LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಕಲೆಕ್ಷನ್; ಹೆಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು 'ಬೆಂಗಳೂರು ನಗದಾಭಿವೃದಿ ಇಲಾಖೆ ಎಂದು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಕೈಗಾರಿಕೆ ಇಲಾಖೆಯಲ್ಲಿ ಬಿಡಿಎಗೆ ಏನು ಕೆಲಸ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸರ್ಕಾರಕ್ಕೆ ಟಾಂಗ್ ಕೊಟ್ಟಿರುವ ಅವರು; ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿದ್ದಾರೆ.

'ಬೆಂಗಳೂರು ನಗದಾಭಿವೃದ್ಧಿ' ಇಲಾಖೆಯು ನಗದು ಅಭಿವೃದ್ಧಿಗೆ ಸಿಕ್ಕಸಿಕ್ಕ ಕಡೆ ಸುಲಿಗೆಗೆ ಇಳಿದಿದೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ ವ್ಯವಸ್ಥೆ ಅಡಿಯಲ್ಲಿ ಪ್ರಕ್ರಿಯೆ ನಿರಾತಂಕವಾಗಿ ನಡೆಯುತ್ತಿದೆ. ಅದಕ್ಕೂ ಮುನ್ನ ಉನ್ನತಮಟ್ಟದ ಹೂಡಿಕೆ ಅನುಮೋದನೆ ಸಮಿತಿ ಒಪ್ಪಿಗೆಯನ್ನೂ ಕೊಡುತ್ತದೆ. ಇಷ್ಟೆಲ್ಲ ಇದ್ದ ಮೇಲೆ ಇಲ್ಲಿ BDA ಕೆಲಸ ಏನು? ಯಾರ ಕಿಸೆ ಭರ್ತಿ ಮಾಡಲಿಕ್ಕೆ BDA ಇಂಥ ಅಡ್ಡದಾರಿ ತುಳಿದಿದೆ? ಎಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವರ್ತನೆಯನ್ನು ಕಟುವಾಗಿ ಟೀಕಿಸಿದ್ದಾರೆ.

ಬೆಂಗಳೂರು ವ್ಯಾಪ್ತಿಯಲ್ಲಿ ತನ್ನ ಅನುಮೋದನೆ ಇಲ್ಲದೆ ಉದ್ಯಮ ಪಾರ್ಕ್ ರಚನೆ, ಅಭಿವೃದ್ಧಿ, ಕೈಗಾರಿಕಾ ಸಮುಚ್ಚಯಗಳ ನಿರ್ಮಾಣ ಮಾಡಬಾರದು ಎಂದು BDA ಫರ್ಮಾನು ಹೊರಡಿಸಿರುವುದು ಬೆಂಗಳೂರು 'ನಗದಾಭಿವೃದ್ಧಿ' ಇಲಾಖೆ ಕೈಚಳಕ, ಅನುಮಾನವೇ ಇಲ್ಲ. ತೆಲಂಗಾಣ ಎಲೆಕ್ಷನ್ ಗೆ ಕಲೆಕ್ಷನ್ ಮಾಡಿದಂತೆ ಈಗ ಲೋಕಸಭೆ ಚುನಾವಣೆಗೆ ವಸೂಲಿ ಶುರುವಾಗಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!