತಾರೆ.

ಅದರಂತೆ, ಈ ಹಿಂದೆ ಮುಖ್ಯ ಆಯುಕ್ತರವರ ಅಧ್ಯಕ್ಷತೆಯಲ್ಲಿ ದಿನಾಂಕ: 02-02-2024 ಮತ್ತು 12-02-2024 ರಂದು ನಡೆದ ಸಭೆಯಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲಾ ವಾಣಿಜ್ಯ ಉದ್ದಿಮೆಗಳ ದಿನಾಂಕ : 28-02-2024 ರೊಳಗೆ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವಂತೆ ಎಲ್ಲಾ ವಾಣಿಜ್ಯದಾರರಿಗೆ ಸೂಚಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ದಿನಾಂಕ: 29-02-2024 ರಿಂದ ಅನ್ವಯವಾಗುವಂತೆ, ಪಾಲಿಕೆಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸದೇ ಇರುವ ವಾಣಿಜ್ಯ ಉದ್ದಿಮೆಗಳನ್ನು ಇಲಾಖಾ ವತಿಯಿಂದ ನೀಡಿರುವ ಉದ್ದಿಮೆ ಪರವಾನಿಗೆಗಳನ್ನು ಅಮಾನತ್ತುಗೊಳಿಸಲು ಹಾಗೂ ಅಂತಹ ವಾಣಿಜ್ಯ ಉದ್ದಿಮೆಗಳನ್ನು ಬೀಗಮುದ್ರೆ (Sealdown) ಮಾಡಲು ಆರೋಗ್ಯ ಇಲಾಖಾವತಿಯಿಂದ ಅಗತ್ಯಕ್ರಮ ಕೈಗೊಳ್ಳಲು ದಿನಾಂಕ: 28-02-2024ರಂದು ಸುತ್ತೋಲೆ ಹೊರಡಿಸಲಾಗಿತ್ತು.

ಮುಂದುವರೆದು, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯವಕಾಶ ಬೇಕೆಂಬುದನ್ನು ಪರಿಗಣಿಸಿ, ಸನ್ಮಾನ್ಯ ಉಪ ಮುಖ್ಯಮಂತ್ರಿಗಳು, ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರ ನಿರ್ದೇಶನದ ಮೇರೆಗೆ ಈಗಾಗಲೇ ನೀಡಲಾಗಿದ್ದ ದಿನಾಂಕ: 29-02-2024ರವರೆಗಿನ ಗಡುವನ್ನು ಸಡಿಲಗೊಳಿಸಿ, ದಿನಾಂಕ: 13-03-2024 ರವರೆಗೆ 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ರವರು ಪತ್ರಿಕಾ ಸ್ಪಷ್ಠೀಕರಣದ ಮೂಲಕ ತಿಳಿಸಿರುತ್ತಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ