ಹಾಸನ : ವಿಶ್ವವಿಖ್ಯಾತ ಶ್ರೀ ಹಾಸನಾಂಬ ದೇವಿ ದರ್ಶನೋತ್ಸವ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಹಾಸನಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನಾಂಬೆ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ. ಶಿವಲಿಂಗೇಗೌಡ ಅವರು ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.
ದೇವಿಯ ದರ್ಶನದ ಬಳಿಕ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಸಿದ್ದರಾಮಯ್ಯ ಅವರು ವೀಕ್ಷಿಸಿದರು. ವಿಶೇಷವಾಗಿ ಕುಸ್ತಿ ಹಾಗೂ ವಾಲಿಬಾಲ್ ಪಂದ್ಯಗಳನ್ನು ವೀಕ್ಷಿಸಿ, ಕ್ರೀಡಾಪಟುಗಳ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಹಾಸನಾಂಬ ಜಾತ್ರಾ ಮಹೋತ್ಸವವು ಧಾರ್ಮಿಕ ಆಚರಣೆಗಳ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೂ ವೇದಿಕೆಯಾಗಿದ್ದು, ಸಾಂಪ್ರದಾಯಿಕ ಕುಸ್ತಿ ಸೇರಿದಂತೆ ವಿವಿಧ ಕ್ರೀಡಾಕೂಟಗಳು ಉತ್ಸವದ ಆಕರ್ಷಣೆಯಾಗಿವೆ.
ಈ ಸಂದರ್ಭದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಲತಾಕುಮಾರಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.