LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆ ಎಸ್ ಆರ್ ಟಿ ಸಂಸ್ಥೆಗೆ ಮತ್ತೆರಡು ಪ್ರಶಸ್ತಿಗಳ ಗರಿ

ಬೆಂಗಳೂರು:  ಕೆ.ಎಸ್.ಆರ್.ಟಿ.ಸಿ ಗೆ ಅತ್ಯಂತ ವಿಶ್ವಾಸಾರ್ಹ ಬ್ರ್ಯಾಂಡ್ ಮತ್ತು  ನಾಯಕತ್ವ ಪ್ರಶಸ್ತಿ ಹಾಗೂ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿಗಳು ಲಭಿಸಿರುತ್ತದೆ.

ಕೆ.ಎಸ್.ಆರ್.ಟಿ.ಸಿ ಯು ಕೈಗೊಂಡಿರುವ ಅತ್ಯುತ್ತಮ ಪ್ರಯಾಣಿಕರ ಸ್ನೇಹಿ, ವಿವಿಧ ಬಸ್ಸುಗಳ ಬ್ರ್ಯಾಂಡಿಂಗ್, ಜನಸ್ನೇಹಿ ನಿರ್ವಹಣೆ ಉಪಕ್ರಮಗಳಿಗಾಗಿ 02 ಪ್ರಶಸ್ತಿಗಳು ಈ ಕೆಳಕಂಡ ವರ್ಗಗಳಲ್ಲಿ
1. Best Transport Company of India
2. Most Trusted Brands (Organization) ಲಭಿಸಿರುತ್ತದೆ.

ಮುಂಬಯಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಹಿರಿಯ ಚಲನಚಿತ್ರ ನಟಿ ಬಾಂಬೆ ಸುಧಾ ಚಂದ್ರನ್ ಮತ್ತು ವಾಗ್ಮರೆ ರವರು ನಿಗಮದ ಅರುಣಾ  ಎಸ್ ಎನ್, ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ, ಕೆಂಪೇಗೌಡ ಬಸ್ ನಿಲ್ದಾಣ ವಿಭಾಗ ಹಾಗೂ ಎಂ ನವೀನ್, ಕಾರ್ಯ ವ್ಯವಸ್ಥಾಪಕರು, ಪ್ರಾದೇಶಿಕ ಕಾರ್ಯಗಾರ ಬೆಂಗಳೂರು ರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.

ಬೆಂಗಳೂರಿನಲ್ಲಿ ನಡೆದ *4th Edition of the Asia Pacific HRM Congress & Awards* ಸಮಾರಂಭದಲ್ಲಿ KSRTCಗೆ “Top Most Organizations with Innovative HR Practices” ಎಂಬ ಗೌರವ ದೊರಕಿತು.

ಈ ಪ್ರಶಸ್ತಿ ಲಭಿಸಿರುವುದು ನೌಕರರ ಕಲ್ಯಾಣ ಕಾರ್ಯಕ್ರಮಗಳು, ತಂತ್ರಜ್ಞಾನ ಆಧಾರಿತ HR ಕ್ರಮಗಳು ಹಾಗೂ ನಿರಂತರ ನವೀನತೆಯೊಂದಿಗೆ ಮಾನವ ಸಂಪನ್ಮೂಲ ನಿರ್ವಹಣೆಯಲ್ಲಿ ತೋರಿದ ಶ್ರೇಷ್ಠತೆಯ ಉಪಕ್ರಮ.

ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ  ಸ್ಮಿತಿ ಭಟ್ ಡಿಯೊರ, ಸಹ ಸಂಸ್ಥಾಪಕರು ಮತ್ತು COO, AdvantageClub.ai ರವರು ನಿಗಮದ ಶ್ಯಾಮಲಾ, ಉಪ ಮುಖ್ಯ ಕಾನೂನು ಅಧಿಕಾರಿ, ಹಾಗೂ ಶ್ರೀಮತಿ ಶಕುಂತಲಾ, ಕಾನೂನು ಅಧಿಕಾರಿ, ಕೇಂದ್ರ ಕಛೇರಿ, ಬೆಂಗಳೂರು ರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ