LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ, ಎಂ ಸಿದ್ದರಾಮಯ್ಯ ನಗರ ಪ್ರದಕ್ಷಣೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಎರಡು ದಿನಗಳಿಂದ ಬಾರಿ ಪ್ರಮಾಣದ ಮಳೆಯಾಗುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರ ಪ್ರದರ್ಶನ ಹಾಕುವ ಮೂಲಕ ಮಳೆಯಿಂದ ಹಾನಿಯಾಗಿರುವ ಪ್ರದರ್ಶಕಗಳಿಗೆ ಭೇಟಿಕೊಟ್ಟು ವೀಕ್ಷಣೆ ಮಾಡಿದರು ಅಲ್ಲದೆ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆಯನ್ನು ಸಹ ನೀಡಿದರು.

ಬೆಂಗಳೂರು ನಗರದ ಸುತ್ತಲೂ ಸಹ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಹಾಗೂ ಜನಪತಿನಿಧಿಗಳೊಂದಿಗೆ ಸುತ್ತುವ ಮೂಲಕ ಮಳೆಯಿಂದಾಗಿರುವ ಅನಾಹುತ ಪ್ರದೇಶಗಳಿಗೆ ಭೇಟಿಕೊಟ್ಟು ವೀಕ್ಷಣೆ ಮಾಡಿದರು.

ಸಿಎಂ ಭೇಟಿ ನೀಡಿದ ಸ್ಥಳಗಳ ವಿವರ

ಸಿಟಿ ರೌಂಡ್ಸ್ sopt-1


ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು.

ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು. ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.

ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.

ಸಿಟಿ ರೌಂಡ್ಸ್ , Spot 2


HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಣೆ...ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು.

ಬಾದಿತ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.

City Rounds Spot 3 ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿ...

ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ.

ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು.

ನೆನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ BDA ಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.

Spot 4: ಸಾಯಿ ಲೇಔಟ್


ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಮುಖ್ಯಮಂತ್ರಿಗಳು, "ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ" ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು.

ಬಳಿಕ‌ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

Spot -5 ಪಣತ್ತೂರ್ ರೈಲ್ವೇ ಬ್ರಿಡ್ಜ್ 


ಮಹದೇವಪುರ ವಿಧಾನಸಭಾ ಕ್ಷೇತ್ರದ ಪಣತ್ತೂರ್ ರೈಲ್ವೇ ಬ್ರಿಡ್ಜ್ ನಲ್ಲಿ ಸಾರ್ವಜನಿಕರ ಮತ್ತು ಸ್ಥಳೀಯ ನಿವಾಸಿಗಳ ಜೊತೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು.

ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಸಮಗ್ರ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, 350 ಮೀಟರ್ ಉದ್ದದ ಒಳಚರಂಡಿಯನ್ನು ನಿರ್ಮಿಸಿ ರಾಜಕಾಲುವೆಗೆ ಸಂಪರ್ಕ ಕೊಡಬೇಕು, ರೈಲ್ವೇ ಇಲಾಖೆ 3 ತಿಂಗಳ ಒಳಗೆ ಕಾಮಗಾರಿ ಮುಗಿಸುವ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಟಿ ಮುಖ್ಯಾಂಶಗಳು


• ಬೆಂಗಳೂರು ನಗರದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಭೈರತಿ ಸುರೇಶ್ ಹಾಗೂ ಇತರ ಜನಪ್ರತಿನಿಧಿಗಳೊಂದಿಗೆ ಹಾಗೂ ಎಲ್ಲಾ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.

• ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

• ಹೆಚ್ಬಿಆರ್ ಬಡಾವಣೆಯ ಐದನೇ ಹಂತದ ರಾಜಕಾಲುವೆ ಸಮಸ್ಯೆಯಿದ್ದು, ಅಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಗೆ ಅಲ್ಲಿ ತಡೆಗೋಡೆ ನಿರ್ಮಾಣವಾಗುತ್ತಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಿದ್ದೇವೆ. ಚರಂಡಿಗೆ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಸೂಚನೆ

• ಸಾಯಿ ಲೇಔಟ್ ಭೇಟಿ ನೀಡಿದ್ದು, ಅದು ರಾಜಕಾಲುವೆಗಿಂತ ತಗ್ಗು ಪ್ರದೇಶದಲ್ಲಿದೆ. ರೈಲ್ವೆ ಸೇತುವೆ ಬಳಿ ವೆಂಟ್ ಕಿರಿದಾಗಿದ್ದು, ಅದನ್ನು ಅಗಲಗೊಳಿಸಿದರೆ ಮಾತ್ರ ಸಮಸ್ಯೆ ಪರಿಹಾರ ಸಾಧ್ಯ. ಅನೇಕ ವರ್ಷದಿಂದ ಈ ಸಮಸ್ಯೆಯಿದೆ. ವೆಂಟ್ಗಳ ನಿರ್ಮಾಣ ಮತ್ತು ಅಗಲಗೊಳಿಸಲು ಈಗಾಗಲೇ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚನೆ. ಬಿಬಿಎಂಪಿ ಇದಕ್ಕಾಗಿ ಒಟ್ಟು 13ಕೋಟಿ ಬಿಡುಗಡೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ 6ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, 3ಕೋಟಿ ಪಾವತಿಸಿದ್ದಾರೆ.

• ಮಹಾದೇವಪುರದ ಪಣತ್ತೂರು ಗಾರ್ಡ್ನ್ನಲ್ಲಿ ನೀರು ಸರಾಗವಾಗಿ ಹರಿದು ಹೋಗದೆ ಪ್ರತಿ ವರ್ಷ ಸಮಸ್ಯೆ. ರೈಲ್ವೇ ಲೈನ್ ಕೆಳಗಡೆ ಅಗಲ ಬಹಳ ಕಡಿಮೆಯಿದೆ. ಇದನ್ನು ವಿಸ್ತರಿಸಲು ಹಾಗೂ ರಸ್ತೆ ಅಗಲೀಕರಣ ಕಾರ್ಯ ಈಗಾಗಲೇ ನಡೆಯುತ್ತಿದ್ದು, ಶೇ.20ರಷ್ಟು ಕಾಮಗಾರಿ ಬಾಕಿಯಿದೆ. ಇಲ್ಲಿ ಟ್ರೆಂಚ್ಲೆಸ್ ತಾಂತ್ರಿಕತೆ ಬಳಸಿ ಕೆಲಸ ಮಾಡುತ್ತಿದ್ದು, 45ದಿನಗಳ ಒಳಗಾಗಿ ಉಳಿದಿರುವ ಎಲ್ಲಾ ಕಾಮಗಾರಿ ಮುಗಿಸಲು ಸೂಚನೆ ನೀಡಲಾಗಿದೆ.

• ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ನಾಲ್ಕು ಕಡೆಗಳಿಂದ ನೀರು ಬರುತ್ತಿದ್ದು, ಅಲ್ಲಿಂದ ಎಲ್ಲಾ ನೀರು ಹೆಚ್ಎಸ್ಆರ್ ಲೇಔಟ್ ಕಡೆ ಹರಿದು ಬರುತ್ತದೆ. ಮೆಟ್ರೋ, ಬಿಬಿಎಂಪಿ ಮತ್ತು ರಾಷ್ಟ್ರೀಯ ಹೆದ್ದಾರಿ ಸಮನ್ವಯದಿಂದ ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ. ಈ ಮೂರು ವಿಭಾಗಗಳು ಈ ಕುರಿತು ಯೋಜನೆ ರೂಪಿಸಲು ಸೂಚನೆ ನೀಡಿದ್ದೇನೆ.

• ಗುರಪ್ಪನಪಾಳ್ಯದಲ್ಲಿ ತಡೆಗೋಡೆ ಕುಸಿದು ಬಿದ್ದು, ಮನೆಗಳಿಗೆ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿರುವ ಎಲ್ಲಾ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಲಾಗುವುದು. ಹಾನಿ ಕುರಿತು ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚನೆ ನೀಡಿದ್ದೇನೆ.

• ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್ಗಳಲ್ಲಿ ನಿರ್ಮಾಣಕ್ಕೆ ಇನ್ನು ಮುಂದೆ ಅನುಮತಿ ನೀಡದಂತೆ ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಿದ್ದೇನೆ. 166 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ತಗ್ಗು ಪ್ರದೇಶಗಳೆಂದು ಗುರುತಿಸಿ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದೆ.

• ಬೆಂಗಳೂರಿನಲ್ಲಿ 2022ರಲ್ಲಿ 299ಮಿಮೀ ಮಳೆಯಾಗಿತ್ತು. 10 ವರ್ಷಗಳಲ್ಲಿ ಇದು ಎರಡನೇ ಬಾರಿ ಹೆಚ್ಚಿನ ಮಳೆಯಾಗಿದೆ. ಮೇ. 19 ರಂದು ಮಧ್ಯರಾತ್ರಿ 132 ಮಿಮೀ ಮಳೆ ದಾಖಲಾಗಿದೆ.

• ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ ರಾಜಕಾಲುವೆಯಲ್ಲಿ ಲೈನಿಂಗ್ ಕೆಲಸ ಮುಗಿದಿದೆ. 125 ಕಿಮೀ ರಾಜಕಾಲುವೆ ಕಾಮಗಾರಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು. ಇನ್ನುಳಿದ 173 ಕಿಮೀ ರಾಜಕಾಲುವೆ ಅಭಿವೃದ್ಧಿಗೆ ವಿಶ್ವಬ್ಯಾಂಕ್ನಿಂದ 2 ಸಾವಿರ ಕೋಟಿ ರೂ. ಸಾಲ ಪಡೆದು ಕಾಮಗಾರಿಗೆ ಕೈಗೊಂಡಿದ್ದೇವೆ. ಇದರ ಟೆಂಡರ್ ಮುಗಿದಿದ್ದು, ಮೂರು ವರ್ಷಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದ್ದೇವೆ.

• ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಮುಲಾಜಿಲ್ಲದೆ ತೆರವುಗೊಳಿಸಲು ಸ್ಪಷ್ಟ ಸೂಚನೆ ನೀಡಿದ್ದೇವೆ.

• ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ