LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ತಂದೆಯನ್ನು ನಿಂದಿಸಿದ ಸೀನಿಯರ್ ಖರ್ಗೆಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

ರಾಜಕೀಯದಲ್ಲಿ ಹಿರಿತವಿದ್ದರೂ ಸಣ್ಣತನ ತೋರಿದ ಮಲ್ಲಿಕಾರ್ಜುನ ಖರ್ಗೆ, ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ' ಎಂದು ಶ್ರೀ ಪುರಂದರದಾಸರ ಪದ ನೆನಪಿಸಿದ ಕೇಂದ್ರ ಸಚಿವರು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಅವರ ತಂದೆಯವರ ಬಗ್ಗೆ ನಾಲಿಗೆ ಜಾರಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಹಿರಿತನವಿದ್ದರೂ ಮಾತಿನಲ್ಲಿ ಅವರು ತೋರಿದ ಸಣ್ಣತನ ಕ್ಷಮಾರ್ಹವಲ್ಲ ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಅವಹೇಳನಕಾರಿ ಮಾತ್ರವಲ್ಲ, ರಾಜಕೀಯ ಶಿಷ್ಟಾಚಾರದ ಸ್ಪಷ್ಟ ಉಲ್ಲಂಘನೆ. ಅವರ ಮಾತು ಮಾನವೀಯತೆಯ ಅಣಕ ಹಾಗೂ ಅವರಲ್ಲಿ ಅಡಗಿರುವ ನಿಗೂಢ ಕ್ರೂರ ಮನಃಸ್ಥಿತಿಯ ಪ್ರತೀಕ. ಅದುವೇ ಇಂತಹ ನುಡಿಮುತ್ತುಗಳನ್ನು ನುಡಿಸಿರಬೇಕು ಎಂದು ಹರಿಹಾಯ್ದಿದ್ದಾರೆ.

'ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ' ಎಂದು ಶ್ರೀ ಪುರಂದರದಾಸರು ಸುಮ್ಮನೆ ಹೇಳಿದ್ದಲ್ಲ, ಬಹುಶಃ ಇಂಥ ನಾಲಿಗೆಗಳನ್ನು ತಿದ್ದಬೇಕು ಎಂಬ ಉದ್ದೇಶದಿಂದಲೇ ಹೇಳಿರಬೇಕು. ಖರ್ಗೆ ಅವರ ಈ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ. 

ಪ್ರಧಾನಿಗಳ ತಂದೆಯವರನ್ನು ರಾಜಕೀಯ ಟಾರ್ಗೆಟ್ ಮಾಡಿಕೊಂಡು ಖರ್ಗೆ ಅವರು ನೀಡಿರುವ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಹಿರಿತನವಿದ್ದರೂ ಮಾತಿನಲ್ಲಿ ಅವರು ತೋರಿದ ಸಣ್ಣತನ ಕ್ಷಮಾರ್ಹವಲ್ಲ. ಅವರ ವರ್ತನೆ ಕೇವಲ ಹತಾಶೆಯಷ್ಟೇ ಅಲ್ಲ, ನಾಚಿಕೆಗೇಡಿತನದ್ದು. ಇದು ಕಾಂಗ್ರೆಸ್ ಪಕ್ಷದ ಅಧಃಪತನದ ಪರಮಾವಧಿ. ಖರ್ಗೆ ಅವರು ಪ್ರಧಾನಿಗಳ ಕ್ಷಮೆ ಕೇಳಿ ತಮ್ಮ ಹಿರಿತನದ ಮರ್ಯಾದೆ ಉಳಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ತಂದೆಯನ್ನು ನಿಂದಿಸಿದ ಸೀನಿಯರ್ ಖರ್ಗೆಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆಹಾಸನಾಂಬ ಉತ್ಸವ: ಸಚಿವ ಯು. ಟಿ. ಖಾದರ್‌ ಅವರಿಗೆ ಆಹ್ವಾನಉಚಿತ ಪ್ಲಾಸ್ಟಿಕ್‌ ಸರ್ಜರಿ ಸೇವೆ ಆರಂಭ ಶ್ಲಾಘನೀಯ ಸೇವೆ: ಸಚಿವ ಕೆ.ಎಂ. ಶಿವಲಿಂಗೇಗೌಡಮೋದಿ ಆಡಳಿತದಿಂದ ಯುವಜನರು ಬೇಸತ್ತು ವಿರೋಧಿಸುತ್ತಿದ್ದಾರೆ: ಸಚಿವ ಮಧು ಬಂಗಾರಪ್ಪಮಾಜಿ ಸಿಎಂ ಎಸ್ ಬಂಗಾರಪ್ಪ ಜನ್ಮ ದಿನೋತ್ಸವ, ನಾಲ್ವರು ಸಾಧಕರಿಗೆ ಪ್ರತಿಷ್ಠಿತ ಬಂಗಾರ ಪ್ರಶಸ್ತಿ ಪ್ರದಾನಬೆಂಗಳೂರಿನಲ್ಲಿ AK ಗೋಲ್ಡ್ & ಡೈಮಂಡ್ಸ್ನ ಜ್ಯುವೆಲರಿ ಮಳಿಗೆ ಭವ್ಯ ಶುಭಾರಂಭ!ಪೌರಕಾರ್ಮಿಕರಿಗಾಗಿ ಅಪೋಲೊ ಆಸ್ಪತ್ರೆಯಿಂದ ಸ್ತನ ಆರೋಗ್ಯ ತಪಾಸಣಾ ಶಿಬಿರರೋಟರಿ ಬೆಂಗಳೂರು ಗ್ಲೋಬಲ್ ಯೋಗದಿಂದ  ಪ್ರಶಸ್ತಿ,ಶಿಕ್ಷಕರ ದಿನಾಚರಣೆಶಿವಮೊಗ್ಗದಲ್ಲಿ ಸೈದ್ಧಾಂತಿಕ ಸಂಘಟನೆ ಬಲವರ್ಧನೆಯೇ ನಮ್ಮ ಸಂಕಲ್ಪ: ಬಿ ಕೆ ಹರಿಪ್ರಸಾದ್ಬೆಮ.ಸಾ.ಸಂಸ್ಥೆ ಸಿಬ್ಬಂದಿಯ ಅಪಘಾತ ವಿಮಾ ಪರಿಹಾರ ರೂ. 1.00 ಕೋಟಿಗೆ ಹೆಚ್ಚಳ