LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ವ್ಯವಸ್ಥೆ, ಮನಸ್ಸುಗಳು ಮಲೀನವಾಗಿವೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ

ಬೆಂಗಳೂರು: ಸರಕಾರಿ ಶಾಲೆಗಳ ಸ್ವಚ್ಛತೆಯೂ ಸೇರಿ ನಿರ್ವಹಣೆ ನೀಡಲಾಗುವ ಅನುದಾನವನ್ನು ಈ ವರ್ಷ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು; ಶಾಲೆಗಳಲ್ಲಿ ಸ್ವಚ್ಛತೆ ಮತ್ತು ನಿರ್ವಹಣೆಗೆ ಸರ್ಕಾರ ಸರಿಯಾದ ರೀತಿಯಲ್ಲಿ ಹಣ ನೀಡುತ್ತಿಲ್ಲ. ಆದರೆ, ಶಿಕ್ಷಕರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದೆ ಎಂದು ಟೀಕಿಸಿದ್ದಾರೆ.

ಅಂದ್ರಹಳ್ಳಿ ಸರಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದು, ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ನಮ್ಮ ವ್ಯವಸ್ಥೆ, ಮನಸ್ಸುಗಳು ಎಷ್ಟು ಮಲೀನವಾಗಿವೆ ಎನ್ನುವುದಕ್ಕೆ ಎರಡೂ ಘಟನೆಗಳು ಸಾಕ್ಷಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ಸೂಕ್ಷ್ಮ ಮನಸ್ಸಿನಿಂದ ವರ್ತಿಸಬೇಕಿತ್ತು. 'ಆಚಾರ್ಯದೇವೋ ಭವ' ಎನ್ನುವ ಭಾರತೀಯ ಪರಂಪರೆಯನ್ನು ಅವರೊಮ್ಮೆ ನೆನಪು ಮಾಡಿಕೊಳ್ಳಬೇಕಿತ್ತು. ಆದಾಗ್ಯೂ, ಈ ಎರಡೂ ಘಟನೆಗಳಲ್ಲಿ ಕೇವಲ ಶಿಕ್ಷಕರು, ಪ್ರಾಂಶುಪಾಲರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಸರಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಸರಕಾರಿ ಶಾಲೆ ಒಂದರ ಸ್ವಚ್ಛತೆ, ಸಂಪೂರ್ಣ ನಿರ್ವಹಣೆ ಸೇರಿ ಸಾದಿಲ್ವಾರು ವೆಚ್ಚಗಳಿಗೆ ಕೊಡುತ್ತಿರುವ ಹಣವೆಷ್ಟು? ಈ ಹಣ ನಿಯಮಿತವಾಗಿ ಬಿಡುಗಡೆ ಆಗುತ್ತಿಲ್ಲ. ನನಗೆ ಬಂದಿರುವ ಮಾಹಿತಿ ಪ್ರಕಾರ ಪ್ರಸಕ್ತ ವರ್ಷ ಈ ಅನುದಾನವನ್ನೇ ಕೊಟ್ಟಿಲ್ಲ. ಕೊಡುವ ಅತ್ಯಲ್ಪ ಹಣದಲ್ಲಿ ಶಿಕ್ಷಕರು ಏನು ಮಾಡಿಯಾರು? ಈ ಬಗ್ಗೆ ಸರಕಾರ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಈ ಎರಡೂ ಪ್ರಕರಣಗಳಲ್ಲಿ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾದವರು ಈ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು. ಆದರೆ, ಶಿಕ್ಷಕರನ್ನಷ್ಟೇ ಬಲಿಪಶುಗಳನ್ನಾಗಿ ಮಾಡುವ ಕೆಲಸ ಆಗುತ್ತಿದೆ. ಹಾಗೆಯೇ; ಬೋಧಕರು, ಶಾಲಾ ಸಿಬ್ಬಂದಿ ಕೂಡ ಇಂಥ ಘಟನೆಗಳಿಗೆ ಅವಕಾಶ ಕೊಡಬಾರದು ಎಂದು ಶಿಕ್ಷಕರಿಗೂ ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ