LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐಎಎಸ್ ಅಧಿಕಾರಿಗಳು ಬಿಎಂಟಿಸಿ ಸಂಸ್ಥೆಗೆ ಭೇಟಿ

ಬೆಂಗಳೂರು: 2023 ರ ಸಾಲಿನ ಭಾ.ಆ.ಸೇ (IAS) ಅಧಿಕಾರಿಗಳು ಭಾರತ ದರ್ಶನ ಅಧ್ಯಯನದ ಪ್ರವಾಸದಡಿಯಲ್ಲಿ ಬೆಂ.ಮ.ಸಾ.ಸಂಸ್ಥೆಗೆ ಭೇಟಿ ನೀಡಿ  ಸಾರಿಗೆ ಸಂಸ್ಥೆಯ ವಿಚಾರಗಳ ಬಗ್ಗೆ ಮಾಹಿತಿ  ತಿಳಿದುಕೊಂಡರು.               

ಲಾಲ್ ಬಹದ್ದೂರ್ ಶಾಸ್ತ್ರಿ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ 2023 ರ ಸಾಲಿನ ಭಾ.ಆ.ಸೇವೆ ಅಧಿಕಾರಿಗಳು ಭಾರತ ದರ್ಶನ ಅಧ್ಯಯನದ ಪ್ರವಾಸದಡಿಯಲ್ಲಿ ಬೆಂ.ಮ.ಸಾ.ಸಂಸ್ಥೆಗೆ ಭೇಟಿ ನೀಡಿರುತ್ತಾರೆ.ಈ ಸಂದರ್ಭದಲ್ಲಿ ಬೆಂ.ಮ.ಸಾ.ಸಂಸ್ಥೆಯಲ್ಲಿ ಅಳವಡಿಸಿಕೊಂಡಿರುವ ಮಾದರಿ ಉಪಕ್ರಮಗಳು, ಸಂಸ್ಥೆಯ ಇತಿಹಾಸ, ಶಕ್ತಿ ಯೋಜನೆಯ ಅನುಷ್ಠಾನ, ಪ್ರಯಾಣಿಕರ ಪಾಸ್ ವ್ಯವಸ್ಥೆ, ಆರ್ಥಿಕ ಕಾರ್ಯಕ್ಷಮತೆ, ಸಂಚಾರ ಆದಾಯ, ಕಾರ್ಯಚರಣೆಗಳ ವೆಚ್ಚ, GCC ಮಾದರಿಯಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಹಸಿರು ತಂತ್ರಜ್ಞಾನದ ಕಾರ್ಯಚರಣೆ ಬಗ್ಗೆ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್.ಆರ್, ಭಾಆಸೇ., ರವರು ಪ್ರಾತ್ಯಕ್ಷತೆ ನೀಡಿ ತರಬೇತಿ ಅಧಿಕಾರಿಗಳೊಂದಿಗೆ ಸವಿವರವಾಗಿ ಚರ್ಚಿಸಿರುತ್ತಾರೆ, ತದನಂತರ ಸಂಸ್ಥೆಯ ಮಾಹಿತಿ ಮತ್ತು ತಂತ್ರಜ್ಞಾನ ಶಾಖೆಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಸಂಸ್ಥೆಯ ನೂತನ ನಿರ್ದೇಶಕರಾದ (ಮಾಹಿತಿ & ತಂತ್ರಜ್ಞಾನ) ಶಿಲ್ಪಾ.ಎಂ, ಭಾ.ಆ.ಸೇ.,  ಜಿ.ಟಿ.ಪ್ರಭಾಕರ್ ರೆಡ್ಡಿ, ಮುಖ್ಯ ಸಂಚಾರ ವ್ಯವಸ್ಥಾಪಕರು (ಆಚರಣೆ), ಕೆ.ಜಿ.ಸದಾನಂದ, ಮುಖ್ಯ ಗಣಕ ವ್ಯವಸ್ಥಾಪಕರು, ಕೆ.ವಿ.ಮಂಜುನಾಥ್, ಉಗ್ರಾಣ ಮತ್ತು ಖರೀದಿ ನಿಯಂತ್ರಣಾಧಿಕಾರಿ ಮತ್ತು ನಿಗಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಂ.ಮ.ಸಾ.ಸಂಸ್ಥೆಯು ಈವರೆವಿಗೂ ಹಲವು ಭಾ.ಆ.ಸೇ., ಕ.ಆ.ಸೇ. ತಂಡಗಳು ಮತ್ತು ಇತರೇ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಅಧಿಕಾರಿಗಳಿಗೆ ತರಬೇತಿಯನ್ನು ಆಯೋಜಿಸಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ