LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೃಹತ್ ‘ಸೇವಾ ಜ್ಯೋತಿ ಯಾತ್ರೆ’- ಬೈಕ್ ರಾಲಿಗೆ ಚಾಲನೆ – ‘ವಿಕಸಿತ ಭಾರತ – ಸಂಕಲ್ಪ ಸಭೆ’ ಯಶಸ್ವಿ

ಬೆಂಗಳೂರು: ಭಾರತೀಯ ಜನತಾ ಪಾರ್ಟಿ  ‘ಸೇವಾ ಜ್ಯೋತಿಯಿಂದ ದೇಶ ಸೇವೆ – 25 ವರ್ಷಗಳು’ ಸಂಭ್ರಮದ ಅಂಗವಾಗಿ ಬೃಹತ್ ‘ಸೇವಾ ಜ್ಯೋತಿ ಯಾತ್ರೆ’ ಹಾಗೂ ಬೈಕ್ ರಾಲಿಯನ್ನು ಅತ್ಯಂತ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಯಿತು.  news_1791483779_2_640.webp

ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಉಪಾಧ್ಯಕ್ಷರು ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ನಾಯಕರಾದ ಶ್ರೀ ಕೆ. ಉಮೇಶ್ ಶೆಟ್ಟಿ ಅವರ ನೇತೃತ್ವದಲ್ಲಿ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ, ಶಾಸಕ ಶ್ರೀ ಕೆ.ಸಿ. ರಾಮಮೂರ್ತಿ, ಶ್ರೀ ರವೀಂದ್ರ ಹಾಗೂ ಇತರ ಗಣ್ಯರು ಜತೆಯಾಗಿ ಬೈಕ್ ರಾಲಿಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.  

​ಗೋವಿಂದರಾಜನಗರದ  ಉದ್ಯಾನವನ, ಬಿ.ಜೆ.ಎಸ್ ಕ್ರೀಡಾಂಗಣದ ಹತ್ತಿರದಿಂದ ಆರಂಭವಾದ ಈ ಬೃಹತ್ ಬೈಕ್ ರಾಲಿಗೆ ಹಾಗೂ ‘ಸೇವಾ ಜ್ಯೋತಿ ಯಾತ್ರೆ’ಗೆ ಚಾಲನೆ ನೀಡಿದ ಬಳಿಕ, ಯಾತ್ರೆಯು ಶಂಕರಮಠ ಸ್ವಾಮಿ ವಿವೇಕಾನಂದ ಕ್ರೀಡಾಂಗಣದವರೆಗೆ ಸಂಚರಿಸಿತು. ಯಾತ್ರೆಯುದ್ದಕ್ಕೂ ಪಕ್ಷದ ಧ್ವಜಗಳನ್ನು ಹಿಡಿದು, ಬೈಕ್‌ಗಳಲ್ಲಿ ಉತ್ಸಾಹದಿಂದ ಸಾಗಿದ ಸಾವಿರಾರು ಕಾರ್ಯಕರ್ತರು ಜೈಕಾರ ಕೂಗುತ್ತಾ ಸಂಭ್ರಮಿಸಿದರು.    

ವಿಕಸಿತ ಭಾರತ – ಸಂಕಲ್ಪ ಸಭೆ’ಯಲ್ಲಿ ದೇಶದ ಅಭಿವೃದ್ಧಿ ಹಾಗೂ ಪಕ್ಷದ 25 ವರ್ಷಗಳ ಜನಸೇವೆಯ ಹೆಜ್ಜೆಗುರುತುಗಳನ್ನು ಸ್ಮರಿಸಲಾಗಿದ್ದು, ನರೇಂದ್ರ ಮೋದಿ ಅವರ ಆಡಳಿತ ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕುರಿತು ಮುಖಂಡರು ಮಾರ್ಗದರ್ಶನ ನೀಡಿದರು.news_1791483777_0_169.webp

ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೃಹತ್ ‘ಸೇವಾ ಜ್ಯೋತಿ ಯಾತ್ರೆ’- ಬೈಕ್ ರಾಲಿಗೆ ಚಾಲನೆ – ‘ವಿಕಸಿತ ಭಾರತ – ಸಂಕಲ್ಪ ಸಭೆ’ ಯಶಸ್ವಿಸಾರ್ವಜನಿಕ ಸಾರಿಗೆಯಲ್ಲಿ ನಾವೀನ್ಯತೆ: ಬಿಎಂಟಿಸಿಗೆ ‘ಚೇಂಜ್ ಮೇಕರ್ ಅವಾರ್ಡ್ಹೊಂಡಾ ಕಾರ್ಸ್ ಇಂಡಿಯಾದಿಂದ ಹೊಸ ಹೊಂಡಾ ಎಲಿವೇಟ್ ಬಿಡುಗಡೆಸ್ಟಿಂಗ್ ಬಗ್ಗೆ ಯಾರಿಗೆ ಜ್ಞಾನ ಜಾಸ್ತಿ ಅನ್ನೋದು ಜಗತ್ತಿಗೆ ಗೊತ್ತಿದೆ - ನಿಖಿಲ್ ಕುಮಾರಸ್ವಾಮಿ ಟಾಂಗ್50 ವರ್ಷಗಳಿಂದ ದಲಿತರ ಸಮಸ್ಯೆ ಈಡೇರಿಲ್ಲ ನೀವಾದರೂ ಈಡೇರಿಸ್ತೀರಾ? ನವದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರತಿಭಟನೆಯಲ್ಲಿ ದೆಹಲಿ ಪೊಲೀಸರಿಂದ ಗುಂಡಗಿರಿ?ಬ್ಲಾಕ್‌, ಮಂಡಲ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು; ‘ಮತ ಉಳಿಸಿ–ದೇಶ ಉಳಿಸಿ’ ಹೋರಾಟ ತೀವ್ರಗೊಳಿಸಲು ನಿರ್ಧಾರಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನ ಬಳಸಿ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಸ್ಥಿತಿಗತಿ ಸಮೀಕ್ಷೆಎಸ್.ಬಿಂಗೀಪುರದಲ್ಲಿ ಪಾಲಿಕೆಯ ಪ್ರಾಣಿ ಚಿತಾಗಾರ ಸ್ಥಾಪನೆಗೆ ಯೋಜನೆ: ಆಯುಕ್ತ ಕೆ.ಎನ್. ರಮೇಶ್ಟಿ.ಡಿ.ಆರ್. ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾಹಿತಿ/ತಾಂತ್ರಿಕ ಕಾರ್ಯಾಗಾರ