LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯೂಥ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್ಎಸ್ ಮಂಜುನಾಥ್ ಆಯ್ಕೆ

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅತ್ಯಂತ ಹೆಚ್ವು ಮತಗಳನ್ನು ಗಳಿಸಿದ್ದ ಎಚ್.ಎಸ್.ಮಂಜುನಾಥ್ ಅವರನ್ನು ಅಧ್ಯಕ್ಷರನ್ನಾಗಿ ಅಧಿಕೃತ ಘೋಷಣೆ ಮಾಡಲಾಗಿದೆ.

ಅಧ್ಯಕ್ಷರ ಅಯ್ಕೆ ಸಂಬಂಧ ಅತ್ಯಧಿಕ ಮತಗಳನ್ನು ಗಳಿಸಿರುವ ಎಚ್.ಎಸ್. ಮಂಜುನಾಥ್, ದೀಪಿಕಾ ರೆಡ್ಡಿ, ಅಬ್ದುಲ್ ದೇಸಾಯಿಯವರನ್ನು ಹೊಸದಿಲ್ಲಿಯಲ್ಲಿರುವ ಯುವ ಕಾಂಗ್ರೆಸ್ ಕಚೇರಿಗೆ ಆಹ್ವಾನಿಸಿ ಸಂದರ್ಶನ ನಡೆಸಲಾಗಿತ್ತು. ಯುವ ಕಾಂಗ್ರೆಸ್ ರಾಷ್ಟ್ರೀಯಾಧ್ಯಕ್ಷ ಉದಯ್ ಬಾನು ಚಿಬ್ಬು ನೇತೃತ್ವದಲ್ಲಿ ಸಭೆ ನಡೆಸಿ ಅಧಿಕೃತ ಘೋಷಣೆ ಮಾಡಲಾಗಿದೆ.

ಎಲೆಕ್ಷನ್ ಬಿಗ್ ಫೈಟ್ನಲ್ಲಿ ಗೆದ್ದು ಬೀಗಿದ ಮಂಜುನಾಥ್:  ಪ್ರತಿಸ್ಪರ್ಧಿ ದೀಪಿಕಾ ರೆಡ್ಡಿಗೆ ಸೋಲುಣಿಸಿದ HS ಮಂಜುನಾಥ್

ರಾಷ್ಟ್ರ ರಾಜಕಾರಣಕ್ಕೆ ಪುತ್ರಿ, ರಾಜ್ಯಕ್ಕೆ ಸತೀಶ್ ಪುತ್ರರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಕುತೂಹಲಕ್ಕೆ ತೆರೆಬಿದ್ದಿದೆ. ಜಿದ್ದಾಜಿದ್ದಿನ ಕದನದಲ್ಲಿ ಮಂಜುನಾಥ್ ಗೆದ್ದು ಬೀಗಿದ್ದಾರೆ. ಪಕ್ಷದ ಸಂಘಟನೆ ಮೂಲಕ ಜಾರಕಿಹೊಳಿ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಆಗಿದೆ. ಪಕ್ಷ ಸಂಘಟನೆಯ ಜೊತೆಗೆ ಯುವ ಮತದಾರರನ್ನ ಸೆಳೆಯುವ ಗುರುತರ ಜವಾಬ್ದಾರಿ ನೂತನ ಪದಾಧಿಕಾರಿಗಳ ಮೇಲಿದೆ.

ರಾಜ್ಯ ಯುವ ಕಾಂಗ್ರೆಸ್, ಬದಲಾವಣೆಗೆ ತೆರೆದುಕೊಂಡಿದೆ. ಯೂತ್ ಕಾಂಗ್ರೆಸ್ ನಾಯಕತ್ವ ಶಿಫ್ಟ್ ಆಗಿದೆ.. ಅಧ್ಯಕ್ಷ ಸ್ಥಾನದ ಕುತೂಹಲಕ್ಕೆ ತೆರೆ ಬಿದ್ದಿದ್ದು, ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷರಾಗಿ ಹೆಚ್.ಎಸ್. ಮಂಜುನಾಥ್ ಆಯ್ಕೆಯಾಗಿದ್ದಾರೆ. ಭಾರೀ ಪೈಪೋಟಿ ನಡುವೆ ಮಂಜುನಾಥ್ಗೆ ಪಟ್ಟ ಒಲಿದಿದೆ.

ರಾಜ್ಯ ಯೂತ್ ಕಾಂಗ್ರೆಸ್ಗೆ ಹೊಸ ಸಾರತಿ ಆಗಮನ!

ಯುವ ಕಾಂಗ್ರೆಸ್ಗೆ ಮಂಜುನಾಥ್ ಸಾರಥ್ಯ ಸಿಕ್ಕಿದೆ.. 2,77,000 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.. ಒಟ್ಟು 5,67,000 ಮತಗಳನ್ನ ಪಡೆದು ಗೆದ್ದಿರುವ ಮಂಜುನಾಥ್, 2,90,000 ಮತಗಳು ಪಡೆದ ಪ್ರತಿಸ್ಪರ್ಧಿ ದೀಪಿಕಾ ರೆಡ್ಡಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.. ಅಧ್ಯಕ್ಷ ಸ್ಥಾನಕ್ಕಾಗಿ ಬರೋಬ್ಬರಿ 13 ಮಂದಿ ಕಾಂಪಿಟೇಷನ್ನಲ್ಲಿದ್ರು..

ಯೂತ್ ಕಾಂಗ್ರೆಸ್ ಕ್ಯಾಪ್ಟನ್ ನಡೆದು ಬಂದ ಹಾದಿ 

NSUI ವಿದ್ಯಾರ್ಥಿ ಸಂಘಟನೆಯಿಂದ ರಾಜಕೀಯಕ್ಕೆ ಎಂಟ್ರಿಯಾದ ಮಂಜುನಾಥ್, ಕಾಂಗ್ರೆಸ್ನ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ರು.. ಎರಡು ಬಾರಿ NSUY ರಾಜ್ಯಾಧ್ಯಕ್ಷರಾಗಿದ್ದ ಮಂಜುನಾಥ್, ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಮತ್ತು ಕಾರ್ಯಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.. ಪ್ರಬಲ ಒಕ್ಕಲಿಗ ಸಮುದಾಯ, ಮಂಜುನಾಥ್ಗೆ ಡಿಸಿಎಂ ಡಿಕೆಶಿಯ ಕೃಪಕಟಾಕ್ಷ ಇದೆ..

ರಾಷ್ಟ್ರ ರಾಜಕಾರಣಕ್ಕೆ ಪುತ್ರಿ, ರಾಜ್ಯಕ್ಕೆ ಸತೀಶ್ ಪುತ್ರ

ರಾಜ್ಯ ರಾಜಕಾರಣಕ್ಕೆ ಸತೀಶ್ ಪುತ್ರ ರಾಹುಲ್ ಜಾರಕಿಹೊಳಿ ಎಂಟ್ರಿ ಆಗಿದೆ.. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗೆಲುವು ದಾಖಲಿಸಿದ್ದಾರೆ.. 1.80 ಲಕ್ಷ ಮತ ಪಡೆದು ಗೆದ್ದು ಬೀಗಿದ್ದಾರೆ.. ಗೋಕಾಕ್ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ..

ಆಗಸ್ಟ್ 20ರಿಂದ ಸೆಪ್ಟೆಂಬರ್ 22ರ ವರೆಗೆ ನಡೆದಿದ್ದ ಯೂಥ್ ಕಾಂಗ್ರೆಸ್ ಚುನಾವಣೆಯಲ್ಲಿ ರಾಜ್ಯಾದ್ಯತ ಮತದಾನ ನಡೆದಿತ್ತು.. ಅದರ ಫಲಿತಾಂಶ ನಿನ್ನೆ ಪ್ರಕಟವಾಗಿದೆ.. ಯುವ ಕಾಂಗ್ರೆಸ್ ಸಾರಥ್ಯ ಪಡೆದಿರುವ ಮಂಜುನಾಥ್ ತಂಡಕ್ಕೆ ಸಾಕಷ್ಟು ಸವಾಲುಗಳಿವೆ.. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯುವ ಮತದಾರರನ್ನ ಸೆಳೆಯುವ ಕೆಲಸ, ಗ್ಯಾರಂಟಿ ಯೋಜನೆಗಳ ಪ್ರಚಾರ, ಯುವ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ವಿಚಾರಗಳನ್ನ ಪ್ರಚಾರ ನಡೆಸಬೇಕಿದೆ. ಯುವ ಕಾಂಗ್ರೆಸ್ಗೆ ಹೊಸ ಚೈತನ್ಯ ನೀಡುವಲ್ಲಿ, ಯುವ ಕಾಂಗ್ರೆಸ್ ಪದಾಧಿಕಾರಿಗಳ ಮಂಜುನಾಥ್ ತಂಡ ಯಾವ ರೀತಿ ಕ್ರಿಯಾಶೀಲವಾಗಿ ಕೆಲಸ ನಿರ್ವಹಿಸಲಿದೆ ಅನ್ನೋದು ಕಾದು ನೋಡಬೇಕೀದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!