LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ: ಸಿ.ಎಂ

ಬೆಂಗಳೂರು : ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌

ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಕರ್ನಾಟಕ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ "ಹಂಪನಾ ಅವರ " ಚಾರು ವಸಂತ" ದೇಸೀಕಾವ್ಯದ ಪರ್ಷಿಯನ್ ಭಾಷಾ ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು.

ಹಂಪನಾ ಕನ್ನಡ ನೆಲದ ಶ್ರೇಷ್ಠ ಸಾಂಸ್ಕೃತಿಕ ವ್ಯಕ್ತಿತ್ವ. ಇವರು ರಚಿಸಿರುವ "ಚಾರು ವಸಂತ" ವಿಶೇಷ ಕೃತಿಯಾಗಿದೆ. ಇಲ್ಲಿಯವರೆಗೆ 16 ಭಾಷೆಗಳಿಗೆ ತರ್ಜುಮೆ ಆಗಿ, ಈಗ 17ನೇ ಭಾಷೆಯಾಗಿ ಪರ್ಷಿಯನ್ ಗೆ ಅನುವಾದಗೊಂಡಿರುವುದು ಕನ್ನಡದ ಹೆಮ್ಮೆ ಎಂದರು.

ಹಂಪನಾ ಕನ್ನಡ ನೆಲದ ಶ್ರೇಷ್ಠ ಸಾಂಸ್ಕೃತಿಕ ವ್ಯಕ್ತಿತ್ವ: ಸಿಎಂ

ಕನ್ನಡ ವಿಶ್ವದ ಎಲ್ಲಾ ಭಾಷೆಗಳಿಗೆ ಅನುವಾದಗೊಂಡರೆ ಕನ್ನಡದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು.ಹಂಪನಾ ಅವರ ಚಾರು ವಸಂತ ಕಾವ್ಯ , ನಾಟಕವಾಗಿ ಕೂಡ ಜನಮನ್ನಣೆ ಗಳಿಸಿದೆ. ಹಂಪನಾ ದಂಪತಿ ನನಗೆ ಬಹಳ ವರ್ಷಗಳಿಂದ ಆತ್ಮೀಯರಾಗಿದ್ದರು. ನಾನು ಸಾಹಿತಿ ಅಲ್ಲ. ಆದರೆ, ಸಾಹಿತ್ಯ ಮತ್ತು ಸಾಹಿತಿಗಳ ಒಡನಾಟ ಇದೆ. ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದ ಬಳಿಕ ನಾನು ಕೇಂದ್ರ ಸರ್ಕಾರಕ್ಕೆ ಬರೆಯುವ ಪತ್ರಗಳ ಹೊರತಾಗಿ ಬೇರೆ ಕಡೆ ಇಂಗ್ಲಿಷ್ ಬಳಸುವುದೇ ಇಲ್ಲ. ಹೀಗಾಗಿ ನನಗೆ ಇಂಗ್ಲಿಷ್ ಹೆಚ್ಚು ಬರದಂತಾಯಿತು. ಎಂದರು.

ಮಲ ಹೊರುವ ಪದ್ಧತಿ ಬಗ್ಗೆ ಇರುವ ಕೃತಿ ಇದಾಗಿದೆ. ಜಾತಿ ವ್ಯವಸ್ಥೆ ರೂಪಿಸಿದ ಶಾಪ ಅಸ್ಪೃಶ್ಯತೆ. ಇದು ಅಳಿಯಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ಎಲ್ಲರಿಗೂ ಸಿಕ್ಕಾಗ ಮಾತ್ರ ಚಲನೆ ಇಲ್ಲದ ಜಾತಿ ವ್ಯವಸ್ಥೆ ಅಳಿಯಲು ಸಾಧ್ಯ ಎಂದರು.

ಚಾರು ವಸಂತ ಅದ್ಭುತವಾದ ಕಾವ್ಯ. ಕನ್ನಡ ಭಾಷೆಯ ಉಳಿವು, ಬೆಳವಣಿಗೆಗೆ ಇಂತಹ ಕೃತಿಗಳು ಬರಬೇಕು ಎಂದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ