LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು

ಬೆಂಗಳೂರು: ಆರ್ ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನ ಯಾತ್ರೆಯಲ್ಲಿ ಮುಸಲ್ಮಾನ ಮಹಿಳೆಯರಿಗೆ ಅಗೌರವ ಉಂಟು ಮಾಡುವ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಅಲ್ಪಸಂಖ್ಯಾತರ ಘಟಕದ ಮುಖಂಡ ಉಸ್ಮಾನ್ ನರಸಿಂಹಯ್ಯ ಆಗ್ರಹಿಸಿದರು.

ನಗರದ ಶೇಷಾದ್ರಿ ಪುರಂ ಪೊಲೀಸ್ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ಬಳಿಕ ಮಾತನಾಡಿದ ಉಸ್ಮಾನ್ ನರಸಿಂಹಯ್ಯ, ಸೀತೆಯನ್ನು ಲಂಕೆಯಿಂದ ಕರೆತರುವಲ್ಲಿ ಸಹಾಯ ಮಾಡಿದ ಹನುಮನ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್, ಮುಸ್ಲಿಮ್ ಮಹಿಳೆಯರಿಗೆ ಮೋದಿ ಬಂದ ಮೇಲೆ ಪರ್ಮನೆಂಟ್ ಗಂಡ ಸಿಕ್ಕಿದ್ದು ಎಂಬ ಹೇಳಿಕೆ ನೀಡಿರುವುದು ಅಕ್ಷಮ್ಯ. ಪ್ರಭಾಕರ್ ಭಟ್ ಈ ರೀತಿ ಮಾತನಾಡಿದ್ದರೂ, ಬಿಜೆಪಿ ಮುಖಂಡರು ಯಾಕೆ ಸುಮ್ಮನಿದ್ದಾರೆ, ಬಿಜೆಪಿ ಅಲ್ಪ ಸಂಖ್ಯಾತ ಘಟಕ ಸತ್ತು ಹೋಗಿದೆ, ಅವರೆಲ್ಲಾ ದುಡ್ಡಿಗಾಗಿ ಕೆಲಸ ಮಾಡುತ್ತಿರುವ ಕೂಲಿಯಾಳುಗಳು ಎಂದು ಆಕ್ರೋಷ ವ್ಯಕ್ತಪಡಿಸಿದರು.

ಪ್ರಭಾಕರ್ ಭಟ್ ಮಹಿಳಾ ನಿಂದನೆ, ಜಾತಿ ನಿಂದನೆ, ಧರ್ಮ ನಿಂದನೆ ಮಾಡಿದ್ದು ಈ ರೀತಿ ಹೇಳಿಕೆ ನೀಡುವವರು, ದೇಶ ದ್ರೋಹಿ, ಧರ್ಮ ದ್ರೋಹಿಯಾಗಿರುತ್ತಾರೆ. ಅವರನ್ನು ಕೂಡಲೇ ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಉಸ್ಮಾನ್ ನರಸಿಂಹಯ್ಯ ಆಗ್ರಹಿಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ