LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರಿಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವರಿಂದ ಚಾಲನೆ

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ ಕಾರ್ಯಕ್ರಮಕ್ಕೆ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು  ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.

ಕೋದಂಡರಾಮಪುರದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು, ಪಲ್ಸ್ ಪೋಲಿಯೋ ಹನಿಯೂ ಮಕ್ಕಳಿಗೆ ಮುಂದಾಗುವ ತೊಂದರೆಗಳನ್ನು ಎದುರಿಸುತ್ತದೆ, ಹೀಗಾಗಿ ಎಲ್ಲಾ ಮಕ್ಕಳನ್ನು ಹತ್ತಿರದ ಬಿಬಿಎಂಪಿ ಆರೋಗ್ಯ ಕೇಂದ್ರ ಗಳಿಗೆ ಕರೆದುಕೊಂಡು, ಇಲ್ಲವೇ ನಿಮ್ಮ ಬದವನೆಯಲ್ಲಿಯೆ ಪ್ರತಿನಿಧಿಗಳು ಬಂದು ಲಸಿಕೆ ಹಾಕುತ್ತಾರೆ ತಪ್ಪದೆ ಹಾಕಿಸಿ ಎಂದು ರಿಲಿಂಹೇಳಿದರು.

ಭವಿಷ್ಯದಲ್ಲಿ ಯಾವುದೇ ರೀತಿಯ ಮಕ್ಕಳಿಗೆ ಆಗದಿರಲಿ ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಇದರಲ್ಲಿ ಮೂಡನಂಬಿಕೆ ಬೇಡ, ವೈಜ್ಞಾನಿಕ ವಾಗಿ ಪಾಲಗೊಳ್ಳಿ ಎಂದು ತಿಳಿಸಿದರು.

ಅರೊಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನಿರ್ದೇಶಕರಾದ ಡಾ. ನವೀನ್ ಭಟ್, ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಮದನಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಶೇ.94ರಷ್ಟು ಪೋಲಿಯೋ ಲಸಿಕೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ಕಾರ್ಯಕ್ರಮ ದಿನ ಶೇ. 94.33 ರಷ್ಟು ಲಸಿಕೆ ಹಾಕಲಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಮಕ್ಕಳ ಸಂಖ್ಯೆ(0-5)1113617 ಪೋಲಿಯೋ ಹನಿ ಹಾಕಿದ ಒಟ್ಟು ಸಂಖ್ಯೆ:- 1050348 ರಷ್ಟಿದೆ, ಶೇಕಡಾವಾರು:- 94.33% ಅನುಪಾತದಲ್ಲಿ ಇದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!