LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಿಲೀಲೆ ರಾಜ ವೆಂಕಟಪ್ಪ ನಾಯಕ ಅವರನ್ನು ನಮ್ಮಿಂದ ದೂರ ಮಾಡಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:ರಾಜ್ಯಸಭೆ ಚುನಾವಣೆ ಮತದಾನದ ವೇಳೆಗೆ ಬರುತ್ತೇನೆ ಎಂದು ಹೇಳಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ವಿಧಿ ನಮ್ಮಿಂದ ದೂರ ಮಾಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಶಾಸಕರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿ ಸಂತಾಪ ಸೂಚಿಸಿದರು ಮಾತನಾಡಿದರು,"ಇಂದು ನನ್ನ ಜೀವನದ ದುಃಖದ ದಿನ. ಮೂರ್ನಾಲ್ಕು ದಿನಗಳ ಹಿಂದೆ ನಾನು, ಜಿ.ಸಿ ಚಂದ್ರಶೇಖರ್, ಸೋಮಶೇಖರ್ ಅವರ ಜತೆಗೂಡಿ ಆಸ್ಪತ್ರೆಗೆ ಬಂದು ರಾಜಾ ವೆಂಕಟಪ್ಪ ನಾಯಕ ಅವರ ಆರೋಗ್ಯ ವಿಚಾರಿಸಿದ್ದೆ. ಅವರು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಆಗಿದ್ದರು. ಅವರು ಕಾಗದದ ಮೇಲೆ ಬರೆದು ನನ್ನ ಜತೆ ಮಾತನಾಡಿದ್ದರು. ರಾಜ್ಯಸಭೆ ಮತದಾನದ ವೇಳೆಗೆ ಬರುತ್ತೇನೆ ಎಂದು ಹೇಳಿದ್ದರು.

ಅವರು ವಾಪಸ್ ಬರುತ್ತಾರೆ ಎಂದು ಭಾವಿಸಿದ್ದೆ. ಆದರೆ ಇಂದು ಮಧ್ಯಾಹ್ನ ಭಗವಂತ ಅವರನ್ನು ಕರೆದುಕೊಂಡಿದ್ದಾನೆ. ನಾವು ಮಾಡಿದ ಸಮೀಕ್ಷೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಇವರೇ ಮೊದಲ ಅಭ್ಯರ್ಥಿ ಎಂದು ಕೂಡ ವರದಿಯಲ್ಲಿ ವ್ಯಕ್ತವಾಗಿತ್ತು. ವಿಧಿಲೀಲೆ ಅವರನ್ನು ನಮ್ಮಿಂದ ದೂರ ಮಾಡಿದೆ.

ಬಹಳ ಸರಳತೆಯ ನಾಯಕರಾಗಿದ್ದ ಅವರು ಯಾರ ಮನಸ್ಸನ್ನೂ ನೋಯಿಸುತ್ತಿರಲಿಲ್ಲ. ಆಮೂಲಕ ಜನರ ಮನ ಗೆದ್ದಿದ್ದರು. ನನಗೆ ಆತ್ಮೀಯ ಸ್ನೇಹಿತರೂ ಆಗಿದ್ದರು. ಅವರನ್ನು ನಾವು ಕಳೆದುಕೊಂಡಿದ್ದೇವೆ.

ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಕ್ಷೇತ್ರದ ಜನರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ತಿಳಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ