LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Balc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆ

ಬೆಂಗಳೂರು: ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಬಾಲ್ಕ್ (ಭಾರತೀಯ ಅಕಾಡೆಮಿ ಆಫ್ ಲಿಂಗ್ವಿಸ್ಟಿಕ್ ಅಂಡ್ ಕಮ್ಯುನಿಕೇಶನ್ )ಸಂಸ್ಥೆಯು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ವೃತ್ತಿ ಮಾರ್ಗದರ್ಶನ ಪುಸ್ತಕ ವಿತರಣೆ ಮತ್ತು ಸ್ಕಾಲರ್ಶಿಪ್ ಆಟಿಟ್ಯೂಡ್ ಟೆಸ್ಟ್ ನ ದಿನಾಂಕ ಪ್ರಕಟಣೆ ಮಾಡಲಾಗಿದೆ ಎಂದು ಬಾಲ್ಕನ ವ್ಯವಸ್ಥಾಪಕ ನಿರ್ದೇಶಕ ಎ ಎನ್ ನಟರಾಜ್ ಗೌಡ ತಿಳಿಸಿದರು.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಬಾಲ್ಕ್ (BALCI) ಕೌಶಲ್ಯಾಭಿವೃದ್ಧಿ ತರಬೇತಿ ಸಂಸ್ಥೆಯು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಮುಗಿಸಿದ ನಂತರ ಮುಂದೆ ಯಾವ ಕೋರ್ಸೋ ಆಯ್ಕೆ ಮಾಡಿಕೊಳ್ಳಬೇಕು, ಭವಿಷ್ಯದಲ್ಲಿ ಯಾವ ವೃತ್ತಿ ಮಾರ್ಗವನ್ನು ಹಿಡಿಯಬೇಕು ಎಂಬ ಮಾಹಿತಿಗಳಿಗಾಗಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ದಿಕ್ಸೂಚಿಯಾಗಲು ಸಂಸ್ಥೆಯು ಮುಂದಾಗಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷವಾಗಿ ರಚಿಸಿರುವ "ವೃತ್ತಿ ಮಾರ್ಗದರ್ಶನ" 25000 ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಈ ಪುಸ್ತಕವು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಲಭ್ಯವಿರುವ ಹೊಸ ಕೋರ್ಸ್‌ಗಳು, ಭವಿಷ್ಯದ ಉದ್ಯೋಗಾವಕಾಶಗಳು ಹಾಗೂ ಯಶಸ್ವಿ ವೃತ್ತಿಜೀವನವನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಸವಿವರವಾಗಿ ವಿವರಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಈ ಪುಸ್ತಕವು ಸಂಪೂರ್ಣ ಮಾರ್ಗದರ್ಶನ ನೀಡಲಿದೆ ಎಂದರು.

ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಶಾಲಾ ಅಥವಾ ಕಾಲೇಜಿನ ಗುರುತಿನ ಚೀಟಿಯನ್ನು (Student ID Card) ತೋರಿಸಿ, ಈ ಕೆಳಕಂಡ ಬಾಲ್ಸ್ (BALC) ಶಾಖೆಗಳಲ್ಲಿ ಉಚಿತವಾಗಿ ಈ ಪುಸ್ತಕವನ್ನು ವಡೆದುಕೊಳ್ಳಬಹುದು:

*ಬೆಂಗಳೂರಿನ ಶಾಖೆಗಳು: ಸುಂಕದಕಟ್ಟೆ, ರಾಜಾಜಿನಗರ, ಮಲ್ಲೇಶ್ವರಂ, ಬಸವನಗುಡಿ, ಜಯನಗರ, ಟೋಲ್ ಗೇಟ್, ಉಲ್ಲಾಳ ರಸ್ತೆ, ಕೆಂಗೇರಿ ಉಪನಗರ, ಕೋಣನಕುಂಟೆ ಕ್ರಾಸ್, ಕೇಂಬ್ರಿಡ್ಜ್ ಲೇಔಟ್, ನೆಲಮಂಗಲ, ಯಲಹಂಕ, ದೇವನಹಳ್ಳಿ *ಇತರೆ ಶಾಖೆಗಳು: ಹುಣಸೂರು, ಚನ್ನರಾಯಪಟ್ಟಣ, ರತ್ನಪುರಿ

ಇದೇ ಸಂದರ್ಭದಲ್ಲಿ, ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿ ನೆರವಿಗಾಗಿ 'ಸ್ಮಾಲರ್‌ಶಿಪ್ ಅಪ್ಟಿಟ್ಯೂಡ್ ಟೆಸ್ಟ್' (SATI ಪರೀಕ್ಷೆಯ ದಿನಾಂಕಗಳನ್ನು ಘೋಷಿಸಲಾಗಿದೆ.

*ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ: 22 ಮಾರ್ಚ್ 2026

*ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಏಪ್ರಿಲ್ 8, 2026

ಈ ಅಪ್ಟಿಟ್ಯೂಡ್ ಪರೀಕ್ಷೆಯು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ತಮಗೆ ಸುಲಭವಾದ ಭಾಷೆಯನ್ನು ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆಯಬಹುದು. ಪರೀಕ್ಷೆ ಮುಗಿದ ಅದೇ ದಿನ ಸಂಜೆ ಫಲಿತಾಂಶವನ್ನು ಪ್ರಕಟಿಸಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು (Certificate) ಪ್ರದಾನ ಮಾಡಲಾಗುವುದು. ಮುಂದಿನ ಒಂದು ವರ್ಷದಲ್ಲಿ ಕೌಶಲ್ಯಾಭಿವೃದ್ಧಿ ಪಡೆಯಲು ಈ ಸರ್ಟಿಫಿಕೇಟ್ ಗಳನ್ನು ಬಳಸಬಹುದಾಗಿದೆ ಎಂದು ಅವರು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಕಾಲ್ ಸೆಂಟರ್ 8884498884, ವೆಬ್ಸೈಟ್: www.balcdigiskill.com ಗೆ ಬೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ